`ಕೊಡವ ಲ್ಯಾಂಡ್’ ಬೇಡಿಕೆಗೆ ಕೋರ್ಟ್ ಮೊರೆ
ಮೈಸೂರು

`ಕೊಡವ ಲ್ಯಾಂಡ್’ ಬೇಡಿಕೆಗೆ ಕೋರ್ಟ್ ಮೊರೆ

November 27, 2022

`ಕೊಡವ ನ್ಯಾಷನಲ್ ಡೇ’ ಕಾರ್ಯಕ್ರಮದಲ್ಲಿ ಕೇಂದ್ರ ಮಾಜಿ ಸಚಿವ ಡಾ.ಸುಬ್ರಮಣ ಯನ್ ಸ್ವಾಮಿ ಅಭಯ
ಸ್ವಾಯತ್ತ ನಾಡು ಕೇಳಲು ಕೊಡವರಿಗೆ ಹಕ್ಕಿದೆ
ಕೊಡವರ ಬೇಡಿಕೆ ಬಗ್ಗೆ ನಾನೇ ವಾದ ಮಂಡಿಸುವೆ
ಪ್ರತ್ಯೇಕ ರಾಜ್ಯ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ
ಭಾರತೀಯರು ಕೊಡವರ ಪರ ಇದ್ದಾರೆ

ಮಡಿಕೇರಿ, ನ.೨೬- ಕೊಡವ ಸ್ವಾಯತ್ತ ನಾಡಿನ ಬೇಡಿಕೆ ಈಡೇರಿಸಿಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗುವು ದಾಗಿ ಘೋಷಿಸಿರುವ ಖ್ಯಾತ ಅರ್ಥಶಾಸ್ತçಜ್ಞ ಹಾಗೂ ಕೇಂದ್ರದ ಮಾಜಿ ಸಚಿವ ಡಾ. ಸುಬ್ರಮಣ ಯನ್‌ಸ್ವಾಮಿ, ಕೊಡವರ ಬೇಡಿಕೆ ನ್ಯಾಯಸಮ್ಮತವಾಗಿದ್ದು, ಕೋರ್ಟ್ ಇದನ್ನು ಮನ್ನಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿ ಯಿಂದ ನಡೆದ ೩೨ನೇ ವರ್ಷದ `ಕೊಡವ ನ್ಯಾಷನಲ್ ಡೇ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕೊಡವರಿಗೆ ಸ್ವಾಯತ್ತ ನಾಡು ಕೇಳಲು ಸಂವಿಧಾನಾತ್ಮಕವಾಗಿ ಹಕ್ಕಿದೆ. ಕೊಡವ ಸ್ವಾಯತ್ತ ನಾಡಿನ ಬೇಡಿಕೆಗೆ ಸಂಬAಧಿ ಸಿದಂತೆ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವೆ. ಇದಕ್ಕಾಗಿಯೇ ವಕೀಲರನ್ನು ಕೂಡ ನಿಯೋಜಿಸಿರುವೆ ಎಂದು ಮಾಹಿತಿ ನೀಡಿ ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಹಿಂದೆ ತಾನು ಕೊಡವ ಸ್ವಾಯತ್ತ ನಾಡಿನ ಬೇಡಿಕೆಯನ್ನು ಈಡೇರಿಸುವುದಾಗಿ ಹೇಳಿದ್ದರು. ಆದರೆ ೨ ವರ್ಷ ಕಳೆದರೂ ಅವರು ಏನನ್ನೂ ಮಾಡಲಿಲ್ಲ. ಈಗಿನ ಮುಖ್ಯಮಂತ್ರಿ ಬಸವ ರಾಜು ಬೊಮ್ಮಾಯಿ ಅವರಿಗೆ ಸಿಎನ್‌ಸಿ ಬೇಡಿಕೆ ಬಗ್ಗೆ ತಿಳುವಳಿಕೆ ಇದ್ದಂತೆ ಕಾಣು ತ್ತಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ನಲ್ಲಿ ತಾನೇ ಕೊಡವರ ಬೇಡಿಕೆ ಪರ ವಾದ ಮಂಡಿಸುವೆ ಎಂದು ಸುಬ್ರಮಣ ಯನ್ ಸ್ವಾಮಿ ಭರವಸೆ ನೀಡಿದರು. ಮುಂದಿನ ಕೊಡವ ನ್ಯಾಷನಲ್
ಡೇ ವೇಳೆಗೆ ಪ್ರತ್ಯೇಕ ಕೊಡವ ಹೋಂ ಲ್ಯಾಂಡ್‌ನೊAದಿಗೆ ಸಂಭ್ರಮಿಸೋಣ. ಕೊಡವ ಲ್ಯಾಂಡ್ ಬೇಡಿಕೆ ನ್ಯಾಯಯುತವಾಗಿದೆ. ಸಿಎನ್‌ಸಿಯ ಬೇಡಿಕೆಗಳು ಸುಪ್ರೀಂ ಕೋರ್ಟ್ನ ಮೂಲಕ ಈಡೇರುವ ವಿಶ್ವಾಸವಿದೆ. ಪ್ರತ್ಯೇಕ ರಾಜ್ಯ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ ಎಂದರು. ಗೋವಾ, ತೆಲಂಗಾಣ, ಉತ್ತರಾಖಂಡ್ ಪ್ರದೇಶಗಳು ನಿರಂತರ ಹೋರಾಟದ ಫಲವಾಗಿ ಪ್ರತ್ಯೇಕ ರಾಜ್ಯಗಳಾಗಿ ಮಾರ್ಪಟ್ಟಿವೆ. ಕೊಡವರು ಎಂದೆA ದಿಗೂ ಈ ದೇಶದ ಅಂಗವಾಗಿಯೇ ಉಳಿಯಲಿದ್ದಾರೆ. ತಮ್ಮ ಹಕ್ಕುಗಳನ್ನು ಉಳಿಸಿಕೊಳ್ಳು ವುದಕ್ಕಾಗಿ ಪ್ರತ್ಯೇಕ ಹೋಂ ಲ್ಯಾಂಡ್ ಕೇಳುತ್ತಿದ್ದಾರೆ. ಇದಕ್ಕೆ ನನ್ನ ಸಂಪೂರ್ಣ ಸಹಕಾರ ಮತ್ತು ಬೆಂಬಲವಿದೆ. ಮುಂದಿನ ವರ್ಷ ಪ್ರತ್ಯೇಕ ಕೊಡವ ಹೋಂ ಲ್ಯಾಂಡ್ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸೋಣ. ಇಡೀ ಭಾರತೀಯರು ಕೊಡವರ ಪರವಾಗಿ ಇದ್ದಾರೆ ಎಂದು ಸುಬ್ರಮಣ ಯನ್ ಸ್ವಾಮಿ ತಿಳಿಸಿದರು.

ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮಾತನಾಡಿ, ಸಿ.ಎನ್.ಸಿ ಸಂಘಟನೆ ಅಲ್ಪ ಜ್ಞಾನದೊಂದಿಗೆ ನ್ಯಾಯಕ್ಕಾಗಿ ಹೋರಾಡುತ್ತಿಲ್ಲ. ಸಂವಿಧಾನಕ್ಕೆ ಗೌರವ ನೀಡಿ ಸಂವಿಧಾನದ ಆಶಯದಂತೆ ನಡೆದುಕೊಳ್ಳುತ್ತಿದೆ. ಸಂವಿಧಾನದ ಬಗ್ಗೆ ಸಂಪೂರ್ಣವಾಗಿ ಅರಿತುಕೊಂ ಡಾಗ ಮಾತ್ರ ಕೊಡವರ ನ್ಯಾಯಯುತ ಹಕ್ಕುಗಳನ್ನು ಪಡೆಯಲು ಸಾಧ್ಯ ಎಂದರು.
ವಿರಾಟ್ ಹಿಂದೂಸ್ತಾನ್ ಸಂಗಮ್(ವಿಹೆಚ್‌ಎಸ್) ರಾಷ್ಟಿçÃಯ ಪ್ರಧಾನ ಕಾರ್ಯ ದರ್ಶಿ ಜಗದೀಶ್ ಶೆಟ್ಟಿ ಮಾತನಾಡಿ, ಸಿಎನ್‌ಸಿ ಸಂಘಟನೆ, ಸಂವಿಧಾನದಡಿ ನ್ಯಾಯುತವಾದ ಹಕ್ಕುಗಳನ್ನು ಕೇಳುತ್ತಿದೆ. ಇದು ರಾಷ್ಟç ವಿರೋಧಿ ಬೇಡಿಕೆಯಲ್ಲ. ಆದ್ದರಿಂದ ಸರ್ಕಾರ ಇವರ ಬೇಡಿಕೆಯನ್ನು ಪರಿಗಣ ಸುವ ಅಗತ್ಯವಿದೆ ಎಂದು ಹೇಳಿದರು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ವಿವಿಧ ಬೇಡಿಕೆಗಳ ಕುರಿತು ಸಭೆಯಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದರು. ಸಿಎನ್‌ಸಿ ಪ್ರಮುಖ ಕಲಿಯಂಡ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಡಾ.ಸುಬ್ರಮಣ ಯನ್ ಸ್ವಾಮಿ ಅವರು, ಕರಡ ಮಲೆತಿರಿಕೆ ದೇವಾಲಯದ ರಸ್ತೆ ಅಭಿವೃದ್ಧಿಗೆ ರಾಜ್ಯಸಭಾ ಸದಸ್ಯರ ನಿಧಿಯಿಂದ ೧೦ ಲಕ್ಷ ರೂ.ಗಳನ್ನು ಘೋಷಿಸಿದರು. ವಿವಿಧ ಕೊಡವ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ನೆರೆದಿದ್ದವರು ಗಮನ ಸೆಳೆದರು.

ಹಕ್ಕೊತ್ತಾಯ ಮಂಡನೆ: ಕೊಡವ ಮೂಲ ವಂಶಸ್ಥ ಬುಡಕಟ್ಟು ಸಮುದಾಯಕ್ಕೆ ಎಸ್‌ಟಿ ಪಟ್ಟಿಯಲ್ಲಿ ಮಾನ್ಯತೆ ನೀಡಬೇಕು, ಕೊಡವರ ಧಾರ್ಮಿಕ ಸಂಸ್ಕಾರ ಕೋವಿಗೆ ಸಂವಿಧಾನದ ೨೫, ೨೬ನೇ ವಿಧಿಯಲ್ಲಿ ವಿಶೇಷ ಭದ್ರತೆ ಒದಗಿಸಬೇಕು, ಕೊಡವ ತಕ್‌ಗೆ ೮ನೇ ಶೆಡ್ಯೂಲ್ ಸ್ಥಾನಮಾನ ನೀಡಬೇಕು, ಅರಮನೆ ಪಿತೂರಿ ಮತ್ತು ದೇವಟ್ ಪರಂಬುವಿನ ನರಮೇಧ ದಲ್ಲಿ ಜೀವ ಕಳೆದುಕೊಂಡ ಕೊಡವರ ಸ್ಮರಣೆಗಾಗಿ ಸ್ಮಾರಕ ನಿರ್ಮಾಣ ಮಾಡಬೇಕು, ಕೊಡವರ ಭೂಮಿ, ಸಂಸ್ಕೃತಿ, ಜನಪದ, ಪರಂಪರೆ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರö್ಯಕ್ಕಾಗಿ ಈಶಾನ್ಯ ರಾಜ್ಯದ ಮಾದರಿ ೩೭೧(ಕೆ) ವಿಧಿಯಂತೆ ರಾಜ್ಯಾಂಗದ ವಿಶೇಷ ಖಾತ್ರಿಗೆ ಸಂಬAಧಿಸಿದ ನಿರ್ಣಯ ಸೇರಿದಂತೆ ಕೊಡವರ ಹಿತಾಸಕ್ತಿ ಕಾಪಾಡುವ ಪ್ರಮುಖ ಹಕ್ಕೊತ್ತಾಯಗಳನ್ನು ಇದೇ ಸಂದರ್ಭ ಮಂಡಿಸಿ ಅಂಗೀಕರಿಸಲಾಯಿತು.

 

ಪ್ರಧಾನಿ ಬಗ್ಗೆ ಭಿನ್ನಾಭಿಪ್ರಾಯವಿಲ್ಲ, ಅವರ ನಿರ್ಧಾರಗಳ ಬಗ್ಗೆ ಆಕ್ಷೇಪವಿದೆ
ಮಡಿಕೇರಿ,ನ.೨೬- ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಬಗ್ಗೆ ವೈಯಕ್ತಿಕ ಭಿನ್ನಾಭಿಪ್ರಾಯಗಳಿಲ್ಲ. ಆದರೆ ಪ್ರಧಾನಿಯಾಗಿ ಕೈಗೊಂಡ ಕೆಲ ವೊಂದು ನಿರ್ಧಾರಗಳ ಬಗ್ಗೆ ಆಕ್ಷೇಪ ವಿದೆ. ಕೆಲವು ವಿಚಾರಗಳಲ್ಲಿ ದಿಟ್ಟ ಹೆಜ್ಜೆ ಇಡುತ್ತಿಲ್ಲವೆಂದು ಖ್ಯಾತ ಅರ್ಥಶಾಸ್ತçಜ್ಞ ಹಾಗೂ ಮಾಜಿ ಕೇಂದ್ರ ಸಚಿವ ಡಾ.ಸುಬ್ರಮಣ ಯನ್ ಸ್ವಾಮಿ ಟೀಕಿಸಿದ್ದಾರೆ.

ಕೆಲವು ವಿಚಾರಗಳ ಬಗ್ಗೆ ಬಿಗಿ ನಿರ್ಧಾರಗಳನ್ನು ಮೋದಿ ಕೈಗೊಂಡಿಲ್ಲ ಎಂಬ ಅಸಮಾಧಾನವಿದೆ. ಹೀಗಿದ್ದರೂ ದೇಶದ ಹಿಂದೂ ಸಂಘಟನೆಗಳ ಕಾರ್ಯಕರ್ತರ ಬೆಂಬಲದಿAದ ಮುಂದಿನ ಚುನಾವಣೆ ಯಲ್ಲಿಯೂ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ ಎಂದು ಡಾ.ಸುಬ್ರಮಣ ಯನ್ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ದೇಶದ ಅಧಿಕಾರಸ್ಥರು
ತಪ್ಪು ನಿರ್ಧಾರ ಕೈಗೊಂಡಾಗ ತಿಳಿದಿದ್ದೂ ಯಾಕೆ ನೀವು ಮೌನವಾಗಿದ್ದೀರಿ ಎಂದು ಜನರು ಪ್ರಶ್ನಿಸುತ್ತಾರೆ. ಪ್ರಜಾಪ್ರಭುತ್ವದಲ್ಲಿ ಪ್ರಧಾನಿ ಬಗ್ಗೆ ಶ್ಲಾಘಿಸುವುದು, ಟೀಕಿಸುವುದು ಒಳ್ಳೆಯ ಲಕ್ಷಣ. ತಪ್ಪು ತೀರ್ಮಾನಗಳ ಕುರಿತಂತೆ ಹಲವೊಮ್ಮೆ ಪ್ರಧಾನಿಗೆ ತಾನು ಪತ್ರ ಬರೆದಿದ್ದೇನೆ. ಆದರೆ ಸ್ಪಂದಿಸುತ್ತಿಲ್ಲ ಎಂದರು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೈಗೊಂಡಿರುವ ಭಾರತ್ ಜೋಡೋ ಯಾತ್ರೆ ಬಗ್ಗೆ ವ್ಯಂಗ್ಯವಾಡಿದ ಡಾ.ಸುಬ್ರಮಣ ಯನ್ ಸ್ವಾಮಿ, ಯಾರು ಭಾರತವನ್ನು ಒಡೆದರೋ ಅವರೇ ತಾವು ಮಾಡಿದ ಕೃತ್ಯಕ್ಕೆ ಪ್ರಾಯಶ್ಚಿತವಾಗಿ `ಭಾರತ್ ಜೋಡೋ’ ಎಂದು ಭಾರತವನ್ನು ಜೋಡಿಸಲು ಹೊರಟಂತಿದೆ. ರಾಹುಲ್ ಗಾಂಧಿಗೆ ಮಾತ್ರ ಭಾರತ ಒಡೆದಂತೆ ಕಾಣುತ್ತಿದೆಯೇ ವಿನಾ ನಿಜವಾದ ಭಾರತ ಒಗ್ಗಟ್ಟಿನ ಭಾರತವಾಗಿದೆ, ಎಲ್ಲೂ ಒಡೆದ ಭಾರತದಂತಿಲ್ಲ ಎಂದು ಹೇಳಿದರು.

Translate »