ಆ.31 ಮೈಸೂರು ಮಹಾನಗರ ಪಾಲಿಕೆ ಚುನಾವಣೆ
ಮೈಸೂರು

ಆ.31 ಮೈಸೂರು ಮಹಾನಗರ ಪಾಲಿಕೆ ಚುನಾವಣೆ

August 10, 2018

ಅದರಂತೆ ಆಗಸ್ಟ್ 13ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಆಗಸ್ಟ್ 20 ನಾಮಪತ್ರ ಸಲ್ಲಿಸಲು ಕಡೇ ದಿನವಾಗಿರುತ್ತದೆ. ಆಗಸ್ಟ್ 21 ನಾಮಪತ್ರಗಳ ಪರಿಶೀಲನೆ, 23ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕಡೇ ದಿನವಾಗಿರುತ್ತದೆ.

ಆಗಸ್ಟ್ 31ರಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಅವಶ್ಯವಿದ್ದಲ್ಲಿ ಸೆ.2ರಂದು ಮರು ಮತದಾನವಾಗಬೇಕಿದೆ. ಸೆಪ್ಟೆಂಬರ್ 3ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ.

ಮಹಾನಗರಗಳ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಸೆಪ್ಟೆಂಬರ್ 3ರವರೆಗೆ ಚಾಲ್ತಿಯಲ್ಲಿರುತ್ತದೆ. ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ತಯಾರಿಸಿರುವ ಮತದಾರರ ಪಟ್ಟಿಯಂತೆ ಚುನಾವಣೆ ನಡೆಸಬೇಕೆಂದು ಅರ್ಚನಾ ತಿಳಿಸಿದ್ದಾರೆ.

ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡುವುದು, ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕ್ರಮವಹಿಸುವುದು, ವಿಧಾನಸಭೆ ಚುನಾವಣೆಯಂತೆ ಪಾಲಿಕೆ ಚುನಾವಣೆಗೂ ಓಔಖಿಂಗೆ ಮತಪತ್ರದಲ್ಲಿ ಅವಕಾಶ ಕಲ್ಪಿಸುವುದೂ ಸೇರಿದಂತೆ ಆಯೋಗ ನೀಡಿರುವ ಸೂಚನೆಯಂತೆ ಕಟ್ಟುನಿಟ್ಟಾಗಿ ಚುನಾವಣೆ ನಡೆಸುವಂತೆಯೂ ಅಧೀನ ಕಾರ್ಯದರ್ಶಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಈಗಾಗಲೇ ಜಿಲ್ಲಾಡಳಿತವು ಮೈಸೂರಿನ ಎಲ್ಲಾ 65 ವಾರ್ಡುಗಳ ಪುನರ್ವಿಂಗಡಣೆಯಂತೆ ಮತದಾರರ ಪಟ್ಟಿ, ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದ್ದು, ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಆಗಸ್ಟ್ 13ರಂದು ಅಧಿಸೂಚನೆ ಹೊರಡಿಸಲಿದೆ.

ಅಖಾಡ ಸಜ್ಜು: ಮೈಸೂರು ನಗರ ಪಾಲಿಕೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಸಜ್ಜಾಗಿವೆ. ರಾಜ್ಯದಲ್ಲಿರುವ ಮೈತ್ರಿ ಸ್ಥಳೀಯ ಚುನಾವಣೆಗೆ ಅನ್ವಯ ವಾಗುವುದಿಲ್ಲ ಎಂಬುದು ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಎಲ್ಲಾ ವಾರ್ಡ್‍ಗಳಲ್ಲಿ ಪ್ರತ್ಯೇಕ ಹೋರಾಟ ನಡೆಸಲು ಸನ್ನದ್ಧವಾಗಿವೆ. ಅದಾಗಲೇ ಸ್ಥಳೀಯ ಶಾಸಕರು, ಪಕ್ಷಗಳ ನಗರಾಧ್ಯಕ್ಷರು, ಮುಖಂಡರ ನಡುವೆ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂಬಂಧ ಚರ್ಚೆ ನಡೆಯುತ್ತಿದೆ. ವಾರ್ಡ್‍ಗಳ ಪುನರ್ವಿಂಗಡಣೆ ಆಗಿರುವ ಹಿನ್ನೆಲೆಯಲ್ಲಿ ಹೊಸ ರೀತಿಯಲ್ಲೇ ಚುನಾವಣಾ ಲೆಕ್ಕಾಚಾರ ನಡೆಸಲಾಗುತ್ತಿದೆ. ಚುನಾವಣಾ ಸಮಯ ಅತ್ಯಂತ ಕಡಿಮೆ ಯಿದೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಕಣಕ್ಕಿಳಿಸಲು ಉಳಿದಿರುವುದು ಇನ್ನು ಕೇವಲ 10 ದಿನಗಳು ಮಾತ್ರ. ಆದರೆ ಇದು ನಿಜಕ್ಕೂ ಎಲ್ಲಾ ಪಕ್ಷಗಳಿಗೂ ಸವಾಲಿನ ಕೆಲಸ. ಎಲ್ಲಾ ಪಕ್ಷಗಳಲ್ಲೂ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದೆ. ಪ್ರತಿಯೊಂದು ವಾರ್ಡ್‍ನಲ್ಲೂ ಐದಾರು ಮಂದಿ ಆಕಾಂಕ್ಷಿಗಳಿದ್ದು, ಸ್ಪರ್ಧೆ ಗಿಳಿಯಲು ಕಸರತ್ತು ನಡೆಸುತ್ತಿದ್ದಾರೆ. ಶಾಸಕರು, ಮುಖಂಡರ ಶಿಫಾರಸ್ಸಿನೊಂದಿಗೆ ಅರ್ಜಿ ಸಲ್ಲಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಅಂತಿಮ

ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಕಠಿಣ ಸವಾಲಾಗಿದೆ. ಸದ್ಯ ಲೋಕಲ್ ಪಾಲಿಟಿಕ್ಸ್ ಗರಿಗೆದರಿದ್ದು, ರೋಚಕ ಘಟನಾವಳಿಯನ್ನೂ ನಿರೀಕ್ಷಿಸಬಹುದಾಗಿದೆ. ಆರಂಭದಿಂದ 4 ಅವಧಿವರೆಗೂ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯೊಂದಿಗೆ ಅಧಿಕಾರ ನಡೆಸಲಾಗಿತ್ತು. ಆದರೆ ಅಂತಿಮ ಅವಧಿಯಲ್ಲಿ ಮೇಯರ್ ಹಾಗೂ ಉಪಮೇಯರ್‌ಗೆ ಮೀಸಲಾತಿಯನ್ವಯ ಬಿಜೆಪಿ, ಸ್ಪರ್ಧೆಯಿಂದ ಹೊರಗುಳಿಯಬೇಕಾಯಿತು. ನಂತರದ ರಾಜಕೀಯ ತಂತ್ರಗಾರಿಕೆಯೊಂದಿಗೆ ಜೆಡಿಎಸ್ ಗದ್ದುಗೆಯೇರಿತು. ಆದರೆ ಈ ಬಾರಿ ಸ್ವತಂತ್ರವಾಗಿ ಪಾಲಿಕೆಯ ಅಧಿಕಾರ ಹಿಡಿಯಬೇಕೆಂಬ ಗುರಿ ಹೊಂದಿರುವ ಮೂರೂ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.

Translate »