ಮೈಸೂರು-ಬೆಂಗಳೂರು ಆರು ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸೆಪ್ಟೆಂಬರ್ ನಲ್ಲಿ ಚಾಲನೆ
ಮೈಸೂರು

ಮೈಸೂರು-ಬೆಂಗಳೂರು ಆರು ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸೆಪ್ಟೆಂಬರ್ ನಲ್ಲಿ ಚಾಲನೆ

July 24, 2018

ಬೆಂಗಳೂರು: ಮೈಸೂರು-ಬೆಂಗಳೂರು ನಡುವಿನ 6,800 ಕೋಟಿ ರೂ. ವೆಚ್ಚದ ಆರು ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಸೆಪ್ಟೆಂಬರ್‍ನಲ್ಲಿ ಆರಂಭವಾಗಲಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಇಂದಿಲ್ಲಿ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಂಗಳೂರು-ಮೈಸೂರು ನಡುವಿನ ಆರು ಪಥದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚಿಸಿದ್ದು, ಸಮ್ಮತಿ ನೀಡಿದ್ದಾರೆ. ಸೆಪ್ಟೆಂಬರ್ ಮೊದಲ ವಾರ ಕಾಮಗಾರಿ ಆರಂಭ ವಾಗಲಿದೆ ಎಂದರು.

ಈ ಮಾರ್ಗ ನಿರ್ಮಾಣಕ್ಕೆ ಈಗಾಗಲೇ ಶೇ. 63ರಷ್ಟು ಭೂಸ್ವಾಧೀನ ಮುಗಿದಿದೆ, ಇನ್ನು 10 ದಿನದಲ್ಲಿ ಶೇ. 17ರಷ್ಟು ಭೂ ಸ್ವಾಧೀನ ಪೂರ್ಣಗೊಳ್ಳಲಿದೆ, ನಂತರ ಹಾಲಿ ಮಾರ್ಗದ ಇಕ್ಕೆಲಗಳಲ್ಲಿ ಅಳವಡಿ ಸಿರುವ ಬೆಸ್ಕಾಂ ಕೇಬಲ್, ನೀರಿನ ಕೊಳವೆ, ದೂರವಾಣಿ ಸಂಪರ್ಕ ಕೇಬಲ್‍ಗಳ ತೆರವು ಮಾಡಲಾಗುತ್ತದೆ. ಕೆಲವೆಡೆ ಅರಣ್ಯ ಇಲಾ ಖೆಯ ಜಾಗ ಅಗತ್ಯವಿದ್ದು, ಆ ಇಲಾಖೆ ಯೊಂದಿಗಿನ ಸಮಸ್ಯೆ ಇತ್ಯರ್ಥಪಡಿಸಿ ಕಾಮಗಾರಿ ಆರಂಭಿಸಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಿದೆ. ಈ ಮಾರ್ಗದ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ಸಂಪೂರ್ಣ ಕೈಗೊಳ್ಳಲಿದೆ, ಗುಣಮಟ್ಟದ ಕಾಮಗಾರಿ ನಡೆಸಲಾಗು ತ್ತದೆ, ರಾಜ್ಯ ಮೇಲುಸ್ತುವಾರಿ ಮಾಡಲಿದೆ.

ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿ ಗಳ ನಿರ್ಮಾಣಕ್ಕೆ ಕೇಂದ್ರ 37 ಸಾವಿರ ಕೋಟಿ ರೂ. ನೀಡಿದೆ. ಇದರಲ್ಲಿ 10,022 ಕೋಟಿ ರೂ. ಕೊಡಗು, ಶಿವಮೊಗ್ಗ, ಮೈಸೂರು, ಬೆಳಗಾವಿ, ತುಮಕೂರು, ಚಿತ್ರದುರ್ಗ ಜಿಲ್ಲೆ ಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ 466.84 ಕಿ.ಮೀ. ರಸ್ತೆ ಅಭಿ ವೃದ್ಧಿಗೆ ಬಳಕೆ

ಮಾಡಿಕೊಳ್ಳಲಾಗುತ್ತದೆ ಎಂದರು. ಮಲೆನಾಡು, ಕರಾವಳಿ ಭಾಗದಲ್ಲಿ ಅತಿವೃಷ್ಟಿಯಿಂದ ರಸ್ತೆಗಳು ಹಾಳಾಗಿವೆ, ತಾತ್ಕಾಲಿಕವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ. ಮಳೆಗಾಲದ ನಂತರ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ.
ಚಾರ್ಮಾಡಿ ಘಾಟ್ ರಸ್ತೆ ದುರಸ್ತಿಗೆ 250 ಕೋಟಿ ರೂ. ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಿರಾಡಿ ಘಾಟ್ ರಸ್ತೆ ಕಾಮಗಾರಿ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಪೂರ್ಣಗೊಂಡಿದ್ದು, ಇನ್ನು 15 ದಿನಗಳಲ್ಲಿ ಈ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲು ಯತ್ನಿಸಲಾಗುವುದು.

ಈ ಬಾರಿ ಕ್ರಿಯಾ ಯೋಜನೆಯಡಿ ಕೇಂದ್ರದಿಂದ ರಾಜ್ಯಕ್ಕೆ 600 ಕೋಟಿ ರೂ. ದೊರೆತಿದೆ, ಇದರಲ್ಲಿ 500 ಕೋಟಿ ರೂ. ಸಿಗಂಧೂರು ಸೇತುವೆ ನಿರ್ಮಾಣಕ್ಕೆ, ಗುರುಪುರ ಸೇತುವೆ ನಿರ್ಮಾಣಕ್ಕೆ 40 ಕೋಟಿ ರೂ. ಬಳಕೆ ಮಾಡಿಕೊಳ್ಳಲಾಗುವುದು ಎಂದರು. ಮಲೆನಾಡು, ಘಟ್ಟ ಪ್ರದೇಶ ಹಾಗೂ ಕರಾವಳಿ ಭಾಗದಲ್ಲಿ ಹೊಳೆ ದಾಟಲು ಮರಗಳನ್ನು ಬಳಕೆ ಮಾಡಲಾಗುತ್ತಿದೆ, ಇದು ಅಪಾಯವಾದ್ದರಿಂದ, ಅಗತ್ಯವಿರುವೆಡೆ ಮಾತ್ರ ಕಾಲು ಸಂಕಗಳನ್ನು ನಿರ್ಮಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಅವರು, ಬೇರೆ ಇಲಾಖೆಯಲ್ಲಿ ತಾವು ಹಸ್ತಕ್ಷೇಪ ಮಾಡುತ್ತಿಲ್ಲ, ಇಲ್ಲಸಲ್ಲದ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದರು. ನಮ್ಮ ಭಾಗದಲ್ಲಿ ಆಗಬೇಕಿರುವ ಕೆಲಸಕ್ಕೆ ಸಂಬಂಧಿಸಿದಂತೆ ಮುಜರಾಯಿ ಸಚಿವರಿಗೆ ಬರೆದ ಪತ್ರವನ್ನೇ ಹಸ್ತಕ್ಷೇಪ ಎಂದರೆ ಹೇಗೆ? ಎಂದು ಪ್ರಶ್ನಿಸಿದರು. ಸುಪ್ರೀಂ ಕೋರ್ಟ್ ಆದೇಶದನ್ವಯ ಇಲಾಖೆಯಲ್ಲಿ ಕಾನೂನು ಪ್ರಕಾರವೇ ಇಂಜಿನಿಯರ್‍ಗಳ ಬಡ್ತಿ ನಡೆಯುತ್ತಿವೆ ಎಂದರು.

 

Translate »