ದಸರಾ ವೇಳೆಗೆ ಮೈಸೂರು-ಬೇಲೂರು-ಹಳೇಬೀಡು  ಪ್ರವಾಸೋದ್ಯಮ ಸಕ್ರ್ಯೂಟ್ ಉದ್ಘಾಟನೆಗೆ ಸಿಎಂ ಸೂಚನೆ
News

ದಸರಾ ವೇಳೆಗೆ ಮೈಸೂರು-ಬೇಲೂರು-ಹಳೇಬೀಡು ಪ್ರವಾಸೋದ್ಯಮ ಸಕ್ರ್ಯೂಟ್ ಉದ್ಘಾಟನೆಗೆ ಸಿಎಂ ಸೂಚನೆ

August 20, 2022

ಬೆಂಗಳೂರು, ಆ.19(ಕೆಎಂಶಿ)- ರಾಜ್ಯ ದಲ್ಲಿ ಮುಂದಿನ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಬೇಕು. ಈ ದೃಷ್ಟಿಯಿಂದ ಪರಿಣಾಮಕಾರಿ ಪ್ರಚಾರ ಹಾಗೂ ಪ್ರವಾಸಿ ತಾಣಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅಧಿ ಕಾರಿಗಳಿಗೆ ಸೂಚಿಸಿದರು. ಪ್ರವಾಸೋದ್ಯಮ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿ ಮಾತ ನಾಡಿದ ಅವರು, ರಾಜ್ಯದ ಆರ್ಥಿಕ ಪ್ರಗತಿ ಹಾಗೂ ಸಾಂಸ್ಕೃತಿಕವಾಗಿಯೂ ಪ್ರವಾಸೋ ದ್ಯಮ ಮಹತ್ವದ ಪಾತ್ರ ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಅಭಿ ವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದು ತಿಳಿಸಿದರು. ಆಯವ್ಯಯದಲ್ಲಿ ಘೋಷಿಸಿದಂತೆ ಮೈಸೂರು- ಬೇಲೂರು-ಹಳೇಬೀಡು ಹಾಗೂ ಹಂಪಿ- ಬಾದಾಮಿ- ಐಹೊಳೆ-ಪಟ್ಟದಕಲ್ಲು ಪ್ರವಾಸೋದ್ಯಮ ಸಕ್ರ್ಯೂಟ್‍ಗಳನ್ನು ಶೀಘ್ರವೇ ಅಭಿವೃದ್ಧಿಪಡಿಸಿ, ದಸರಾ ವೇಳೆಗೆ ಮೈಸೂರು ಸಕ್ರ್ಯೂಟ್ ಹಾಗೂ ದೀಪಾವಳಿ ವೇಳೆಗೆ ಹಂಪಿ ಸಕ್ರ್ಯೂಟ್ ಉದ್ಘಾ ಟನೆಗೆ ಸಿದ್ಧವಾಗಬೇಕೆಂದು ಸೂಚಿಸಿದರು. ಈ ಸಕ್ರ್ಯೂಟ್‍ನಲ್ಲಿ ಸಾಹಸ ಕ್ರೀಡೆ ಹಾಗೂ ಮನರಂಜನಾ ಚಟುವಟಿಕೆಗಳನ್ನೂ ಸೇರ್ಪಡೆಗೊಳಿಸುವಂತೆ ತಿಳಿಸಿದರು. ರಾಜ್ಯದಲ್ಲಿರುವ ಸ್ಮಾರಕಗಳ ಸಂರಕ್ಷಣೆ ಮತ್ತು ನಿರ್ವಹಣೆಗಾಗಿ ಈ ಆಯವ್ಯಯದಲ್ಲಿ ಘೋಷಿಸಿರುವ ಸ್ಮಾರಕಗಳನ್ನು ದತ್ತು ಪಡೆಯುವ ಯೋಜನೆಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಸ್ಮಾರಕಗಳ ವಿವರ ಹಾಗೂ ತಗಲುವ ವೆಚ್ಚದ ಪಟ್ಟಿ ಸಿದ್ಧಪಡಿಸಿಕೊಂಡು, ವೆಬ್‍ಸೈಟ್ ರೂಪಿಸಬೇಕು ಎಂದರು.

ಜೊತೆಗೆ ಈ ಕುರಿತು ಕಾಪೆರ್Çರೇಟ್ ಕಂಪೆನಿಗಳಿಗೆ ಖುದ್ದಾಗಿ ಪತ್ರ ಬರೆಯುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತರೊಂದಿಗೆ ಸಮನ್ವಯ ಸಾಧಿಸುವಂತೆ ಪ್ರವಾಸೋದ್ಯಮ ಇಲಾಖೆಗೆ ಸೂಚಿಸಿದರು. ಬದಾಮಿಯ ಗುಹೆಗಳನ್ನು ಇನ್ನಷ್ಟು ಆಕರ್ಷಕವಾಗಿಸುವ ಹಾಗೂ ಅಲ್ಲಿ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯೊಂದಿಗೆ ಸಭೆ ನಡೆಸಿ ಚರ್ಚಿಸುವುದಾಗಿ ಹೇಳಿದರು. ಪರ್ವತಮಾಲಾ ಮತ್ತು ರಾಜ್ಯ ಸರ್ಕಾರದ ಯೋಜನೆಗಳಡಿ ನಂದಿಬೆಟ್ಟ, ಯಾಣ, ಅಂಜನಾದ್ರಿ ಬೆಟ್ಟ, ಮುಳ್ಳಯ್ಯನಗಿರಿ ದತ್ತಪೀಠ ಬೆಟ್ಟದಲ್ಲಿ ರೋಪ್‍ವೇ ನಿರ್ಮಿಸುವ ಕುರಿತು ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದ ಜಿಲ್ಲಾಧಿಕಾರಿ ಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿ, ತ್ವರಿತವಾಗಿ ಭೂಸ್ವಾಧೀನ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದರು.

ಕಡಲ ತೀರದಲ್ಲಿ ಪರಿಸರ ಸ್ನೇಹಿ ಪ್ರವಾಸೋದ್ಯಮ ಉತ್ತೇಜಿಸಲು ಸಿ.ಆರ್.ಝಡ್ ಮಾನದಂಡಗಳನ್ನು ಸಡಿಲಗೊಳಿಸಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ, ಅನುಮೋದನೆ ಪಡೆಯಲು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಿಂದ ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುಕೂಲವಾಗಲಿದೆ. ಬೀದರ್ ಹಾಗೂ ಕಲಬುರಗಿ ಕೋಟೆಗಳ ಪುನರುಜ್ಜೀವನಕ್ಕೆ ಕ್ರಮ ವಹಿಸಲಾಗುತ್ತಿದ್ದು, ಇದರೊಂದಿಗೆ ಸುರಪುರ ಕೋಟೆಯನ್ನೂ ಸೇರ್ಪಡೆಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿಯಾಗಿರುವ 400 ಪ್ರವಾಸಿ ಮಾರ್ಗ ದರ್ಶಿಗಳಿಗೆ ಮಾಸಿಕ 2000 ರೂ. ಪೆÇ್ರೀತ್ಸಾಹ ಧನ ನೀಡಲಾಗುತ್ತಿದೆ. ಅವರಿಗೆ ಹಂಪಿ ವಿಶ್ವವಿದ್ಯಾಲಯದಲ್ಲಿ ಸಂವಹನ ಕೌಶಲ್ಯ ತರಬೇತಿ ನೀಡಲು ಸಿದ್ಧತೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಹಾವೇರಿ ಜಿಲ್ಲೆಯ ನವಿಲು ಧಾಮ, ಬಾಡ ಅರಮನೆ, ಶಿಲಾ ಉದ್ಯಾನ, ಜನಪದ ವಿವಿ ವಸ್ತುಸಂಗ್ರಹಾಲಯ, ಶಿಶುನಾಳ ಹಾಗೂ ಸವಣೂರನ್ನು ಒಳಗೊಂಡ ಪ್ರವಾಸಿ ಸರ್ಕ್ಯುಟ್ ಪ್ರಾರಂಭಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಪ್ರವಾಸೋದ್ಯಮ ಇಲಾಖೆಯ ವೆಬ್‍ಸೈಟನ್ನು ಉಪಯುಕ್ತ ಮಾಹಿತಿಯೊಂದಿಗೆ, ಬಳಕೆದಾರ ಸ್ನೇಹಿಯಾಗಿ ಮರುವಿನ್ಯಾಸಗೊಳಿಸುವಂತೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸ್ವತ್ತುಗಳ ಆಡಿಟ್ ನಡೆಸಿ, ಆದಾಯೋತ್ಪನ್ನ ತರುವಂತೆ ಮಾಡಲು ಕ್ರಮ ವಹಿಸುವಂತೆ ನಿರ್ದೇಶಿಸಿದರು. ರಾಜ್ಯದಲ್ಲಿ ಕಾಳಿ ನದಿ, ಆಲಮಟ್ಟಿ ಹಾಗೂ ಕಾವೇರಿ ನದಿ ಪ್ರದೇಶಗಳಲ್ಲಿ ಜಲಮಾರ್ಗಗಳನ್ನು ರೂಪಿಸಿ, ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸುವುದರ ಜೊತೆಗೆ ರಾಜ್ಯದ 10-12 ಕೆರೆಗಳ ಬಳಿ ಪ್ರವಾಸಿ ಸೌಲಭ್ಯಗಳ ಅಭಿವೃದ್ಧಿ, ಚಾರಣಕ್ಕೆ ಉತ್ತೇಜನ ಮೊದಲಾದ ಕ್ರಮ ಕೈಗೊಳ್ಳುವ ಮೂಲಕ ವಿದೇಶಿ ಪ್ರವಾಸಿಗರಷ್ಟೇ ಅಲ್ಲ, ಸ್ಥಳೀಯ ಪ್ರವಾಸಿಗರನ್ನೂ ಆಕರ್ಷಿಸಬೇಕೆಂದು ತಿಳಿಸಿದರು. ರಾಜ್ಯದ ಹಿಡ್ಕಲ್, ಕಬಿನಿ, ಗೊರೂರು ಅಣೆಕಟ್ಟು ಪ್ರದೇಶದಲ್ಲಿ ಉದ್ಯಾ ನವನಗಳ ಅಭಿವೃದ್ಧಿ ಕೈಗೊಳ್ಳುವಂತೆಯೂ ಮುಖ್ಯಮಂತ್ರಿಗಳು ಸೂಚಿಸಿದರು.

Translate »