ಮೋದಿ ಅಲೆಗೆ ರಾಜ್ಯದಲ್ಲಿ ಕೊಚ್ಚಿ ಹೋದ ಕಾಂಗ್ರೆಸ್, ಜೆಡಿಎಸ್‍
ಮೈಸೂರು

ಮೋದಿ ಅಲೆಗೆ ರಾಜ್ಯದಲ್ಲಿ ಕೊಚ್ಚಿ ಹೋದ ಕಾಂಗ್ರೆಸ್, ಜೆಡಿಎಸ್‍

May 24, 2019

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸುನಾಮಿಗೆ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಧೂಳೀಪಟವಾಗಿದೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಪಕ್ಷೇತರರು ತಲಾ ಒಂದು ಸ್ಥಾನದಲ್ಲಿ ಗೆಲುವು ಹೊರತುಪಡಿಸಿದರೆ, ಉಳಿದ 25 ಕ್ಷೇತ್ರಗಳು ಬಿಜೆಪಿ ಪಾಲಾಗಿವೆ. ಮೋದಿ ಸುನಾಮಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇ ಗೌಡ, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಸಂಸದ ಕೆ.ಎಚ್. ಮುನಿ ಯಪ್ಪ, ಪಂಚಾಯತ್‍ರಾಜ್ ಸಚಿವ ಕೃಷ್ಣಭೈರೇಗೌಡ, ಹಾಲಿ ಸಂಸದ ಆರ್.ಧ್ರುವನಾರಾಯಣ್, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲುಂಡಿದ್ದಾರೆ. ಅಷ್ಟೇ ಅಲ್ಲ ಸಿಎಲ್‍ಪಿ ನಾಯಕ ಸಿದ್ದರಾಮಯ್ಯ ಅವರ ಯಾವ ಬೆಂಬಲಿಗರೂ ಗೆಲುವು ಸಾಧಿಸಿಲ್ಲ. ಸಚಿವ ಡಿ.ಕೆ.ಶಿವಕುಮಾರ್ ಸಹೋದರ, ಡಿ.ಕೆ. ಸುರೇಶ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮೂರನೇ ಬಾರಿಗೆ ಪುನರ್ ಆಯ್ಕೆಯಾಗಿದ್ದರೆ,ಉಳಿದ ಎಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳು ಸೋಲುಂಡಿದ್ದಾರೆ. ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸಲು ಜನಮತ ಪಡೆದಿದ್ದು, ಇದರಿಂದ ಜೆಡಿಎಸ್‍ನ ಬಾವುಟ ಸಂಸತ್ತಿನಲ್ಲಿ ಉಳಿಯುವಂತೆ ಮಾಡಿದ್ದಾರೆ.

ಜಿದ್ದಾಜಿದ್ದಿ ಕಣವಾಗಿದ್ದ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ, ನಿಖಿಲ್ ಕುಮಾರಸ್ವಾಮಿ ಅವರನ್ನು ಭಾರೀ ಅಂತರದಿಂದ ಪರಾಭವಗೊಳಿಸಿ, ಇತ್ತೀಚಿನ ದಿನಗಳಲ್ಲಿ ಕರ್ನಾಟಕದಿಂದ ಮೊದಲ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಪ್ರವೇಶಿಸಲಿದ್ದಾರೆ. ಕೇಂದ್ರ ಸಚಿವ ರಮೇಶ್ ಜಿಗಜಿಣಗಿ, ಡಿವಿ ಸದಾನಂದಗೌಡ, ಅನಂತಕುಮಾರ್ ಹೆಗ್ಡೆ, ಶೋಭಾ ಕರಂದ್ಲಾಜೆ, ಪಿ.ಸಿ.ಗದ್ದಿಗೌಡರ್, ಸುರೇಶ್ ಅಂಗಡಿ, ಕರಡಿ ಸಂಗಣ್ಣ, ಶಿವಕುಮಾರ್ ಉದಾಸಿ, ಪಿ.ಸಿ.ಮೋಹನ್ ಬಿಜೆಪಿಯಿಂದ ಮತ್ತೆ ಎರಡು ಮೂರು ಐದನೇ ಬಾರಿಗೆ ಜಯ ಗಳಿಸಿದ್ದಾರೆ.

ಇವರಲ್ಲದೆ, ಪ್ರಹ್ಲಾದ್ ಜೋಷಿ, ಜಿ.ಎಸ್.ಸಿದ್ದೇಶ್ವರ್, ಬಿ.ವೈ.ರಾಘವೇಂದ್ರ, ನಳೀನ್ ಕುಮಾರ್ ಕಟೀಲ್, ಭಗವಂತ ಖೂಬಾ, ಪ್ರತಾಪ್ ಸಿಂಹ ಪುನರ್ ಆಯ್ಕೆಗೊಂಡಿ ದ್ದಾರೆ. ರಾಜ್ಯ ಬಿಜೆಪಿ ಉಪಾಧ್ಯಕ್ಷರೂ ಆದ ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್ ಚಾಮರಾಜನಗರದಲ್ಲಿ ರೋಚಕ ಗೆಲುವು ದಾಖಲಿಸಿದ್ದಾರೆ.

ಕೇಂದ್ರ ಸಚಿವರಾಗಿದ್ದ ದಿವಂಗತ ಅನಂತಕುಮಾರ್ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತ ಮತ್ತು ಯುವ ಪಡೆಯ ತೇಜಸ್ವಿ ಸೂರ್ಯ ಪ್ರಥಮ ಪ್ರಯೋಗದಲ್ಲಿ ಯಶಸ್ವಿಯಾಗಿದ್ದಾರೆ.

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಇದೇ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದರೆ, ಕೋಲಾರದಲ್ಲಿ ಸತತವಾಗಿ ಏಳು ಬಾರಿ ಲೋಕಸಭೆ ಪ್ರವೇಶಿಸಿದ ಮುನಿಯಪ್ಪ ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯ ಮುನಿಸ್ವಾಮಿ ದೊಡ್ಡ ಪ್ರಮಾಣದಲ್ಲಿ ಪರಾಭವಗೊಳಿಸಿ, ಮೊದಲ ಬಾರಿಗೆ ಸಂಸತ್ ಭವನದ ಮೆಟ್ಟಿಲು ಹತ್ತಿದ್ದಾರೆ. ಕಳೆದ ಏಳು ತಿಂಗಳ ಹಿಂದೆಯಷ್ಟೇ ಬಳ್ಳಾರಿಯಲ್ಲಿ ನಡೆದ ಉಪ ಚುನಾವಣೆಯಲ್ಲಿ ಎರಡೂವರೆ ಲಕ್ಷ ಮತಗಳ ಅಂತರದಿಂದ ಲೋಕಸಭೆ ಪ್ರವೇಶಿಸಿದ್ದ, ವಿ.ಎಸ್. ಉಗ್ರಪ್ಪ, ಈ ಚುನಾವಣೆಯಲ್ಲಿ ದೇವೇಂದ್ರಪ್ಪ ಅವರಿಂದ ಪರಾಭವಗೊಂಡಿದ್ದಾರೆ. ಸೋಲಿಲ್ಲದ ಸರದಾರ ಎಂದೇ ಬಿರುದು ಪಡೆದಿದ್ದ ದಲಿತ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ಶಿಷ್ಯ ಡಾ. ಉಮೇಶ್ ಜಾಧವ್ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿ, ಲೋಕಸಭೆ ಪ್ರವೇಶಿಸಿದ್ದಾರೆ. ರಾಜಕೀಯವಾಗಿ ಖರ್ಗೆ ಅವರ ವಿರುದ್ದ ತೊಡೆತಟ್ಟಿ, ಕಾಂಗ್ರೆಸ್ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಲೋಕಸಭೆ ಕಣಕ್ಕಿಳಿದ ಜಾಧವ್ ಗೆಲುವಿನೊಂದಿಗೆ ದಾಖಲೆ ನಿರ್ಮಾಣ ಮಾಡಿದ್ದಾರೆ. ಖರ್ಗೆ ಒಂಭತ್ತು ಬಾರಿ ವಿಧಾನಸಭೆಗೂ, ಮೂರು ಭಾರಿ ಲೋಕಸಭೆಗೆ ಪ್ರವೇಶ ಮಾಡಿ, ಎಂದೂ ಸೋಲು ಕಂಡಿರಲಿಲ್ಲ. ಆದರೆ ಮೋದಿಯ ಅಲೆಗೆ ಅವರೂ

Translate »