ಎರಡನೇ ಬಾರಿಗೆ ಪ್ರಧಾನಿಯಾಗಿ ಮೋದಿ ಇಂದು ಪ್ರಮಾಣ ವಚನ
ಮೈಸೂರು

ಎರಡನೇ ಬಾರಿಗೆ ಪ್ರಧಾನಿಯಾಗಿ ಮೋದಿ ಇಂದು ಪ್ರಮಾಣ ವಚನ

May 30, 2019

ನವದೆಹಲಿ: ನರೇಂದ್ರ ಮೋದಿ ಅವರು ಎರಡನೇ ಬಾರಿ ಪ್ರಧಾನಿಯಾಗುವ ಕ್ಷಣಕ್ಕೆ ಸಾಕ್ಷಿ ಯಾಗಲು ರಾಷ್ಟ್ರಪತಿ ಭವನ ಸಜ್ಜಾಗಿದೆ. ರಾಷ್ಟ್ರಪತಿ ಭವನದ ಹೊರಾಂಗಣದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ನಾಳೆ ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ರೀತಿ ಹೊರಾಂಗಣ ದಲ್ಲಿ ಪ್ರಮಾಣ ಸ್ವೀಕರಿಸುತ್ತಿರುವ ಮೂರನೇ ಪ್ರಧಾನಿ ಎಂಬ ಗರಿಮೆಗೆ ಮೋದಿ ಪಾತ್ರರಾಗುತ್ತಿದ್ದಾರೆ.

ಮೊದಲು ನೆಹರು, ಚಂದ್ರಶೇಖರ್ ರಾಷ್ಟ್ರಪತಿ ಭವನದ ಹೊರಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಸಾಮಾನ್ಯವಾಗಿ ಪ್ರಧಾನಮಂತ್ರಿಗಳ ಪ್ರಮಾಣ ವಚನ ದರ್ಬಾರ್ ಹಾಲ್‍ನಲ್ಲಿ ನಡೆಯು ತ್ತದೆ. ರೈಸಿನಾ ಹಿಲ್‍ನ ಪ್ರಥಮ ಪ್ರಜೆಯ ನಿವಾಸದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಇದೇ ಮೊದಲ ಬಾರಿಗೆ 6 ಸಾವಿರ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ.

ಬಾಂಗ್ಲಾ ಅಧ್ಯಕ್ಷ ಅಬ್ದುಲ್ ಹಮೀದ್, ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ಕಿಗಿಸ್ಥಾನದ ಅಧ್ಯಕ್ಷ ಸೂರ್ನ್‍ಬೇ ಜೀನ್ ಬೆಕಾವ್, ಮಯನ್ಮಾರ್ ಅಧ್ಯಕ್ಷ ಯೂ ವಿನ್ ಮಿಂಟ್, ಮಾರಿ ಷಸ್ ಪ್ರಧಾನಿ ಪರವಿಂದ್ ಕುಮಾರ್ ಜಗನ್ನಾಥ್, ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ, ಭೂತಾನ್ ಪ್ರಧಾನಿ ಲೊಟೇ ತ್ಸೆರಿಂಗ್, ಥೈಲ್ಯಾಂಡ್ ಕೃಷಿ ಸಚಿವ ಬೂನ್‍ರಾಚ್ ಆಗಮಿಸಲಿದ್ದಾರೆ.

ಇವರಲ್ಲದೇ ಹಲವು ದೇಶಗಳ ರಾಜತಾಂತ್ರಿಕರು, ಮಾಜಿ ಪ್ರಧಾನಿಗಳು, ವಿವಿಧ ರಾಜ್ಯಗಳ ಮುಖ್ಯ ಮಂತ್ರಿಗಳು, ಸಾಹಿತಿಗಳು, ಚಿತ್ರರಂಗ ಮತ್ತು ಕ್ರೀಡಾ ಲೋಕದ ಗಣ್ಯರು ನರೇಂದ್ರ ಮೋದಿ ಪ್ರಮಾಣಕ್ಕೆ ಸಾಕ್ಷಿಯಾಗಲಿದ್ದಾರೆ. ಈ ಬಾರಿ ಪಾಕ್ ಪ್ರಧಾನಿಗೆ ಮೋದಿ ಆಹ್ವಾನ ನೀಡಿಲ್ಲ. ವಿದೇಶಿ ಗಣ್ಯರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟೀ ಪಾರ್ಟಿ ಆಯೋಜಿ ಸಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎನ್‍ಡಿಎ ಮೈತ್ರಿ ಕೂಟ 353 ಸ್ಥಾನಗಳಲ್ಲಿ ಜಯಗಳಿಸಿ ಮತ್ತೆ ಪ್ರಚಂಡ ಬಹುಮತದೊಂದಿಗೆ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿದೆ. ಉತ್ತರಪ್ರದೇಶದಲ್ಲಿ ಬಿಜೆಪಿಯನ್ನು ಮಣಿಸಲು ಎಸ್‍ಪಿ, ಬಿಎಸ್‍ಪಿ ಮಹಾಘಟಬಂಧನ ಮಾಡಿಕೊಂಡಿದ್ದರೂ ಬಿಜೆಪಿಯ ನಾಗಾಲೋಟಕ್ಕೆ ತಡೆಯೊಡ್ಡಲು ಸಾಧ್ಯವಾಗಲಿಲ್ಲ. ಅಲ್ಲಿ 80 ಸದಸ್ಯರ ಪೈಕಿ ಬಿಜೆಪಿ ಹಾಗೂ ಎನ್ ಡಿ ಎ ಮೈತ್ರಿಕೂಟ ಈ ಬಾರಿ ಚುನಾವಣೆಯಲ್ಲಿ 62 ಸ್ಥಾನಗಳಲ್ಲಿ ಜಯ ಸಾಧಿಸಿತ್ತು.

ಸೋನಿಯಾ, ರಾಹುಲ್ ಭಾಗಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಅವರ ತಾಯಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ರಾಷ್ಟ್ರಪತಿ ಭವನದಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ ಸಹ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.
ದೀದಿ ಗೈರು: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಘನತೆ ಈಗ ಹಾಳಾಗಿರುತ್ತದೆ. ಅಲ್ಲೂ ರಾಜಕೀಯವಾಗಿ ತಮ್ಮ ವರ್ಚಸ್ಸು ಅಧಿಕಗೊಳಿಸುವ ಪ್ರಯತ್ನ ನಡೆಸಲಾ ಗುತ್ತಿದೆ. ಹೀಗಾಗಿ ಕಾರ್ಯಕ್ರಮಲ್ಲಿ ಪಾಲ್ಗೊಳ್ಳುವ ಇಚ್ಛೆ ಇಲ್ಲ ಎಂದು ಅವರು ಹೇಳಿಕೆ ನೀಡಿದ್ದಾರೆ.

Translate »