ಮೈಸೂರು ಸ್ವಚ್ಛ ಸರ್ವೇಕ್ಷಣಾ ಅಭಿಯಾನ
ಮೈಸೂರು

ಮೈಸೂರು ಸ್ವಚ್ಛ ಸರ್ವೇಕ್ಷಣಾ ಅಭಿಯಾನ

December 26, 2019

ಮೈಸೂರು,ಡಿ.25 ಮೈಸೂರು ನಗರದ ಸ್ವಚ್ಛ ಸರ್ವೇಕ್ಷಣಾ ಅಭಿ ಯಾನಕ್ಕೆ ಕೆಲವೇ ದಿನಗಳಷ್ಟೇ ಬಾಕಿಯಿದ್ದು, ಪಾಲಿಕೆ ಆಯುಕ್ತರು ಹಾಗೂ ಸಿಬ್ಬಂದಿ, ಸ್ವಚ್ಛತಾ ರಾಯಭಾರಿಯಾಗಿರುವ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಮೈಸೂರಿನ ಕುವೆಂಪುನಗರದಲ್ಲಿರುವ ಶ್ರೀನಾಥ್ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಈ ಬಾರಿಯೂ ಸ್ವಚ್ಛತೆಯಲ್ಲಿ ಪ್ರಥಮ ಸ್ಥಾನ ಪಡೆಯಲು ಏನು ಮಾಡಬೇಕು, ಕಾರ್ಯ ಯೋಜನೆಗಳೇನು ಇನ್ನಿತರೆ ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಈ ವೇಳೆ ಪಾಲಿಕೆ ಆಯುಕ್ತ ಗುರುದತ್ ಹೆಗ್ಡೆ, ಆರೋಗ್ಯಾಧಿಕಾರಿಗಳಾದ ಡಾ. ನಾಗರಾಜ್, ಡಾ. ಜಯಂತಿ, ಹಾಗೂ ಪಾಲಿಕೆ ಸಿಬ್ಬಂದಿ ಉಪಸ್ಥಿತರಿದ್ದರು.

ಜಾವಗಲ್ ಶ್ರೀನಾಥ್ ಅವರನ್ನು ಭೇಟಿ ಮಾಡಿ ಬಳಿಕ ಮಾತ ನಾಡಿದ ಪಾಲಿಕೆ ಆಯುಕ್ತ ಗುರುದತ್ ಹೆಗ್ಡೆ, ಸ್ವಚ್ಛ ಸರ್ವೇಕ್ಷಣೆ ವಿಚಾರವಾಗಿ ಈಗಾಗಲೇ ಸಭೆ ನಡೆಸಲಾಗಿದೆ. ಸೆಲೆಬ್ರಿಟಿಗಳನ್ನು ಈ ಉದ್ದೇಶಕ್ಕೆ ಬಳಸಿಕೊಳ್ಳುವ ಉದ್ದೇಶವಿದೆ. ಶಾಲೆ, ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮಾಡಲಾಗು ವುದು. ಪ್ರತಿ ವಾರ್ಡ್‍ನಲ್ಲಿಯೂ ಅಧಿಕಾರಿಗಳ ತಂಡ ರಚಿಸಲಾಗಿದೆ. ಪೌರಕಾರ್ಮಿರನ್ನು ವಿವಿಧ ತಂಡಗಳನ್ನಾಗಿ ವಿಂಗಡಿಸಿ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮವೂ ಒಂದೆಡೆ ಸಾಗಿದೆ ಎಂದರು.

Translate »