ಸಂಗೀತ ನಿರ್ದೇಶಕ ಆದಿತ್ಯ ಪೌಡ್ವಾಲ್ ವಿಧಿವಶ

ಮುಂಬಯಿ, ಸೆ. 12- ಸಂಗೀತ ನಿರ್ದೇಶಕ ಹಾಗೂ ಹಿರಿಯ ಗಾಯಕಿ ಅನುರಾಧ ಪೌಡ್ವಾಲ್ ಅವರ ಪುತ್ರ ಆದಿತ್ಯ ಪೌಡ್ವಾಲ್ ಶನಿವಾರ ನಿಧನರಾಗಿದ್ದಾರೆ. ಆದಿತ್ಯ ಅವರಿಗೆ ಕೇವಲ 35 ವರ್ಷ. ಹಲವು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದರು. ಅವರಿಗೆ ಅಧಿಕ ರಕ್ತದೊತ್ತಡವಿತ್ತು ಎಂದು ಗಾಯಕ ಶಂಕರ್ ಮಹದೇವನ್ ತಿಳಿಸಿದ್ದಾರೆ. ಕಿಡ್ನಿ ವೈಫಲ್ಯದಿಂದ ಅವರು ವಿಧಿವಶ ರಾಗಿದ್ದಾರೆ, ಕಳೆದ ನಾಲ್ಕು ದಿನಗಳಿಂದ ಆಸ್ಪತ್ರೆ ಐಸಿಯುನಲ್ಲಿ ದಾಖಲಾಗಿದ್ದರು. ಹಲವು ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿರುವ ಆದಿತ್ಯ ನವಾಜುದ್ದೀನ್ ಸಿದ್ಧಕಿ ನಟನೆಯ ಥ್ಯಾಕರೆ ಸಿನಿಮಾಗೆ ಸಂಗೀತ ನೀಡಿದ್ದಾರೆ.