ವಯೋಸಹಜ ಕಾಯಿಲೆ-ಸೋಂಕಿತರ ಬಗ್ಗೆ ಹೆಚ್ಚು ನಿಗಾ ಅಗತ್ಯ
ಮೈಸೂರು

ವಯೋಸಹಜ ಕಾಯಿಲೆ-ಸೋಂಕಿತರ ಬಗ್ಗೆ ಹೆಚ್ಚು ನಿಗಾ ಅಗತ್ಯ

November 4, 2020

ಮೈಸೂರು, ನ.3(ಪಿಎಂ)- ವಯೋ ಸಹಜ ಕಾಯಿಲೆಗಳಿಂದ ಬಳಲುವ ಕೊರೊನಾ ಸೋಂಕಿತರ ಬಗ್ಗೆ ಮಾಹಿತಿ ಕಲೆ ಹಾಕಿ, ಅವರ ಆರೋಗ್ಯದ ಮೇಲೆ ಹೆಚ್ಚು ನಿಗಾ ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಜಯರಾಮ್ ಅಧಿ ಕಾರಿಗಳಿಗೆ ಸೂಚನೆ ನೀಡಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್-19 ಸೋಂಕು ತಪಾಸಣೆ, ಚಿಕಿತ್ಸೆ ಹಾಗೂ ನಿಯಂತ್ರಣ ಕುರಿತು ಮಂಗಳ ವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಜೊತೆಗೆ ಕೋವಿಡ್-19 ದೃಢಪಟ್ಟು ಆಸ್ಪತ್ರೆಗೆ ದಾಖಲಾಗುವ ಬಹುತೇಕರು ನಾನಾ ಕಾಯಿಲೆಗಳಿಂದ ಬಳಲುತ್ತಿರುತ್ತಾರೆ. ಅವರಿಗೆ ಅಗತ್ಯವಿರುವ ಚಿಕಿತ್ಸೆ ಹಾಗೂ ಸೂಕ್ತ ಸಲಹೆ ಯನ್ನು ನೀಡಲು ಎಲ್ಲಾ ವ್ಯವಸ್ಥೆ ಮಾಡ ಬೇಕು ಎಂದು ನಿರ್ದೇಶನ ನೀಡಿದರು.

ಕೆಲ ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸಾ ಶುಲ್ಕ ಮತ್ತಿತರ ಮಾಹಿತಿಯನ್ನು ಆಸ್ಪತ್ರೆ ಮುಂದೆ ಪ್ರಕಟಿಸಿ, ಹೆಚ್ಚುವರಿ ಶುಲ್ಕ ಸಂಗ್ರಹಿಸಿ ಜನರಿಗೆ ತೊಂದರೆ ಕೊಡುತ್ತಿವೆ. ಜಿಲ್ಲಾಡಳಿತ ರಚಿಸಿದ ತಂಡ ಈ ಬಗ್ಗೆ ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದರು.

ಕೋವಿಡ್ ಕಾರಣ ಮದುವೆ ಮತ್ತಿತರ ಸಮಾರಂಭಗಳನ್ನು ಮಾರ್ಗಸೂಚಿಯಂತೆ ನಡೆಸಲು ಜನಜಾಗೃತಿ ಮೂಡಿಸಬೇಕು. ಬಸ್ ಸ್ಟ್ಯಾಂಡ್, ರೈಲು ನಿಲ್ದಾಣ, ಮಾರು ಕಟ್ಟೆ ಮೊದಲಾದೆಡೆ ಕೋವಿಡ್-19 ನಿಯಂ ತ್ರಣ ಕ್ರಮಗಳನ್ನು ಪಾಲಿಸುವಂತೆ ಜನರಿಗೆ ತಿಳಿಸಿಕೊಡಬೇಕು ಎಂದು ತಿಳಿಸಿದರು.

ಕೊರೊನಾ ಸೋಂಕಿನಿಂದ ಆಸ್ಪತ್ರೆ ಹಾಗೂ ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ ಯಲ್ಲಿರುವವರಿಗೆ ಧೈರ್ಯ ತುಂಬುವ ಸಲುವಾಗಿ ಪರಿಣಿತ ಸಮಾಲೋಚಕರಿಂದ ಆಪ್ತ ಸಮಾಲೋಚನೆ ನಡೆಸಲು ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.

ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಜಿಪಂ ಸಿಇಒ ಡಿ.ಭಾರತಿ, ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಡಿಸಿಪಿ ಎನ್.ಪ್ರಕಾಶ್‍ಗೌಡ, ಅಪರ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥ್‍ಸ್ವಾಮಿ, ಜಿಲ್ಲಾ ಆರೋಗ್ಯ-ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಅಮರನಾಥ್ ಮತ್ತಿತರರು ಸಭೆಯಲ್ಲಿದ್ದರು.

 

Translate »