ಮುಂಗಾರು ಆರಂಭ; ಪ್ರವಾಹ ಮುನ್ನೆಚ್ಚರಿಕೆಗೆ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಕೊಡಗು

ಮುಂಗಾರು ಆರಂಭ; ಪ್ರವಾಹ ಮುನ್ನೆಚ್ಚರಿಕೆಗೆ ಉಸ್ತುವಾರಿ ಕಾರ್ಯದರ್ಶಿ ಸೂಚನೆ

June 4, 2018

ಮಡಿಕೇರಿ: ಮುಂಗಾರು ಮಳೆಯಿಂದ ಉಂಟಾಗಬಹುದಾದ ಹಾನಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಕೈಗೊಂಡಿ ರುವ ಸಿದ್ಧತೆಗಳ ಬಗ್ಗೆ ಜಿಲ್ಲಾ ಧಿಕಾರಿ ಹಾಗೂ ನಾನಾ ಇಲಾಖೆ ಅಧಿಕಾರಿ ಗಳಿಂದ ಜಿಲ್ಲಾ ಉಸ್ತುವಾರಿ ಕಾರ್ಯ ದರ್ಶಿ ಜಿ.ಕಲ್ಪನಾ ಮಾಹಿತಿ ಪಡೆದರು. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾ ಉಸ್ತು ವಾರಿ ಕಾರ್ಯದರ್ಶಿ, ಜಿಲ್ಲೆಯಲ್ಲಿ ಈಗಾ ಗಲೇ ಮುಂಗಾರು ಮಳೆ ಆರಂಭವಾ ಗಿದ್ದು, ಪ್ರವಾಹ ಮುನ್ನೆಚ್ಚರಿಕೆ ಎದುರಿ ಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ವ್ಯಾಪಕ ಮಳೆಯಾದ ಸಂದ ರ್ಭದಲ್ಲಿ ಪ್ರವಾಹ, ಬರೆ ಕುಸಿತ, ಜನ, ಜಾನುವಾರು ಪ್ರಾಣಹಾನಿ, ವಾಸದ ಮನೆ ಹಾನಿ ಹಾಗೂ ಸಾರ್ವಜನಿಕ ಆಸ್ತಿ ಹಾನಿ ಯಾಗುವ ಸಾಧ್ಯತೆಗಳಿದ್ದು, ಅಂತಹ ಸಂದ ರ್ಭದಲ್ಲಿ ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳ ಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು.

ಕಳೆದ ವಾರ ಬಿದ್ದ ಮಳೆಯಿಂದ ಜಾನುವಾರು ಪ್ರಾಣ ಹಾನಿ, ವಾಸದ ಮನೆ ಹಾನಿಯಾಗಿದ್ದಲ್ಲಿ ತಕ್ಷಣವೇ ಪರಿಹಾರ ವಿತರಣೆ ಮಾಡಬೇಕು. ಯಾವುದೇ ಕಾರ ಣಕ್ಕೂ ವಿಳಂಬ ಅನುಸರಿಸಬಾರದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕಲ್ಪನಾ ಸೂಚನೆ ನೀಡಿದರು.

ವ್ಯಾಪಕ ಮಳೆ ಸಂದರ್ಭದಲ್ಲಿ ಸಾಂಕ್ರಾ ಮಿಕ ರೋಗಗಳು ಹರಡದಂತೆ ಮುನ್ನೆ ಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ನಿಫಾ ವೈರಸ್ ಹರಡದಂತೆ ಜಾಗೃತಿ ಮೂಡಿ ಸಬೇಕು. ಈ ಬಗ್ಗೆ ವಿಶೇಷ ಕಾರ್ಯ ಕ್ರಮಗಳನ್ನು ಆಯೋಜಿಸುವಂತೆ ಜಿ.ಕಲ್ಪನಾ ಸಲಹೆ ಮಾಡಿದರು. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾದರೂ ಸಹ, ಕುಡಿಯುವ ನೀರಿನ ಸಮಸ್ಯೆ ಅಲ್ಲಲ್ಲಿ ಕೇಳಿಬರುತ್ತದೆ. ಆದ್ದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಪ್ರವಾಹ ಮುನ್ನೆಚ್ಚರಿಕೆ ಸಂಬಂಧ ಜಿಲ್ಲಾ ಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಈಗಾಗಲೇ ಪೂರ್ವಭಾವಿ ಸಭೆ ನಡೆ ಸಲಾಗಿದ್ದು, ಕಂದಾಯ ಇಲಾಖೆ ಸೇರಿ ದಂತೆ ಲೋಕೋಪಯೋಗಿ ಪಂಚಾ ಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಅರಣ್ಯ, ಪೊಲೀಸ್, ಗೃಹ ರಕ್ಷಕ ದಳ ಹೀಗೆ ನಾನಾ ಇಲಾಖೆಗಳು ಪ್ರವಾಹ ಮುನ್ನಚ್ಚರಿಕೆ ಎದುರಿಸಲು ಅಗತ್ಯ ತಯಾರಿ ಮಾಡಿಕೊಂಡಿವೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಈ ಬಾರಿ ಸಕಾಲದಲ್ಲಿ ಮಳೆ ಬಂದಿರು ವುದರಿಂದ, ಜೊತೆಗೆ ಸಾಧಾರಣ ಮಳೆ ಯಾಗುತ್ತಿರುವುದರಿಂದ ಬೆಳೆಗಳಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಜಿಲ್ಲಾ ಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದರು.

ಪ್ರವಾಹ, ನೆರೆಯಿಂದ ಉಂಟಾಗುವ ಬಾಧಿತ ಪ್ರದೆಶಗಳಲ್ಲಿ ಸಂಪರ್ಕ ವ್ಯವಸ್ಥೆ ಗಾಗಿ ದೋಣ /ಬೋಟ್ ವ್ಯವಸ್ಥೆ ಮಾಡಿ ಕೊಳ್ಳಲಾಗಿದೆ. ಅತಿ ಮಳೆ, ಗಾಳಿಯಿಂದ ಮರ ಉರುಳಿ ಬಿದ್ದಲ್ಲಿ, ಭೂಕುಸಿತ ಉಂಟಾದಲ್ಲಿ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಸಹಾಯವಾಣ ತೆರೆಯಲಾಗಿದ್ದು, ಯಾವುದೇ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರು ಅತಿ ವೃಷ್ಠಿಯಿಂದ ಉಂಟಾಗುವ ಹಾನಿಯ ಬಗ್ಗೆ ದೂರವಾಣ ಸಂಖ್ಯೆ 08272-221077ಕ್ಕೆ ತೆರೆಯಲಾಗಿದೆ. ಹಾಗೆಯೇ ವಿದ್ಯುತ್ ವ್ಯತ್ಯಯ, ಕಂಬ ಬಿದ್ದಿರುವುದು ಮತ್ತಿತರ ಸಂಬಂಧ ಸೆಸ್ಕ್ ಸಹಾಯವಾಣ 1912 ಗೆ ಕರೆ ಮಾಡಿ ಮಾಹಿತಿ ನೀಡಲು ಮನವಿ ಮಾಡಲಾಗಿದೆ ಎಂದು ಜಿಲ್ಲಾ ಧಿಕಾರಿ ಅವರು ತಿಳಿಸಿದರು.

‘ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ತಹ ಶೀಲ್ದಾರರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ನಿಯೋಜಿಸಲಾಗಿದೆ ಎಂದು ಜಿಲ್ಲಾ ಧಿಕಾರಿ ಅವರು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಅವರು ಮಳೆಗಾಲದಲ್ಲಿ ಉಂಟಾಗುವ ಸಾಂಕ್ರಾ ಮಿಕ ರೋಗಗಳು ಹರಡದಂತೆ ಮುಂಜಾ ಗ್ರತೆ ವಹಿಸಲಾಗಿದೆ. ಈ ಸಂದರ್ಭದಲ್ಲಿ ಹರಡುವ ಕಾಯಿಲೆಗಳಿಗೆ ಔಷಧಿಗಳನ್ನು ಮೊದಲೇ ದಾಸ್ತಾನು ಇರಿಸಿಕೊಳ್ಳಲಾಗಿದೆ. ಹಾಗೆಯೇ ನಿಫಾ ವೈರಸ್ ಹರಡದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳ ಲಾಗಿದೆ ಎಂದು ಮಾಹಿತಿ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ. ಸತೀಶ್ ಕುಮಾರ್, ಉಪ ವಿಭಾಗಾ ಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ರಾಜು, ತಹಶೀಲ್ದಾರರಾದ ಶಾರದಾಂಬ, ಗೋವಿಂದ ರಾಜು, ಬಾಡ್ಕರ್, ಪಶುಪಾಲನಾ ಇಲಾ ಖೆಯ ಉಪ ನಿರ್ದೇಶಕರಾದ ಸುರೇಶ್, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚಂದ್ರಶೇಖರ, ಎಇಇ ಗಳಾದ ಇಬ್ರಾಹಿಂ, ಪಟ್ಟಣ ಪಂಚಾ ಯತ್ ಮುಖ್ಯಾಧಿಕಾರಿಗಳಾದ ಹೇಮ ಕುಮಾರ್, ಮತ್ತಿತರರು ಪ್ರವಾಹ ಮುನ್ನೆ ಚ್ಚರಿಕೆ ನಿಭಾಯಿಸುವ ಸಂಬಂಧ ಹಲವು ಮಾಹಿತಿ ನೀಡಿದರು.

ಸಭೆಗೂ ಮೊದಲು ಕತ್ತಲೆಕಾಡು ಗ್ರಾಮ ದಲ್ಲಿ ಮಳೆಯಿಂದ ಹಾನಿಯಾಗಿರುವ ವಾಸದ ಮನೆಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪರಿಶೀಲನೆ ಮಾಡಿದರು. ಈ ಸಂಬಂಧ ಕೂಡಲೇ ವರದಿ ಕಳುಹಿಸಿ ಕೊಡುವಂತೆ ಸಂಬಂಧಪಟ್ಟ ಅಧಿಕಾರಿ ಗಳಿಗೆ ನಿರ್ದೇಶನ ನೀಡಿದರು.

Translate »