ಜೂ.17ರಿಂದ ಸಂಸತ್ತಿನ ಮುಂಗಾರು ಅಧಿವೇಶನ 
ಮೈಸೂರು

ಜೂ.17ರಿಂದ ಸಂಸತ್ತಿನ ಮುಂಗಾರು ಅಧಿವೇಶನ 

ನವದೆಹಲಿ:  ಸಂಸತ್ತಿನ ಮುಂಗಾರು ಅಧಿವೇಶನ ಇದೇ 17ರಿಂದ ಆರಂಭವಾಗುತ್ತಿದ್ದು, ಅದಕ್ಕಿಂತ ಒಂದು ದಿನ ಮೊದಲು ಅಂದರೆ 16ರಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ. ಹೊಸ ಸರ್ಕಾರದ ಮೊದಲ ಅಧಿವೇಶನ ಜೂನ್ 17ರಿಂದ ಜುಲೈ 26ರವರೆಗೆ ನಡೆಯಲಿದೆ. ಮೊದಲ ಬಜೆಟ್ ಜುಲೈ 5ರಂದು ಮಂಡನೆಯಾಗಲಿದೆ.

ಜೂ.16ರಂದು ಭಾನುವಾರ ದೆಹಲಿ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯ ಕ್ಷತೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆ ಕರೆಯ ಲಾಗಿದೆ ಎಂದು ಸಂಸದೀಯ ವ್ಯವ ಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿ ದ್ದಾರೆ. ಜೂನ್ 16ರಂದು ಸಂಜೆ ಸಂಸತ್ತಿ ನಲ್ಲಿ ಬಿಜೆಪಿ ಸಂಸದೀಯ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು ಸದನ ಕಾರ್ಯತಂತ್ರಗಳ ಕುರಿತು ಎನ್‍ಡಿಎ ಮೈತ್ರಿಕೂಟ ಚರ್ಚೆ ನಡೆಸಲಿದೆ.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃ ತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದ ಮೇಲೆ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದ್ದು ಈ ಅಧಿವೇ ಶನದಲ್ಲಿ ತ್ರಿವಳಿ ತಲಾಖ್, ಆಧಾರ್ ತಿದ್ದು ಪಡಿ, ಕಂಪೆನಿ ಕಾಯ್ದೆ ತಿದ್ದುಪಡಿ ಮತ್ತು ಭಾರತೀಯ ವೈದ್ಯಕೀಯ ಮಂಡಳಿ ಕಾಯ್ದೆಗಳು ಸೇರಿದಂತೆ 10 ಹೊಸ ವಿಧೇ ಯಕಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ. ಈ ಮಧ್ಯೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವರುಗಳಾದ ನರೇಂದ್ರ ಸಿಂಗ್ ತೋಮರ್, ಅರ್ಜುನ್ ರಾಮ್ ಮೆಘ ವಾಲ್ ಅವರು ನಿನ್ನೆ ದೆಹಲಿಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಸಂಸತ್ತಿನ ಸುಗಮ ಕಲಾ ಪಕ್ಕೆ ಸಹಕಾರ ನೀಡುವಂತೆ ಕೋರಿದರು.

June 14, 2019

Leave a Reply

Your email address will not be published. Required fields are marked *