ನಗರಸಭೆ ಚುನಾವಣೆ ಮತ ಎಣಿಕೆ ಹಿನ್ನಲೆ: ಸೆಪ್ಟೆಂಬರ್ 3ರಂದು ನಿಷೇಧಾಜ್ಞೆ
ಚಾಮರಾಜನಗರ

ನಗರಸಭೆ ಚುನಾವಣೆ ಮತ ಎಣಿಕೆ ಹಿನ್ನಲೆ: ಸೆಪ್ಟೆಂಬರ್ 3ರಂದು ನಿಷೇಧಾಜ್ಞೆ

September 1, 2018

ಚಾಮರಾಜನಗರ:  ಜಿಲ್ಲೆಯ ಚಾಮರಾಜನಗರ ಮತ್ತು ಕೊಳ್ಳೇಗಾಲ ನಗರಸಭೆ ಚುನಾವಣೆ ಮತ ಎಣಿಕೆ ಕಾರ್ಯವು ಸೆಪ್ಟಂಬರ್ 3ರಂದು ನಡೆಯಲಿರುವ ಹಿನ್ನಲೆಯಲ್ಲಿ ಕೊಳ್ಳೇಗಾಲ ಮತ್ತು ಚಾಮರಾಜನಗರ ಟೌನ್ ವ್ಯಾಪ್ತಿಯಲ್ಲಿ ಸೆಪ್ಟಂಬರ್ 3ರಂದು ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12ಗಂಟೆಯವರೆಗೆ (ಮತ ಎಣಿಕೆ ಕೇಂದ್ರದ ಸಮೀಪ ಮತ ಎಣಿಕೆ ಮುಕ್ತಾಯದವರೆಗೆ ಹೊರತುಪಡಿಸಿ) ಮೆರೆವಣಿಗೆ, ಸಭೆ, ಸಮಾರಂಭ, ಪಟಾಕಿ ಸಿಡಿಸುವುದು, ಗುಂಪುಗೂಡುವುದು ಹಾಗೂ ವಿಜಯೋತ್ಸವ ಆಚರಣೆ ಇತ್ಯಾದಿಗಳನ್ನು ಸಿ.ಆರ್.ಪಿ.ಸಿ ಕಲಂ144ರ ಅನ್ವಯ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಕೊಳ್ಳೇಗಾಲದ ಸರ್ಕಾರಿ ಎಂ.ಜಿ.ಎಸ್.ವಿ ಜೂನಿಯರ್ ಕಾಲೇಜು ಮತ ಎಣಿಕೆ ಕೇಂದ್ರಗಳಾಗಿವೆ ಎಂದು ಪ್ರಕಟಣೆ ತಿಳಿಸಿದೆ.

Translate »