ಮೈಸೂರು, ಸೆ.29(ಎಸ್‍ಬಿಡಿ)- ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಮುನಿರತ್ನ ಮಂಗಳವಾರ ಮೈಸೂರಿಗೆ ಆಗಮಿಸಿ, ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಉಪಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ನನಗೆ ಕೊರೊನಾ ಪಾಸಿಟಿವ್ ಆಗಿತ್ತು. ನಿನ್ನೆ ಮತ್ತೆ ಪರೀಕ್ಷೆ ಮಾಡಿಸಿದಾಗ ನೆಗೆಟಿವ್ ಬಂದಿದೆ. ಹಾಗಾಗಿ ಇಂದು ದೇವರ ದರ್ಶನಕ್ಕೆ ಬಂದಿದ್ದೇನೆ ಎಂದರು.
ರಾಜರಾಜೇಶ್ವರಿನಗರ ಅಭಿವೃದ್ಧಿಯಾಗು ತ್ತಿರುವ ಕ್ಷೇತ್ರ. ನಮ್ಮ ಸರ್ಕಾರ ಇದೆ, ನಮ್ಮ ನಾಯಕರಿದ್ದಾರೆ. ನಮ್ಮ ಮುಖ್ಯಮಂತ್ರಿ ಇದ್ದಾರೆ. ಈ ಅವಕಾಶ ಉಪಯೋಗಿಸಿ ಕೊಂಡು ಕ್ಷೇತ್ರದ ಅಭಿವೃದ್ಧಿ ಮಾಡುತ್ತೇವೆ. ಎಲ್ಲರ ಆಶೀರ್ವಾದದಿಂದ ಉಪಚುನಾವಣೆ ಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ. ಮತ್ತಷ್ಟು ಅಭಿವೃದ್ಧಿ ದೃಷ್ಟಿಯಿಂದ ಆಡಳಿತ ಪಕ್ಷದ ಶಾಸಕನ ಅವಶ್ಯಕತೆ ಇದೆ ಎಂಬುದು ಜನರಿಗೆ ತಿಳಿದಿದೆ ಎಂದರು.
ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿ, ಯಾವ ವಿಚಾರದ ಬಗ್ಗೆಯೂ ಪಕ್ಷದಲ್ಲಿ ಗೊಂದಲ ವಿಲ್ಲ. ಆಂತರಿಕ ಗೊಂದಲಗಳಿದ್ದರೆ ವರಿ ಷ್ಠರು ಬಗೆಹರಿಸುತ್ತಾರೆ. ಉಪಚುನಾ ವಣೆಗೆ ಟಿಕೆಟ್ ನೀಡುವ ಬಗ್ಗೆಯೂ ವರಿ ಷ್ಠರು ತೀರ್ಮಾನಿಸುತ್ತಾರೆ. ರಾಜರಾಜೇಶ್ವರಿ ನಗರ ಕ್ಷೇತ್ರವನ್ನು ಬಿಜೆಪಿ ತನ್ನ ತೆಕ್ಕೆಗೆ ಹಾಕಿ ಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜರಾಜೇಶ್ವರಿನಗರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಆರ್.ಮುನಿರತ್ನ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರ್ಪಡೆ ಯಾಗಿದ್ದಾರೆ. ಇವರೊಂದಿಗೆ ಬಿಜೆಪಿ ಸೇರಿದ ಇತರೆ ನಾಯಕರ ಕ್ಷೇತ್ರಗಳಲ್ಲಿ ಉಪ ಚುನಾ ವಣೆಗೆ ಅವಕಾಶ ನೀಡಿದ್ದ ಚುನಾವಣಾ ಆಯೋಗ, 2018 ಚುನಾವಣೆ ಫಲಿತಾಂಶದ ಬಗ್ಗೆ ತಕರಾರು ಅರ್ಜಿಗಳು ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಹಿನ್ನೆಲೆ ಯಲ್ಲಿ ರಾಜರಾಜೇಶ್ವರಿನಗರ ವಿಧಾನಸಭಾ ಚುನಾ ವಣೆ ನಡೆಸಿರಲಿಲ್ಲ. ಹಾಗೆಯೇ ಶಿರಾ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಸತ್ಯನಾರಾಯಣ ಅವರ ನಿಧನದಿಂದಾಗಿ ಆ ಸ್ಥಾನ ತೆರವಾಗಿದೆ. ಈ ಎರಡೂ ಕ್ಷೇತ್ರ ಗಳಲ್ಲಿ ನ.3ರಂದು ಉಪ ಚುನಾವಣೆ ನಡೆಯಲಿದೆ. ಕಾಂಗ್ರೆಸ್‍ನಿಂದ ಬಿಜೆಪಿಗೆ ಬಂದರೂ, ಸದ್ಯಕ್ಕೆ ಅತಂತ್ರ ಸ್ಥಿತಿಯ ಲ್ಲಿರುವ ಮುನಿರತ್ನ, ಟಿಕೆಟ್ ಪಡೆದು, ಗೆಲ್ಲ ಲೇಬೇಕಾದ ಅನಿವಾರ್ಯ ಪರಿಸ್ಥಿತಿಯಲ್ಲಿದ್ದಾರೆ.