ಕೊರೊನಾ ಸೋಂಕಿತರ ಆರೈಕೆಗೆ ನಿಗಾ ವಹಿಸಿ
ಕೊಡಗು

ಕೊರೊನಾ ಸೋಂಕಿತರ ಆರೈಕೆಗೆ ನಿಗಾ ವಹಿಸಿ

April 27, 2021

ಮಡಿಕೇರಿ ಏ.26-ಜಿಲ್ಲೆಯಲ್ಲಿ ದಿನ ದಿಂದ ದಿನಕ್ಕೆ ಕೊರೊನಾ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 5 ಕೋವಿಡ್ ಆರೈಕೆ ಕೇಂದ್ರಗಳನ್ನು ತೆರೆಯ ಲಾಗಿದೆ. ನೋಡಲ್ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಸೋಮವಾರ ಕೋವಿಡ್-19ರ ಸೋಂಕು ನಿಯಂತ್ರಣ ಮತ್ತು ಸೋಂಕಿತರ ಚಿಕಿತ್ಸೆಗೆ ಸಂಬಂಧಿಸಿದಂತೆ ಕೈಗೊಂಡ ಮುಂಜಾ ಗ್ರತಾ ಕ್ರಮಗಳ ಕುರಿತು ನಡೆದ ವೈದ್ಯರು ಮತ್ತು ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ಆರೈಕೆ ಕೇಂದ್ರಗಳಲ್ಲಿನ ಸೋಂಕಿ ತರಿಗೆ ಊಟ, ಬಿಸಿ ನೀರು, ಅಗತ್ಯ ಮೂಲ ಸೌಕರ್ಯ ಸಮಸ್ಯೆ ಉಂಟಾಗದಂತೆ ನೋಡಿ ಕೊಳ್ಳಬೇಕು. ಸೋಂಕಿತರು ಸಮಯ ಕಳೆಯಲು ಪುಸ್ತಕಗಳು, ದಿನಪತ್ರಿಕೆಗಳು ಹಾಗೂ ಒಳಾಂಗಣ ಆಟದ ಸಾಮಗ್ರಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಶುಚಿತ್ವ ಕಾಪಾಡಬೇಕು. ವ್ಯವಸ್ಥಿತವಾಗಿ ಸ್ಯಾನಿಟೈಸ್ ಮಾಡಬೇಕು. ಯಾವುದೇ ರೀತಿಯ ದೂರು ಬರದಂತೆ ಕಾರ್ಯ ನಿರ್ವಹಿಸಿ ಎಂದು ತಿಳಿಸಿದರು.

ಕಂಟೈನ್‍ಮೆಂಟ್ ವಲಯಗಳ ನಿರ್ವಹಣೆ ಉತ್ತಮವಾಗಿದ್ದು, ಹೆಚ್ಚಿನ ಗಮನಹರಿಸ ಬೇಕು. ಕೋವಿಡ್ ಸಂಬಂಧ ಅಂಕಿ ಅಂಶಗಳ ನಿಖರ ಮಾಹಿತಿ ದೊರಕುವಂತಾ ಗಬೇಕು. ಕೆಲವೊಂದು ಕಂಟೈನ್‍ಮೆಂಟ್ ವಲಯಗಳಲ್ಲಿ ಸರಿಯಾಗಿ ಪೋಸ್ಟರ್ ಅಂಟಿಸದಿರುವುದು ಗಮನಕ್ಕೆ ಬಂದಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ತ್ವರಿತವಾಗಿ ಪತ್ತೆ ಹಚ್ಚುವ ಕಾರ್ಯವಾಗ ಬೇಕು. 30 ಜನರಿಗೆ ಒಬ್ಬರಂತೆ ಸಂಪರ್ಕ ಪತ್ತೆಹಚ್ಚುವ ಕಾರ್ಯ ನಡೆಸಬೇಕು. ಸರ್ಕಾರದ ಮಾರ್ಗಸೂಚಿಯನ್ವಯ ಕೋವಿಡ್ ಪರೀಕ್ಷೆಗಳ ಗುರಿ ಸಾಧಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಾಕೀತು ಮಾಡಿದರು.

ಕೋವಿಡ್ ಆರೈಕೆ ಕೇಂದ್ರದಲ್ಲಿರುವ ಬೆಡ್‍ಗಳ ಲಭ್ಯತೆ ಬಗ್ಗೆ ಪ್ರತಿದಿನ ಮಾಹಿತಿ ಒದಗಿಸಬೇಕು. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಹಾಗೂ ಕೋವಿಡ್ ಆರೈಕೆ ಕೇಂದ್ರದಲ್ಲಿರುವವರಿಗೆ ಕಾಲ ಕಾಲಕ್ಕೆ ವೈದ್ಯರು ತಪಾಸಣೆ ನಡೆಸಬೇಕು. ಹೋಂ ಐಸೋಲೇಷನ್‍ನಲ್ಲಿ ಇರುವವರ ಆರೋಗ್ಯದ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಾ ಗದಂತೆ ಎಚ್ಚರ ವಹಿಸಬೇಕು. ಆಮ್ಲಜನಕ ಪೂರೈಕೆ ನೋಡಲ್ ಅಧಿಕಾರಿಯನ್ನಾಗಿ ಔಷಧ ನಿಯಂತ್ರಣ ಅಧಿಕಾರಿಯನ್ನು ನೇಮಿಸಿದ್ದು, ಅವರು ಇದರ ಮೇಲ್ವಿ ಚಾರಣೆ ನಡೆಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗ ವೀರ, ಕೊಡಗು ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ.ಕಾರ್ಯಪ್ಪ, ಕೊಡಗು ವೈದ್ಯಕೀಯ ಕಾಲೇಜು ಅಧೀಕ್ಷಕ ಡಾ.ಲೋಕೇಶ್, ಸಮುದಾಯ ಆರೋಗ್ಯಾ ಧಿಕಾರಿ ಡಾ.ಮಹೇಶ್, ಸ್ಥಾನೀಯ ವೈದ್ಯಾಧಿ ಕಾರಿ ಡಾ.ರೂಪೇಶ್, ಡಾ.ಆನಂದ ಜಿಲ್ಲಾಧಿಕಾರಿಗಳಿಗೆ ಹಲವು ಮಾಹಿತಿ ನೀಡಿದರು. ಜಿಪಂ ಸಿಇಓ ಭನ್ವರ್ ಸಿಂಗ್ ಮೀನಾ, ನೋಡಲ್ ಅಧಿಕಾರಿಗಳಾದ ಜಿಪಂ ಕಾರ್ಯದರ್ಶಿ ಲಕ್ಷ್ಮಿ, ಐಟಿಡಿಪಿ ಅಧಿಕಾರಿ ಶಿವಕುಮಾರ, ಸಮಾಜ ಕಲ್ಯಾಣಾಧಿ ಕಾರಿ ಶೇಖರ್, ಕೃಷಿ ಇಲಾಖೆ ಉಪನಿರ್ದೇಶಕ ರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಿಂಗರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೋ, ಕೂಡಿಗೆ ಡಯಟ್‍ನ ಪ್ರಾಂಶುಪಾಲ ಶ್ರೀಕಂಠಯ್ಯ ಇತರರಿದ್ದರು.

Translate »