ಮಡಿಕೇರಿ: ಮುಂಗಾರು ಮಳೆ ಸಂದರ್ಭದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳು ವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿ ಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದ್ದಾರೆ.
ಪ್ರಸಕ್ತ ಮುಂಗಾರು ಸಂದರ್ಭದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಕೈಗೊಳ್ಳುವ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಆ ನಿಟ್ಟಿನಲ್ಲಿ ಜೂನ್ ಮೊದಲ ವಾರದಲ್ಲಿ ಜಿಲ್ಲೆಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲಾ ಹಂತದ ಅಧಿಕಾರಿಗಳು ಪ್ರವಾಹ ಮುನ್ನೆಚ್ಚರಿಕೆ ಎದುರಿಸಲು ಕಾರ್ಯ ಪ್ರವೃತ್ತರಾಗಬೇಕಿದೆ ಎಂದರು.
ವರ್ಷಧಾರೆ ಹೆಚ್ಚಾದ ಸಂದರ್ಭದಲ್ಲಿ ಪ್ರವಾಹ, ಬರೆ ಕುಸಿತ, ಜನ, ಜಾನುವಾರು ಪ್ರಾಣಹಾನಿ, ವಾಸದ ಮನೆ ಹಾನಿ ಹಾಗೂ ಸಾರ್ವಜನಿಕ ಆಸ್ತಿ ಹಾನಿಯಾಗುವ ಸಾಧ್ಯತೆ ಗಳಿದ್ದು, ಅಂತಹ ಸಂದರ್ಭದಲ್ಲಿ ತಕ್ಷಣವೇ ಸಂಬಂಧಪಟ್ಟ ಎಲ್ಲಾ ಇಲಾಖಾ ಅಧಿಕಾರಿ ಗಳು ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದರು.
ಮಡಿಕೇರಿ ತಾಲೂಕಿನ ಭಾಗಮಂಡಲ, ಅಯ್ಯಂಗೇರಿ, ನಾಪೋಕ್ಲು, ಬಲಮುರಿ, ವಿರಾಜಪೇಟೆ ತಾಲೂಕಿನ ಕರಡಿಗೋಡು, ದುಬಾರೆ ಮತ್ತು ಲಕ್ಷ್ಮಣತೀರ್ಥ ಹಾಗೂ ಸೋಮವಾರಪೇಟೆ ತಾಲೂಕಿನ ಗುಹ್ಯ, ಕಣ ವೆ, ನೆಲ್ಯಹುದಿಕೇರಿ ಇನ್ನು ಹಲವು ಕಡೆ ರಸ್ತೆ, ಭೂ ಪ್ರದೇಶ ಪ್ರವಾಹ ಸಂದರ್ಭ ದಲ್ಲಿ ಜಲಾವೃತವಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಅನಾಹುತಗಳಾ ಗದಂತೆ ಕ್ರಮಕೈಗೊಳ್ಳಬೇಕು. ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳ ಗಳಿಗೆ ಸ್ಥಳಾಂತರಿಸಿ ಶಾಲೆ ಹಾಗೂ ಸಮು ದಾಯ ಭವನಗಳಲ್ಲಿ ತಾತ್ಕಾಲಿಕ ಪುನ ರ್ವಸತಿ ಕೇಂದ್ರ ತೆರೆಯುವ ಬಗ್ಗೆ ತಹಶೀಲ್ದಾರರು ಮತ್ತು ಸ್ಥಳೀಯ ಗ್ರಾಪಂ ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಧಿಕಾರಿ ಪಿ.ಐ.ಶ್ರೀವಿದ್ಯಾ ಸೂಚನೆ ನೀಡಿದರು.
ಅಗತ್ಯ ಬೋಟ್ ವ್ಯವಸ್ಥೆ, ಮುಳುಗು ತಜ್ಞರ ಪಟ್ಟಿ ಮತ್ತಿತರವನ್ನು ಗೃಹ ರಕ್ಷಕದಳ ಇಲಾಖೆಯವರು ಸಿದ್ಧತೆ ಮಾಡಿಕೊಳ್ಳು ವಂತೆ ಗೃಹ ರಕ್ಷಕದಳದ ಅಧಿಕಾರಿಗೆ ತಿಳಿಸ ಲಾಯಿತು. ತುರ್ತು ಸಂದರ್ಭದಲ್ಲಿ ಬೇಕಾಗ ಬಹುದಾದಂತಹ ಸಾಧನ ಸಲಕರಣೆಗಳು ತಾಲೂಕು ಕೇಂದ್ರಗಳಲ್ಲಿ ಹಾಗೂ ಅರಣ್ಯ ಇಲಾಖೆ ಮತ್ತು ಗ್ರಾಮ ಪಂಚಾಯ್ತಿ ಹಂತ ದಲ್ಲೂ ಇರಬೇಕಾಗುತ್ತದೆ ಎಂದರು.
ಮಳೆಗಾಲದಲ್ಲಿ ದೂರವಾಣ ಸಂಪರ್ಕ ಕಡಿತಗೊಂಡಾಗ ಮಾಹಿತಿಯು ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುವುದು ಕಷ್ಟವಾಗುವುದರಿಂದ ನಗರಸಭೆ ಕಚೇರಿ ಹಾಗೂ ಪ್ರತಿ ತಾಲೂಕು ಕಚೇರಿಗಳಿಗೆ ಒಂದ ರಂತೆ ಮತ್ತು ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್ ರೂಮ್‍ಗಳಲ್ಲಿ ವಯರ್‍ಲೆಸ್ ಬೇಸ್‍ಸೆಟ್ ನೀಡಿದ್ದು, ಅದರ ಸದು ಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ 24×7 ಸಹಾಯ ವಾಣ ತೆರೆಯಲಾಗಿದ್ದು, ಯಾವುದೇ ಅಧಿ ಕಾರಿ, ಸಿಬ್ಬಂದಿ, ಸಾರ್ವಜನಿಕರು ಅತಿವೃಷ್ಠಿ ಯಿಂದ ಉಂಟಾಗುವ ಹಾನಿಯ ಬಗ್ಗೆ ದೂರವಾಣ ಸಂಖ್ಯೆ 08272-221077ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದರು. ವಿದ್ಯುತ್ ವ್ಯತ್ಯಯ, ಕಂಬ ಬಿದ್ದಿ ರುವುದು ಮತ್ತಿತರ ಸಂಬಂಧ ಸೆಸ್ಕ್ ಸಹಾಯ ವಾಣ 1912ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಮಳೆಗಾಲದ ಅವಧಿಯಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ರಜೆ ಬೇಕಿದ್ದಲ್ಲಿ ನನ್ನ ಗಮನಕ್ಕೆ ತರಬೇಕು. ಕೇಂದ್ರ ಕಚೇರಿಯ ಸಭೆ-ಸಮಾರಂಭಗಳು ಇದ್ದಲ್ಲಿ ಗಮನಕ್ಕೆ ತಂದು ತೆರಳಬೇಕು ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಸೂಚಿಸಿ ದರು. ಅತಿವೃಷ್ಟಿಯಿಂದ ಉಂಟಾಗುವ ಹಾನಿ ಸಂಬಂಧ ತಕ್ಷಣವೇ ವರದಿ ಕಳುಹಿಸಬೇಕು, ಜೊತೆಗೆ ಒಂದು ವಾರದೊಳಗೆ ಪರಿಹಾರ ವಿತರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ, ಭಾಗ ಮಂಡಲದಲ್ಲಿ ಹೆಚ್ಚಿನ ಮಳೆಯಾದ ಸಂದ ರ್ಭದಲ್ಲಿ ಪ್ರವಾಹ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸ ಬೇಕು. ಅನಾಹುತಗಳನ್ನು ತಡೆಯಲು ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ ಎಂದು ಅವರು ಹೇಳಿದರು. ಭಾಗಮಂಡ ಲದ ಜೊತೆಗೆ ಅಯ್ಯಂಗೇರಿ, ನಾಪೋಕ್ಲು, ಕರಡಿಗೋಡು, ದುಬಾರೆ, ಲಕ್ಷ್ಮಣತೀರ್ಥ, ಗುಹ್ಯ, ಕಣ ವೆ, ನೆಲ್ಯಹುದಿಕೇರಿ ಇನ್ನು ಹಲವು ಕಡೆಗಳಲ್ಲಿ ವ್ಯಾಪಕ ಮಳೆ ಬಂದ ಸಂದ ರ್ಭದಲ್ಲಿ ಹೆಚ್ಚಿನ ಮುತುವರ್ಜಿ ವಹಿಸ ಬೇಕಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್ ಮಾತನಾಡಿ, ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಬರೆ ಕುಸಿತ ಉಂಟಾಗ ದಂತೆ ಎಚ್ಚರಿಕೆ ವಹಿಸಬೇಕು. ಇಂತಹ ಪ್ರದೇಶಗಳಲ್ಲಿ ಸ್ಥಳೀಯರಿಗೆ ಮುನ್ನೆಚ್ಚರಿಕೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿ ಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಮೈಕಲ್ ಅವರು ನಿಯಂತ್ರಣ ಕೊಠಡಿಗೆ ನಿಯೋಜಿಸಿ ರುವ ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಆ ನಿಟ್ಟಿನಲ್ಲಿ ಸಹಕರಿಸುವಂತೆ ಸಭೆಯ ಗಮನಕ್ಕೆ ತಂದರು.
ಡಿವೈಎಸ್‍ಪಿ ಸುಂದರರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್, ಗೃಹ ರಕ್ಷಕದಳದ ಅಧಿಕಾರಿ ಚಂದನ್, ಸೆಸ್ಕ್ ಇಇ ಸೋಮಶೇಖರ, ಲೋಕೋಪಯೋಗಿ ಇಲಾಖೆ ಇಇ ವಿನಯ ಕುಮಾರ್, ಪೌರಾಯುಕ್ತರಾದ ಬಿ.ಶುಭಾ, ತಹಶೀಲ್ದಾರರಾದ ಶಾರದಾಂಬ, ಗೋವಿಂದ ರಾಜು, ಬಾಡ್ಕರ್, ಪಶುಪಾಲನಾ ಇಲಾ ಖೆಯ ಉಪ ನಿರ್ದೇಶಕರಾದ ಸುರೇಶ್, ಎಇಇ ಗಳಾದ ಇಬ್ರಾಹಿಂ, ಸ್ವಾಮಿ, ಸುರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್, ತಾಪಂ ಇಒಗಳಾದ ಜೀವನ್ ಕುಮಾರ್, ಮತ್ತಿ ತರರು ಪ್ರವಾಹ ಮುನ್ನೆ ಚ್ಚರಿಕೆ ನಿಭಾಯಿಸುವ ಸಂಬಂಧ ಹಲವು ಮಾಹಿತಿ ನೀಡಿದರು.