ದೇಶದಲ್ಲಿ ಕೊರೊನಾ ಮಹಾಮಾರಿಗೆ 2 ಸಾವಿರಕ್ಕೂ ಹೆಚ್ಚು ಮಂದಿ ಬಲಿ
ಮೈಸೂರು

ದೇಶದಲ್ಲಿ ಕೊರೊನಾ ಮಹಾಮಾರಿಗೆ 2 ಸಾವಿರಕ್ಕೂ ಹೆಚ್ಚು ಮಂದಿ ಬಲಿ

May 11, 2020

ನವದೆಹಲಿ,ಮೇ 10-ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 62,939ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್‍ಗೆ 2,109 ಮಂದಿ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,277 ಮಂದಿ ಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 128 ಮಂದಿ ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಶನಿವಾರ 1165 ಹೊಸ ಕೇಸ್ ನೊಂದಿಗೆ ಒಟ್ಟು ಸಂಖ್ಯೆ 20,228ಕ್ಕೇರಿದೆ. ಸಾವಿಗೀಡಾದವರ ಸಂಖ್ಯೆ 779ಕ್ಕೆ ಜಿಗಿದಿದೆ. ಇನ್ನು ತಮಿಳುನಾಡಿನಲ್ಲಿ 526, ಗುಜರಾತ್ ನಲ್ಲಿ 394, ರಾಜಸ್ತಾನದಲ್ಲಿ 129, ಮಧ್ಯಪ್ರದೇಶದಲ್ಲಿ 116 ಹಾಗೂ ಬಂಗಾಳದಲ್ಲಿ 108 ಅತೀ ಹೆಚ್ಚು ಕೊರೊನಾ ಪ್ರಕರಣಗಳು ದಾಖ ಲಾಗಿವೆ. ಈವರೆಗೆ ಅತೀ ಹೆಚ್ಚು ಸಾವು ದಾಖಲಾದ ರಾಜ್ಯಗಳೆಂ ದರೆ ಮಹಾರಾಷ್ಟ್ರ 779, ಗುಜರಾತ್ 472, ಮಧ್ಯಪ್ರದೇಶ 311, ಪ.ಬಂಗಾಳ 171, ರಾಜಸ್ತಾನದಲ್ಲಿ 106 ಮಂದಿ ಬಲಿಯಾಗಿದ್ದಾರೆ.

Translate »