ರಾಜ್ಯದಲ್ಲಿ ಮುಂಗಾರು ದುರ್ಬಲ
ಮೈಸೂರು

ರಾಜ್ಯದಲ್ಲಿ ಮುಂಗಾರು ದುರ್ಬಲ

August 30, 2020

ಬೆಂಗಳೂರು, ಆ.29(ಕೆಎಂಶಿ)- ರಾಜ್ಯದಲ್ಲಿ ಮುಂಗಾರು ಮಳೆ ದುರ್ಬಲಗೊಂಡಿದ್ದು, ಕಳೆದೊಂದು ವಾರದಲ್ಲಿ ವಾಡಿಕೆಗಿಂತ ಶೇ.51ರಷ್ಟು ಮಳೆ ಕೊರತೆ ಉಂಟಾಗಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಕಳೆದೊಂದು ವಾರದಲ್ಲಿ ವಾಡಿಕೆಯ ಮಳೆ ಪ್ರಮಾಣ 40 ಮಿ.ಮೀ.ನಷ್ಟಿದ್ದು, ಕೇವಲ 20 ಮಿ.ಮೀ.ನಷ್ಟು ಮಾತ್ರ ರಾಜ್ಯದಲ್ಲಿ ಮಳೆಯಾಗಿದೆ. ಅದರಲ್ಲೂ ದಕ್ಷಿಣ ಒಳನಾಡಿ ನಲ್ಲಿ ಹೆಚ್ಚು ಮಳೆ ಕೊರತೆಯಾಗಿದೆ. ಅಧಿಕ ಮಳೆಯಾಗು ತ್ತಿದ್ದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲೂ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆಗಸ್ಟ್‍ನಲ್ಲಿ ದಕ್ಷಿಣ ಒಳನಾಡು ಹೊರತುಪಡಿಸಿ ಉಳಿದೆಡೆ ವಾಡಿಕೆಯಷ್ಟು ಮಳೆಯಾಗಿದೆ.

ಮುಂಗಾರು ಹಂಗಾಮಿನ ಬಿತ್ತನೆ ಮಾಡಿರುವ ರೈತರು ಆಕಾಶದತ್ತ ಮುಖ ಮಾಡಿ ಮಳೆಯ ನಿರೀಕ್ಷೆಯಲ್ಲಿ ದ್ದಾರೆ. ಬಿತ್ತನೆ ಮಾಡಿರುವ ರಾಗಿ, ಜೋಳ, ತೊಗರಿ, ಶೇಂಗಾ ಸೇರಿದಂತೆ ಹಲವು ಬೆಳೆಗಳು ಒಣಗುತ್ತಿವೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಗಳಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ರಾಜ್ಯ ದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತವಾಗಲಿದ್ದು, ಸೆಪ್ಟೆಂಬರ್ 1ರಿಂದ 3 ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಪೂರ್ವ ಭಾಗದ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಆದರೆ, ಮಲೆನಾಡು ಭಾಗಕ್ಕೆ ಇದರ ಪರಿಣಾಮ ಉಂಟಾಗುವ ಸಾಧ್ಯತೆಗಳಿಲ್ಲ ಎಂದು ಹೇಳಿದರು.

Translate »