ಪುರಸಭೆ ಮುಖ್ಯಾಧಿಕಾರಿ, ಆರೋಗ್ಯ ನಿರೀಕ್ಷಕರ ವಜಾಗೊಳಿಸಲು ಒತ್ತಾಯಿಸಿ ಪ್ರತಿಭಟನೆ
ಮೈಸೂರು

ಪುರಸಭೆ ಮುಖ್ಯಾಧಿಕಾರಿ, ಆರೋಗ್ಯ ನಿರೀಕ್ಷಕರ ವಜಾಗೊಳಿಸಲು ಒತ್ತಾಯಿಸಿ ಪ್ರತಿಭಟನೆ

March 3, 2021

ಮೈಸೂರು,ಮಾ.2(ಪಿಎಂ)- ಮಂಡ್ಯ ಜಿಲ್ಲೆಯ ಮದ್ದೂರು ಪುರಸಭೆಯ ಒಳಚರಂಡಿ ಪೌರಕಾರ್ಮಿಕ ನಾರಾಯಣ ಆತ್ಮಹತ್ಯೆಗೆ ಪುರಸಭೆಯ ಮುಖ್ಯಾಧಿಕಾರಿ, ಆರೋಗ್ಯ ನಿರೀಕ್ಷಕ ಕಾರಣ ಎಂದು ಆರೋಪಿಸಿ ಹಾಗೂ ಈ ಇಬ್ಬರು ಅಧಿಕಾರಿಗಳನ್ನು ಕೆಲಸದಿಂದ ವಜಾಗೊಳಿ ಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಪೌರಕಾರ್ಮಿಕರ ಸಂಘದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾ ಯಿಸಿದ ಪ್ರತಿಭಟನಾಕಾರರು, ನಾರಾಯಣ ಆತ್ಮಹತ್ಯೆ ಮಾಡಿಕೊಳ್ಳಲು ಮದ್ದೂರು ಪುರಸಭೆ ಮುಖ್ಯಾಧಿಕಾರಿ ಮುರುಗೇಶ್ ಹಾಗೂ ಆರೋಗ್ಯ ನಿರೀಕ್ಷಕ ಜಾಸಿಂ ಖಾನ್ ಅವರೇ ಕಾರಣ ಎಂದು ಆರೋಪಿಸಿದರ ಲ್ಲದೆ, ಈ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳುವ ಜೊತೆಗೆ ಮೃತ ನಾರಾಯಣ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಕಟ್ಟಿಕೊಂಡಿದ್ದ ಮ್ಯಾನ್‍ಹೋಲ್ ಸ್ವಚ್ಛಗೊಳಿಸಲು ಮುಖ್ಯಾಧಿಕಾರಿ ಹಾಗೂ ಆರೋಗ್ಯ ನಿರೀಕ್ಷಕರು, ನಾರಾ ಯಣರನ್ನು ಅದರೊಳಗೆ ಇಳಿಸಿದ್ದರು. ಮಾತ್ರವಲ್ಲ ಮಲವನ್ನು ಬರಿಗೈಯಲ್ಲಿ ಸ್ವಚ್ಛಗೊಳಿಸುವಂತೆ ಮಾಡಿ ದ್ದಾರೆ. ಇದರ ವಿಡಿಯೋ ಮಾಧ್ಯಮಗಳಲ್ಲಿ ವರದಿ ಯಾಗಿತ್ತು. ವಿಡಿಯೋ ಮಾಧ್ಯಮಕ್ಕೆ ತಲುಪಲು ಪುರ ಸಭೆಯ ಹೊರಗುತ್ತಿಗೆ ವಾಹನ ಚಾಲಕ ಶ್ರೀನಿವಾಸ ಕಾರಣ ಎಂದು ಅವರನ್ನು ಏಕಾಏಕಿ ಕೆಲಸದಿಂದ ಕೈಬಿಡ ಲಾಗಿತ್ತು. ಈ ಸಂಬಂಧ ಹೊರಗುತ್ತಿಗೆ ವಾಹನ ಚಾಲ ಕರ ಸಂಘ ಪ್ರತಿಭಟನೆ ನಡೆಸಿ, ಇಡೀ ಪ್ರಕರಣವನ್ನು ಪೌರಾಡಳಿತ ನಿರ್ದೇಶನಾಲಯ ಹಾಗೂ ಸಫಾಯಿ ಕರ್ಮಚಾರಿ ಆಯೋಗದ ಗಮನಕ್ಕೆ ತಂದಿತ್ತು. ಇದ ರಿಂದ ಕೆರಳಿದ ಪುರಸಭೆ ಅಧಿಕಾರಿಗಳು `ತಾನೇ ಸ್ವಯಂ ಆಗಿ ಮ್ಯಾನ್‍ಹೋಲ್‍ಗೆ ಇಳಿದಿದ್ದೆ’ ಎಂದು ಹೇಳಿಕೆ ನೀಡುವಂತೆ ನಾರಾಯಣ ಅವರನ್ನು ಬೆದ ರಿಸಿದ್ದರು ಎಂದು ಆರೋಪಿಸಿದರು.

ಅಧಿಕಾರಿಗಳ ಬೆದರಿಕೆ ಹಿನ್ನೆಲೆಯಲ್ಲಿ ಫೆ.23ರಂದು ನಾರಾಯಣ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಅಲ್ಲದೆ, ತನ್ನ ಸಾವಿಗೆ ಮುಖ್ಯಾಧಿಕಾರಿ ಹಾಗೂ ಆರೋಗ್ಯ ನಿರೀಕ್ಷಕರೇ ಕಾರಣ ಎಂದು ಡೆತ್ ನೋಟ್ ಸಹ ಬರೆದಿದ್ದಾರೆ. ಸದರಿ ಪ್ರಕರಣದ ಹಿನ್ನೆಲೆ ಯಲ್ಲಿ ಈ ಇಬ್ಬರು ಅಧಿಕಾರಿಗಳು ಅಮಾನತು ಗೊಂಡಿದ್ದು, ಕೂಡಲೇ ಇವರನ್ನು ಕೆಲಸದಿಂದಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕ ದ್ದಮೆ ದಾಖಲಿಸಿ 5 ವರ್ಷ ಕಠಿಣ ಶಿಕ್ಷೆ ವಿಧಿಸುವ ಜೊತೆಗೆ ತಲಾ 50 ಸಾವಿರ ರೂ. ದಂಡ ವಿಧಿಸಬೇಕು. ಪೊಲೀಸ್ ಠಾಣೆಯಲ್ಲಿ ಸದರಿ ಅಧಿಕಾರಿಗಳ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆ ಯಲ್ಲಿ ಇಬ್ಬರು ಅಧಿಕಾರಿಗಳನ್ನು ಕೂಡಲೇ ಬಂಧಿಸ ಬೇಕು. ನಾರಾಯಣ ಅವರ 3 ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು ಎಂದು ಒತ್ತಾಯಿಸಿದರು. ಸಂಘದ ಗೌರವಾಧ್ಯಕ್ಷ ಆರ್ಟಿಸ್ಟ್ ಎಸ್.ನಾಗರಾಜು, ಅಧ್ಯಕ್ಷ ತಲ ಪರಮೇಶ್, ಸಲಹೆಗಾರ ಮಾದೇವ, ಕಾರ್ಯದರ್ಶಿ ಹೆಚ್.ಆರ್.ಪರಮೇಶ್ವರ್, ಸಂಚಾಲಕ ಎನ್.ಪಿ.ಗುರು ದತ್, ನಂಜನಗೂಡು ಪುರಸಭೆ ಸದಸ್ಯ ಮುರುಗೇಶ್, ಆದಿದ್ರಾವಿಡ ಸಂಘದ ಮಾಜಿ ನಗರಾಧ್ಯಕ್ಷ ಸುಂದರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

 

Translate »