ಸಂಸದ ಪ್ರತಾಪ್‍ಸಿಂಹರಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ
ಮೈಸೂರು

ಸಂಸದ ಪ್ರತಾಪ್‍ಸಿಂಹರಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ

March 29, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾಧಿಕಾರಿಗೆ ದೂರು ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಸಂಸದ ಪ್ರತಾಪ್ ಸಿಂಹ ಅವರು, ಮೈಸೂರು ತಾಲೂಕಿನ ಸಿದ್ದ ಲಿಂಗಪುರ ಗ್ರಾಮದಲ್ಲಿನ ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಚಂದ್ರಮೌಳೇ ಶ್ವರ ದೇವಸ್ಥಾನದಲ್ಲಿ ತಮ್ಮ ಬೆಂಬಲಿಗ ರೊಂದಿಗೆ ದೇವಸ್ಥಾನದ ಮೂಲ ಶಿವನ ವಿಗ್ರಹಕ್ಕೆ ಬಿಜೆಪಿ ಪಕ್ಷದ ಚಿಹ್ನೆ ಇರುವ ಶಲ್ಯವನ್ನು ಅಲಂಕರಿಸಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆ. ಈ ಸಂಬಂಧ ಚುನಾವಣಾ ಅಧಿಕಾರಿ ಗಳು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿ ಸಿದ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜೆ.ವಿಜಯ್‍ಕುಮಾರ್ ಮಾತನಾಡಿ, ಧಾರ್ಮಿಕ ಕೇಂದ್ರಗಳಾದ ದೇವಸ್ಥಾನಗಳಲ್ಲಿ ಚುನಾವಣಾ ಪ್ರಚಾರ ನಡೆಸುವುದು ನಿಷಿದ್ಧವಾಗಿರುತ್ತದೆ ಮತ್ತು ನೀತಿ ಸಂಹಿತೆಯ ಉಲ್ಲಂಘನೆಯಾಗು ತ್ತದೆ. ಆದರೂ ಪ್ರತಾಪ್ ಸಿಂಹ ಅವರು, ಸ್ವತಃ ದೇವರ ವಿಗ್ರಹಕ್ಕೆ ತಮ್ಮ ಪಕ್ಷದ ಚಿಹ್ನೆ ಇರುವ ಶಲ್ಯವನ್ನು ಅಲಂಕರಿಸಿ, ಪೂಜೆ ಸಲ್ಲಿಸಿರುವುದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದರು. ನಗರಾಧ್ಯಕ್ಷ ಆರ್.ಮೂರ್ತಿ, ಉಪಾಧ್ಯಕ್ಷರಾದ ಪ್ರಕಾಶ್, ಹೆಡತಲೆ ಮಂಜುನಾಥ್, ಮುಖಂಡರಾದ ಬಸವ ರಾಜ ನಾಯಕ, ಎನ್.ಶಿವಪ್ರಸಾದ್, ಕುಪ್ಪರವಳ್ಳಿ ಮುನಿಯಪ್ಪ, ಸುರೇಶ್ ಪಾಳ್ಯ, ಶಿವಕುಮಾರ್, ಡೊನಾಲ್ಡ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Translate »