ಮುಂಗಾರು ಆರಂಭವಾಗ್ತಿದೆ; ಅಗತ್ಯ ಎಲ್ಲಾ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ
News

ಮುಂಗಾರು ಆರಂಭವಾಗ್ತಿದೆ; ಅಗತ್ಯ ಎಲ್ಲಾ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ

May 24, 2023

ಬೆಂಗಳೂರು, ಮೇ 23(ಕೆಎಂಶಿ)-ರಾಜ್ಯದಲ್ಲಿ ಮುಂಗಾರು ಶುರುವಾಗುತ್ತಿದ್ದು, ರೈತರ ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿ ಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಧಾನಸೌûಧದಲ್ಲಿ ನಡೆದ ಜಿಲ್ಲಾಧಿಕಾರಿ ಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ನಾನು ಕೇವಲ ಸೂಚನೆ ಕೊಡೋದಿಲ್ಲ. ಎಚ್ಚರಿಕೆ ಕೊಡುತ್ತಿದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿ ದ್ದರೆ ಕಠಿಣ ಕ್ರಮ ಎದುರಿಸಲು ಸಿದ್ಧರಾಗಿ ಎಂದು ಎಚ್ಚರಿಕೆ ನೀಡಿದರು. ರಾಜ್ಯದ ಕೆಲವು ಭಾಗದಲ್ಲಿ ಈಗಾಗಲೇ ಮಳೆ ಪ್ರಾರಂಭ ವಾಗಿದ್ದು, ಬಿತ್ತನೆಯೂ ಕೆಲವೆಡೆ ಶುರು ವಾಗಿದೆ. ಜೂನ್‍ನಲ್ಲಿ ಮುಂಗಾರು ಪ್ರಾರಂಭವಾಗುತ್ತದೆ. ಏಪ್ರಿಲ್ ತಿಂಗಳಿನಲ್ಲಿಯೇ ಮುಂಗಾರು ಪೂರ್ವ ಮಳೆ ಪ್ರಾರಂಭವಾ ಗಿದೆ. ಭಾರೀ ಮಳೆ, ಗಾಳಿಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದು ಕೊಂಡಿದ್ದಾರೆ. ಅನಾಹುತಗಳಾಗಿವೆ. ಇಂತಹ ಅನಾಹುತ ಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ನಿಮ್ಮ ಬಳಿ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿ ನಂತಹ ಘಟನೆ ಮರುಕಳಿಸಬಾರದು ಎಂದು ಖಡಕ್ ಸೂಚನೆ ನೀಡಿದರು.

ಮಳೆ ಬಂದು ಮರಗಳು ಬಿದ್ದುಹೋದರೆ, ಕೂಡಲೇ ತೆರವುಗೊಳಿಸಬೇಕು. ವಿದ್ಯುತ್ ಕಂಬಗಳು ಬಿದ್ದು ಹೋದರೆ, ಟ್ರಾನ್ಸ್ ಫಾರ್ಮರ್ ಹಾಳಾಗಿದ್ದರೆ, ಸೇತುವೆಗಳು ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲವಾಗಿದ್ದರೆ ಈಗಲೇ ಅನಾಹುತ ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾ ಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ.

ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್‍ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ ಎಂದರು.

ಯಾವುದೇ ಕಾರಣಕ್ಕೂ ಕರ್ತವ್ಯ ಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೆ ಲೋಪ ಆಗಬಾರದು. ಲೋಪ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನರು ಸರ್ಕಾರ ದಿಂದ ಬದಲಾವಣೆ ಬಯಸಿದ್ದಾರೆ. ಸರ್ಕಾರಕ್ಕೆ ಹೊಸ ಇಮೇಜ್ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬಂದಿದೆ ಎಂಬ ಸಂದೇಶ ಹೋಗಬೇಕು. ಜಿಲ್ಲಾಧಿಕಾರಿಗಳು, ಸಿಇಓಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೆÇಲೀಸ್ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಆಲಸ್ಯ ಬಿಟ್ಟು ಕೆಲಸ ಮಾಡಿ. ಬಹಳ ಜಿಲ್ಲಾಧಿಕಾರಿಗಳು ತಾಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು. ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕಿಸಿ ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂಬ ನಿರ್ದೇಶನ ನೀಡಿದರು.

Leave a Reply

Your email address will not be published. Required fields are marked *

Translate »