ಸದಭಿರುಚಿಯ ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ ಹೆಮ್ಮೆಯ ಸಂದೇಶ್ ಪೆÇ್ರಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಎಂಎಲ್‍ಸಿ (ರಾಷ್ಟಪ್ರಶಸ್ತಿ ವಿಜೇತ). ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ srikrishna@gmail.com ಚಿತ್ರದ ಮುಹೂರ್ತ ಸಮಾರಂಭ ಮೈಸೂರಿನಲ್ಲಿರುವ ಅರ್ಜುನ್ ಜನ್ಯ ಸ್ಟುಡಿಯೋದಲ್ಲಿ ಸರಳವಾಗಿ ನೆರವೇರಿತು.
ನಾಗಶೇಖರ್ ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕರಾಗಿ ಡಾರ್ಲಿಂಗ್ ಕೃಷ್ಣ ಅಭಿನಯಿಸುತ್ತಿದ್ದಾರೆ. ನಟಸಾರ್ವಭೌಮ ಡಾ. ರಾಜಕುಮಾರ್ ಅವರ ಭಾವಚಿತ್ರದ ಮೇಲೆ ಚಿತ್ರದ ಪ್ರಥಮ ಸನ್ನಿವೇಶವನ್ನು ಸೆರೆ ಹಿಡಿಯಲಾಯಿತು. ಮೊದಲ ದೃಶ್ಯಕ್ಕೆ ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಪುತ್ರಿ ಬೃಂದಾ ಜಯರಾಂ ಅವರು ಆರಂಭ ಫಲಕ ತೋರಿದರೆ, ಪುತ್ರ ಸಂದೇಶ್.ಎನ್ (ನಿರ್ಮಾಪಕ) ಕ್ಯಾಮೆರಾ ಚಾಲನೆ ಮಾಡಿದರು.
ಸಂದೇಶ್ ನಾಗರಾಜ್, ನಿರ್ದೇಶಕ ನಾಗಶೇಖರ್, ನಾಯಕ ಡಾರ್ಲಿಂಗ್ ಕೃಷ್ಣ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಗೀತರಚನೆಕಾರ ಕವಿರಾಜ್, ಛಾಯಾಗ್ರಾಹಕ ಸತ್ಯ ಹೆಗಡೆ, ನಟಿ ಮಿಲನ ನಾಗರಾಜ್ ಮುಂತಾದ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಈ ಹಿಂದೆ ಸಂದೇಶ್ ಪೆÇ್ರಡಕ್ಷನ್ಸ್ ಮೂಲಕ ನಿರ್ಮಾಣ ವಾಗಿದ್ದ `ಅಮರ್’ ಚಿತ್ರವನ್ನು ಸಂದೇಶ್.ಎನ್ ಅವರೇ ನಿರ್ಮಿಸಿದ್ದು, ನಾಗಶೇಖರ್ ಈ ಚಿತ್ರವನ್ನು ನಿರ್ದೇಶಿಸಿದ್ದರು. ಇದು ಅವರಿಬ್ಬರ ಕಾಂಬಿನೇಶನ್‍ನ ಎರಡನೇ ಚಿತ್ರ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಸರ್ಕಾರದ ಅನುಮತಿ ದೊರಕಿದ ಕೂಡಲೇ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ. ಸಂಜು ವೆಡ್ಸ್ ಗೀತಾ ಸೇರಿದಂತೆ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ನಾಗಶೇಖರ್ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಕವಿರಾಜ್ ಈ ಚಿತ್ರದ ಹಾಡುಗಳನ್ನು ಬರೆಯುತ್ತಿದ್ದು, ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ ಹಾಗೂ ಅರುಣ್ ಸಾಗರ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದ್ದು, ಸದ್ಯದಲ್ಲೇ ತಿಳಿಸಲಾಗುವುದು ಎಂದು ನಿರ್ದೇಶಕರು ತಿಳಿಸಿದ್ದಾರೆ.
ಪ್ರಸ್ತುತ ಎಲ್ಲೆಲ್ಲೂ ಕೊರೊನಾ ವೈರಸ್ ತಾಂಡವವಾಡುತ್ತಿದೆ. ಹಾಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾದ್ದು ಎಲ್ಲರ ಜವಾಬ್ದಾರಿ. ಅದನ್ನೇ srikrishna@gmail.com ತಂಡ ಕಟ್ಟುನಿಟ್ಟಾಗಿ ಪಾಲಿಸಿದೆ. ಚಿತ್ರೀಕರಣ ವೇಳೆ ಚಿತ್ರತಂಡದ ಕೆಲವೇ ಮಂದಿ ಮಾತ್ರ ಪಾಲ್ಗೊಂಡಿದ್ದು, ಕೊರೊನಾ ನಿಯಮಾವಳಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿತ್ತು.
ಹಾಡುಗಳ ರೆಕಾರ್ಡಿಂಗ್ ಆರಂಭಿಸುವ ಮೂಲಕ srikrishna@gmail.com ಚಿತ್ರ ಅಧಿಕೃತವಾಗಿ ಸೆಟ್ಟೇರಿತು. ಚಿತ್ರಕ್ಕೆ ನಾಯಕಿ ಮತ್ತು ಇನ್ನಿತರ ಪಾತ್ರಧಾರಿಗಳ ಆಯ್ಕೆ ನಡೆಯಬೇಕಿದೆ. ಒಂದು ಮುಖ್ಯ ಪಾತ್ರದಲ್ಲಿ ಹಿರಿಯ ನಟ ದತ್ತಣ್ಣ ಅಭಿನಯಿಸಲಿದ್ದಾರೆ.