ನಗರಸಭೆ ಚುನಾವಣೆ: ತಿದ್ದುಪಡಿ ಅಧಿಸೂಚನೆ- ಪರಿಷ್ಕøತ ವೇಳಾಪಟ್ಟಿ ಪ್ರಕಟ

ಚಾಮರಾಜನಗರ:  ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಆಗಸ್ಟ್ 17 ರಂದು ಸಾರ್ವತ್ರಿಕ ರಜೆ ಘೋಷಿಸಿದ ಹಿನ್ನಲೆಯಲ್ಲಿ ಜಿಲ್ಲೆಯ ಕೊಳ್ಳೇಗಾಲ ಹಾಗೂ ಚಾಮರಾಜನಗರ ನಗರಸಭೆ ಚುನಾ ವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಿ ಪರಿಷ್ಕøತ ವೇಳಾ ಪಟ್ಟಿಯನ್ನು ಪ್ರಕಟಿಸಿದ್ದಾರೆ.

ಪರಿಷ್ಕ್ರತ ಚುನಾವಣಾ ವೇಳಾ ಪಟ್ಟಿ ಪ್ರಕಾರ ನಾಮಪತ್ರ ಸಲ್ಲಿಸಲು ಆಗಸ್ಟ್ 18 ಕಡೆಯ ದಿನವಾಗಿದೆ. ಆಗಸ್ಟ್ 20ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಆಗಸ್ಟ್ 23 ಕಡೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಆಗಸ್ಟ್ 31ರಂದು ಬೆಳಿಗ್ಗೆ 7ರಿಂದ ಸಂಜೆ 5ಗಂಟೆಯವರೆಗೆ ನಡಸಲಾಗುತ್ತದೆ. ಮರುಮತದಾನ ಇದ್ದಲ್ಲಿ ಸೆಪ್ಟೆಂಬರ್ 2ರಂದು ನಡೆಸಲಾಗುತ್ತದೆ.

ಮತಗಳ ಎಣಿಕೆ ಕಾರ್ಯವು ಆಯಾ ತಾಲೂಕು ಕೇಂದ್ರ ಸ್ಥಳದಲ್ಲಿ ಸೆಪ್ಟೆಂಬರ್ 3ರಂದು ಬೆಳಿಗ್ಗೆ 8ಗಂಟೆಗೆ ಆರಂಭವಾಗಲಿದೆ. ಸೆಪ್ಟೆಂಬರ್ 3ರಂದೇ ಚುನವಣಾ ಪ್ರಕ್ರಿಯೆ ಪೂರ್ಣಗೊಳ್ಳಿಲಿದೆ ಉಳಿದಂತ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ತಿಳಿಸಿದ್ದಾರೆ.