ಮುಖ್ಯಮಂತ್ರಿ ಅವರ ಸಂಸದೀಯ ಕಾರ್ಯದರ್ಶಿಯಾಗಿ  ಎಂ.ವಿ.ಗೋಪಾಲಸ್ವಾಮಿ ಪ್ರಮಾಣ ವಚನ ಸ್ವೀಕಾರ
ಹಾಸನ

ಮುಖ್ಯಮಂತ್ರಿ ಅವರ ಸಂಸದೀಯ ಕಾರ್ಯದರ್ಶಿಯಾಗಿ ಎಂ.ವಿ.ಗೋಪಾಲಸ್ವಾಮಿ ಪ್ರಮಾಣ ವಚನ ಸ್ವೀಕಾರ

February 15, 2019

ಹಾಸನ: ಮುಖ್ಯಮಂತ್ರಿ ಅವರ ಸಂಸದೀಯ ಕಾರ್ಯದರ್ಶಿಯಾಗಿ (ಜಲ ಸಂಪ ನ್ಮೂಲ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ) ವಿಧಾನ ಪರಿಷತ್ ಸದಸ್ಯರಾದ ಜಿಲ್ಲೆಯ ಎಂ.ವಿ.ಗೋಪಾಲಸ್ವಾಮಿ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವರಾದ ಡಿ.ಕೆ.ಶಿವಕುಮಾರ್, ಜಿ.ಟಿ.ದೇವೇಗೌಡ, ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ, ಡಾ.ಜಯಮಾಲ ಸೇರಿದಂತೆ 20 ಮಂದಿ ಶಾಸಕರು ಹಾಜರಿದ್ದು, ಎಂ.ವಿ.ಗೋಪಾಲಸ್ವಾಮಿ ಅವರನ್ನು ಅಭಿನಂದಿಸಿದರು.

Translate »