ಇಂದಿನಿಂದ ಮೈಸೂರು ದಸರಾ ಮಹೋತ್ಸವ
ಮೈಸೂರು, ಮೈಸೂರು ದಸರಾ

ಇಂದಿನಿಂದ ಮೈಸೂರು ದಸರಾ ಮಹೋತ್ಸವ

October 10, 2018

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ನಾಳೆ(ಬುಧವಾರ) ಆರಂಭಗೊಳ್ಳಲಿದೆ.ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಶ್ರೀಮತಿ ಸುಧಾಮೂರ್ತಿ ಅವರು ಚಾಮುಂಡಿ ಬೆಟ್ಟದಲ್ಲಿ ನಾಡಿನ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಗೆ ಬುಧವಾರ ಬೆಳಿಗ್ಗೆ 7.05ರಿಂದ 7.35 ಗಂಟೆಯೊಳಗೆ ಸಲ್ಲುವ ಶುಭ ಲಗ್ನದಲ್ಲಿ ಅಗ್ರ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡುವರು. ದಸರಾ ಉದ್ಘಾಟಿ ಸಲೆಂದು ಸುಧಾಮೂರ್ತಿ ಅವರು ಇಂದು ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ್ದು, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಪುಷ್ಪಗುಚ್ಛ ನೀಡುವ ಮೂಲಕ ಅವರನ್ನು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರ ಮಾಡಿ ಕೊಂಡರು.

ದಸರಾ ಮಹೋತ್ಸವದ ಉದ್ಘಾ ಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್ ಭಾಗವಹಿಸ ಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡರು ಅಧ್ಯಕ್ಷತೆ ವಹಿಸಲಿದ್ದಾರೆ, ಸಚಿವರಾದ ಸಾ.ರಾ.ಮಹೇಶ್, ಡಾ. ಜಯ ಮಾಲ, ಸಿ.ಪುಟ್ಟರಂಗಶೆಟ್ಟಿ, ಎನ್.ಮಹೇಶ್, ರಾಜಶೇಖರ್, ಬಸವರಾಜ ಪಾಟೀಲ್ ಅವರೂ ಸಹ ಕಾರ್ಯಕ್ರಮದಲ್ಲಿ ಭಾಗಿ ಯಾಗುವರು. ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿ ಅಧ್ಯಕ್ಷರು-ಉಪಾಧ್ಯಕ್ಷರೂ ನವರಾತ್ರಿ ಉತ್ಸವದ ಉದ್ಘಾಟನೆ ವೇಳೆ ಉಪಸ್ಥಿತರಿರುವರು. ಈಗಾಗಲೇ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಧಾರ್ಮಿಕ ಕೈಂಕರ್ಯಕ್ಕೆ ಸಂಪೂರ್ಣ ಸಿದ್ಧತೆ ಮಾಡಲಾಗಿದ್ದು, ತಳಿರು ತೋರಣ, ವಿದ್ಯುತ್ ದೀಪಾಲಂಕಾರ ಗಳಿಂದ ಶೃಂಗರಿಸಲಾ ಗಿದೆ. 9 ದಿನಗಳ ಕಾಲ ನಡೆಯುವ ಉತ್ಸವಕ್ಕೆ ದೇಶದ ಮೂಲೆ ಮೂಲೆಗಳಿಂದ ಭಕ್ತರು ಹಾಗೂ ಪ್ರವಾಸಿಗರು ಆಗಮಿಸುವುದ ರಿಂದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ ಇನ್ನಿತರ ಮೂಲ ಸೌಕರ್ಯ ಒದಗಿಸಲಾಗಿದೆ. ಇದೇ ವೇಳೆ ಮುಖ್ಯಮಂತ್ರಿಗಳು ಚಾಮುಂಡಿಬೆಟ್ಟದಲ್ಲಿ ಸ್ಥಾಪಿಸಿರುವ ಪೊಲೀಸ್ ಸಹಾಯವಾಣಿ ಕೇಂದ್ರವನ್ನು ಉದ್ಘಾಟಿಸಲಿದ್ದು, ದಸರಾ ಕ್ರೀಡಾ ಜ್ಯೋತಿಗೂ ಚಾಲನೆ ನೀಡುವರು.

ಸಾಂಸ್ಕøತಿಕ ಕಾರ್ಯಕ್ರಮ: ನಾಳೆ(ಅ10) ಸಂಜೆ 6 ಗಂಟೆಗೆ ಮೈಸೂರಿನ ಅರಮನೆ ಆವರಣದಲ್ಲಿ ದಸರಾ ಸಾಂಸ್ಕøತಿಕ ಕಾರ್ಯ ಕ್ರಮಗಳನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಉದ್ಘಾಟಿ ಸುವರು. ಶಾಸಕ ಎಸ್.ಎ.ರಾಮದಾಸ್ ಅಧ್ಯಕ್ಷತೆ ವಹಿಸಲಿರುವ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಜಿಲ್ಲಾ ವಿಧಾನ ಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಸೇರಿದಂತೆ ಸಚಿವರು ಹಾಗೂ ಗಣ್ಯರು ಭಾಗವಹಿಸುವರು. ದಸರಾ ಉದ್ಘಾಟನೆ ದಿನದಂದೇ ಕಲಾಮಂದಿರ ದಲ್ಲಿ ಚಲನಚಿತ್ರೋತ್ಸವ, ಆಹಾರ ಮೇಳ, ದಸರಾ ಕುಸ್ತಿ ಪಂದ್ಯಾವಳಿ, ಪುಸ್ತಕ ಮಳಿಗೆ, ರಾಜ್ಯ ದಸರಾ ಕ್ರೀಡಾಕೂಟ, ಗಾಜಿನ ಮನೆ, ವಸ್ತು ಪ್ರದರ್ಶನ, ದಸರಾ ದೀಪಾಲಂಕಾರಗಳಿಗೂ ಗಣ್ಯರು ಚಾಲನೆ ನೀಡುವರು.

Translate »