ಮೊರಾರ್ಜಿ ವಸತಿ ಶಾಲೆ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಹಾಸನ

ಮೊರಾರ್ಜಿ ವಸತಿ ಶಾಲೆ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

September 5, 2018

ಸಕಲೇಶಪುರ:  ವಸತಿ ನಿಲಯದಲ್ಲಿ ಆಹಾರ ಸೇವಿಸಿ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ತಾಲೂಕಿನ ಬ್ಯಾಕರವಳ್ಳಿ ಮೊರಾರ್ಜಿ ವಸತಿ ಶಾಲೆ ನಡೆದಿದೆ.

ಸೋಮವಾರ ರಾತ್ರಿ ಊಟ ಸೇವಿಸಿದ ಬಳಿಕ ಮಕ್ಕಳಿಗೆ ವಾಂತಿ ಹಾಗೂ ಭೇದಿ ಕಾಣಿಸಿಕೊಂಡಿತ್ತು. ತಕ್ಷಣ ಎಚ್ಚೆತ್ತ ಅಲ್ಲಿನ ಶಿಕ್ಷಕರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ವಿಷಯ ತಿಳಿದ ಸ್ಥಳೀಯ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿ ದರು. ಅಲ್ಲದೆ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ರಿಗೆ ಶಾಸಕರು ಮೌಖಿಕ ಆದೇಶ ನೀಡಿ ದ್ದಾರೆ. ಘಟನೆಗೆ ವಿಷಪೂರಿತ ಆಹಾರ ಸೇವನೆ ಇದಕ್ಕೆ ಕಾರಣ ಎನ್ನಲಾಗಿದ್ದು, ಆಹಾರವನ್ನು ಪ್ರಯೋಗಾಲಯಕ್ಕೆ ಕಳಿಸಿ ಕೊಡುವಂತೆ ಸೂಚನೆ ನೀಡಿರುವ ಶಾಸಕ ಕುಮಾರಸ್ವಾಮಿ, ತಪ್ಪು ಕಂಡು ಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

Translate »