ಮುತ್ತಮ್ಮ ಚಾಮರಾಜನಗರ ಲೋಕಾಯುಕ್ತ ನ್ಯಾಯಾಲಯದ ಅಭಿಯೋಜಕಿ
ಮೈಸೂರು

ಮುತ್ತಮ್ಮ ಚಾಮರಾಜನಗರ ಲೋಕಾಯುಕ್ತ ನ್ಯಾಯಾಲಯದ ಅಭಿಯೋಜಕಿ

December 20, 2019

xಮೈಸೂರು, ಡಿ.19(ಆರ್‍ಕೆ)- ಚಾಮರಾಜನಗರ ಲೋಕಾಯುಕ್ತ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಮೈಸೂ ರಿನ ಮುತ್ತಮ್ಮ ಪೂಣಚ್ಚ ಅವರನ್ನು ನೇಮಿಸಲಾಗಿದೆ. ಡಿಸೆಂಬರ್ 7ರಂದು ಮುತ್ತಮ್ಮ ಅವರು ಚಾಮರಾಜನಗರ ನ್ಯಾಯಾಲಯದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ. ಈ ಹಿಂದೆ ಅವರು ಮೈಸೂರಿನ ಲೋಕಾಯುಕ್ತ ವಿಶೇಷ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾಗಿ ಸೇವೆ ಸಲ್ಲಿಸಿ ಸಮರ್ಥವಾಗಿ ಸರ್ಕಾರದ ಪರ ವಾದ ಮಂಡಿಸುವ ಮೂಲಕ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

Translate »