ನಗರಸಭೆ ಚುನಾವಣೆ: ವಿವಿಧ ಪಕ್ಷಗಳ ಪ್ರಮುಖರೊಂದಿಗೆ ಸಭೆ
ಕೊಡಗು

ನಗರಸಭೆ ಚುನಾವಣೆ: ವಿವಿಧ ಪಕ್ಷಗಳ ಪ್ರಮುಖರೊಂದಿಗೆ ಸಭೆ

December 12, 2018

ಮಡಿಕೇರಿ:  ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಮುಖಂ ಡರೊಂದಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಸಭೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆ ಗಳ ಸಾರ್ವತ್ರಿಕ ಚುನಾವಣೆ-2019 ಮಡಿಕೇರಿ ನಗರಸಭೆಯ ಕರಡು ಮತ ದಾರರ ಪಟ್ಟಿಯನ್ನು ಪ್ರಕಟಣೆ ಮಾಡಿ ಮಾತನಾಡಿದ ಜಿಲ್ಲಾ ಚುನಾವಣಾ ಅಧಿ ಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಪ್ರಕಟಣೆ ಮಾಡಿರುವ ಕರಡು ಮತ ದಾರರ ಪಟ್ಟಿಯಿಂದ ಬಾಧಿತರಾಗುವ ವ್ಯಕ್ತಿ ಗಳು ಆಕ್ಷೇಪಣೆಗಳನ್ನು ಸಂಬಂಧಪಟ್ಟ ತಾಲೂಕು ಕಚೇರಿ, ಮಡಿಕೇರಿ ಮತ್ತು ನಗರಸಭೆ ಮಡಿಕೇರಿ ಕಚೇರಿಗೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಗೆ ದಿನಾಂಕ 15-12-2018ರ ಒಳಗೆ ಸಲ್ಲಿಸಬಹುದಾಗಿದೆ ಎಂದು ವಿವಿಧ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸಿದರು. ಬಿಎಲ್‍ಒ ಅವರಿಗೆ ಕರುಡು ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವು ದಾದರೂ ದೂರುಗಳು ಬಂದಲ್ಲಿ ವಾರ್ಡ್ ವಾರು ದೂರುಗಳನ್ನು ಪರಿಶೀಲನೆ ಮಾಡಿ ಸರಿಪಡಿಸುವಂತೆ ಸಂಬಂಧಪಟ್ಟ ಅಧಿ ಕಾರಿಗಳಿಗೆ ನಿರ್ದೇಶನ ನೀಡಿದರು.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರದ ಮೂಲಕ ನಡೆ ಯಲಿದೆ. ವಿವಿಪ್ಯಾಟ್ ಇರುವುದಿಲ್ಲ ಎಂದು ಸಭೆಯಲ್ಲಿ ಅವರು ತಿಳಿಸಿದರು ಹಾಗೂ ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ 23 ವಾರ್ಡುಗಳಿದ್ದು, 26 ಮತಗಟ್ಟೆಗಳನ್ನು ತೆರೆ ಯಲಾಗುವುದು ಎಂದು ಅವರು ತಿಳಿಸಿದರು.

ಪ್ರಕಟಣೆ ಗೊಳಿಸಿರುವ ಕರುಡು ಮತ ದಾರರ ಪಟ್ಟಿಯಲ್ಲಿ ಹೆಸರುಗಳನ್ನು ಪರಿ ಶೀಲಿಸಿ ಯಾವುದಾದರೂ ಲೋಪಗಳು ಕಂಡುಬಂದಲ್ಲಿ ನಿಗದಿತ ದಿನಾಂಕದೊಳಗೆÉ ಆಕ್ಷೇಪಣೆಗಳನ್ನು ಸರಿಪಡಿಸಿಕೊಳ್ಳಲು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಸೂಚನೆ ನೀಡಿದರು.

ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.15 ಕೊನೆಯ ದಿನಾಂಕ, ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕೊನೆಯ ದಿನಾಂಕ ಡಿ.17 ರಿಂದ 20 ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಡಿ.26 ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾ ಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದರು. ಸಭೆ ಯಲ್ಲಿ ಮಡಿಕೇರಿ ತಹಶೀಲ್ದಾರ್ ಕುಸುಮ, ನಗರಸಭೆ ಆಯುಕ್ತ ರಮೇಶ್, ವಿವಿಧ ರಾಜ ಕೀಯ ಪಕ್ಷಗಳ ಪ್ರತಿನಿಧಿಗಳು, ಇತರರಿದ್ದರು.

Translate »