ರಾಜ್ಯದಲ್ಲಿ ಬಿರುಸುಗೊಂಡ ಮುಂಗಾರು: ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
ಮೈಸೂರು

ರಾಜ್ಯದಲ್ಲಿ ಬಿರುಸುಗೊಂಡ ಮುಂಗಾರು: ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

July 9, 2020

ಬೆಂಗಳೂರು,ಜು.8-ರಾಜ್ಯದ ಕರಾವಳಿ ಹಾಗೂ ಒಳನಾಡಿನಲ್ಲಿ ಮುಂಗಾರು ಬಿರುಸು ಗೊಂಡಿರುವುದರಿಂದ ಜುಲೈ 9 ಮತ್ತು 10 ರಂದು ಈ ಭಾಗದ ಬಹುತೇಕ ಪ್ರದೇಶ ಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾ ಕಾರ ಮಳೆಯಾಗುವ ನಿರೀಕ್ಷೆಯಿದ್ದು, ಎರಡೂ ದಿನಗಳವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಿಂದ ರಾಜ್ಯದ ಕರಾವಳಿಯೆಡೆಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಮುಂದಿನ ಐದು ದಿನಗಳವರೆಗೆ ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಹೆಚ್ಚು ಮಳೆ ಯಾಗುವ ಸಾಧ್ಯತೆಯಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಒಳನಾಡಿ ನಲ್ಲಿ ಮಳೆ ತಗ್ಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

Translate »