ನಗರಸಭೆ ಚುನಾವಣೆ: ಬಿಜೆಪಿ ನಗರ ಘಟಕದಿಂದ ಸಭೆ
ಹಾಸನ

ನಗರಸಭೆ ಚುನಾವಣೆ: ಬಿಜೆಪಿ ನಗರ ಘಟಕದಿಂದ ಸಭೆ

August 6, 2018

ಹಾಸನ: ಅಗಸ್ಟ್ 29ರಂದು ನಡೆಯಲಿರುವ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ಎಂ.ಜಿ. ರಸ್ತೆ ಬಳಿಯ ಕಲ್ಯಾಣ ಮಂಟಪದಲ್ಲಿ ಬಿಜೆಪಿಯ ನಗರ ಘಟಕದ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ಪ್ರೀತಮ್ ಜೆ.ಗೌಡ ಮಾತನಾಡಿ, ಕೇಂದ್ರ ಬಿಜೆಪಿ ಆಡಳಿತದ ಮತ್ತು ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಅವಧಿಯಲ್ಲಿ ಮಾಡಿದ ಜನಪರ ಕೆಲಸಗಳನ್ನು ನಗರದ ಜನರಿಗೆ ಮುಟ್ಟಿಸುವ ಕೆಲಸವನ್ನು ಮಾಡಬೇಕು. ನಗರಸಭೆ ಚುನಾವಣೆಯಲ್ಲಿ ನಗರದ 35 ವಾರ್ಡ್‍ಗಳಲ್ಲೂ ಉತ್ತಮ ಅಭ್ಯರ್ಥಿಯನ್ನು ನಿಲ್ಲಿಸಿ ಗೆಲ್ಲಿಸುವ ಕೆಲಸ ಎಲ್ಲಾ ಒಟ್ಟಾಗಿ ಮಾಡುವಂತೆ ಕಾರ್ಯಕರ್ತರಲ್ಲಿ ಧೈರ್ಯ ತುಂಬಿದರು. ಈ ಬಾರಿ ನಗರಸಭೆಯಲ್ಲಿ ಹೆಚ್ಚು ಸ್ಥಾನಗಳಿಸುವ ಮೂಲಕ ನಗರ ಅಭಿವೃದ್ಧಿಗೆ ಪ್ರಾಮುಖ್ಯತೆ ಕೊಡುವಂತೆ ಮನವಿ ಮಾಡಿದರಲ್ಲದೆ, ಸಕ್ರಿಯವಾಗಿ ಚುನಾವಣೆಗೆ ತಯಾರಾಗಿ ಶ್ರಮಿಸುವಂತೆ ಕರೆ ನೀಡಿದರು.

ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ, ನಗರಾಧ್ಯಕ್ಷ ಶೋಭನ್ ಬಾಬು, ಮುಖಂಡ ಕಮಲ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇಣು ಗೋಪಾಲ್, ಚಂದ್ರು ಇತರರಿದ್ದರು.

Translate »