ಭಾನುವಾರ ದಸರಾ ಉತ್ಸವ ಉದ್ಘಾಟನೆ
ಮೈಸೂರು

ಭಾನುವಾರ ದಸರಾ ಉತ್ಸವ ಉದ್ಘಾಟನೆ

September 27, 2019

ಮೈಸೂರು,ಸೆ.26(ಆರ್‍ಕೆ)-2019ರ ಮೈಸೂರು ದಸರಾ ಉತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಸಾಂಸ್ಕೃತಿಕ ನಗರಿ ಶೃಂಗಾರಗೊಂಡಿದೆ.

ನಾಡಿನ ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಹಾಗೂ ಪದ್ಮಶ್ರೀ ಪುರಸ್ಕೃತ ಡಾ.ಎಸ್.ಎಲ್.ಭೈರಪ್ಪ ಅವರು ಸೆಪ್ಟೆಂಬರ್ 29ರ ಭಾನುವಾರ ಬೆಳಿಗ್ಗೆ 9.39ರಿಂದ 10-25ಗಂಟೆಯೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ತಾಯಿ ಶ್ರೀ ಚಾಮುಂಡೇಶ್ವರಿಗೆ ಅಗ್ರಪೂಜೆ ಸಲ್ಲಿಸುವ ಮೂಲಕ ನಾಡ ಹಬ್ಬ 2019ರ ದಸರಾ ಮಹೋ ತ್ಸವವನ್ನು ಉದ್ಘಾಟಿಸುವರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತರಿರುವ ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಡಿ.ವಿ. ಸದಾನಂದಗೌಡ, ಪ್ರಹ್ಲಾದ ಜೋಷಿ, ಸುರೇಶ ಅಂಗಡಿ, ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ.ಕಾರಜೋಳ, ಡಾ.ಸಿ.ಎನ್.ಅಶ್ವಥನಾರಾಯಣ್, ಲಕ್ಷ್ಮಣ್ ಸಂಗಪ್ಪ ಸವದಿ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಚಿವರಾದ ಸಿ.ಟಿ.ರವಿ, ಕೋಟಾ ಶ್ರೀನಿವಾಸ ಪೂಜಾರಿ ಭಾಗವಹಿಸುವರು.

ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದು, ಮೇಯರ್ ಪುಷ್ಪಲತಾ ಜಗನ್ನಾಥ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಬಿ.ಸಿ.ಪರಿಮಳಾ ಶ್ಯಾಂ, ಉಪ ಮೇಯರ್ ಶಫಿ ಅಹಮದ್, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್, ತಾಲೂಕು ಪಂಚಾಯ್ತಿ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಚಾಮುಂಡಿ ಬೆಟ್ಟ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗೀತಾ ಸೇರಿದಂತೆ ಹಲವು ಗಣ್ಯರು ನಾಡಹಬ್ಬದ ಉದ್ಘಾಟನಾ ಸಮಾ ರಂಭದಲ್ಲಿ ಪಾಲ್ಗೊಳ್ಳುವರು.

ಅಂದು ಸಂಜೆ 6 ಗಂಟೆಗೆ ಅರಮನೆ ಆವರಣದಲ್ಲಿ ಮುಖ್ಯಮಂತ್ರಿಗಳು ದಸರಾ ಸಾಂಸ್ಕೃತಿಕ ಕಾರ್ಯ ಕ್ರಮ ಗಳನ್ನು ಉದ್ಘಾಟಿಸಲಿದ್ದು, ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡುವರು. ಅ.8 ರಂದು ಮಂಗಳ ವಾರ ಮಧ್ಯಾಹ್ನ 2-15 ರಿಂದ 2.58ಗಂಟೆಯೊಳಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆ ಉತ್ತರ ದ್ವಾರದ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವ ಸ್ಥಾನದ ಬಳಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಂದಿಧ್ವಜಕ್ಕೆ ಪೂಜೆ ನೆರವೇರಿಸುವರಲ್ಲದೆ, ಅರ ಮನೆ ಆವರಣದಲ್ಲಿ ಮಧ್ಯಾಹ್ನ 4.31ರಿಂದ 4.57 ರೊಳಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ವಿಜಯ ದಶಮಿ ಮೆರವಣಿಗೆಯನ್ನು ಉದ್ಘಾಟಿಸುವರು.

ಆ ವೇಳೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಮೇಯರ್ ಪುಷ್ಪಲತಾ ಜಗನ್ನಾಥ್ ಹಾಗೂ ಶಾಸಕ ಎಸ್.ಎ.ರಾಮದಾಸ್ ಭಾಗವಹಿ ಸುವರು. ಅಕ್ಟೋಬರ್ 8ರಂದು ಸಂಜೆ 7 ಗಂಟೆಗೆ ಬನ್ನಿಮಂಟಪದ ಪಂಜಿನ ಕವಾಯತು ಮೈದಾ ನದಲ್ಲಿ ರಾಜ್ಯಪಾಲ ವಜುಬಾಯಿ ಆರ್.ವಾಲಾ ಅವರು ಪಂಜಿನ ಕವಾಯತುಪರೇಡ್ ವೀಕ್ಷಿಸುವರು. ಸೆಪ್ಟೆಂಬರ್ 29ರಂದು ಬೆಳಿಗ್ಗೆ 10 ಗಂಟೆಗೆ ಚಾಮುಂಡಿಬೆಟ್ಟದಲ್ಲಿ ಗೃಹಸಚಿವ ಬಸವರಾಜ್ ಬೊಮ್ಮಾಯಿ ಅವರು ಪೊಲೀಸ್ ಸಹಾಯ ಕೇಂದ್ರ(ಕಿಯೋಸ್ಕ್) ಅನ್ನು ಉದ್ಘಾಟಿಸುವರು. ಬೆಳಿಗ್ಗೆ 11 ಗಂಟೆಗೆ ಕಲಾಮಂದಿರದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಚಲನಚಿತ್ರೋತ್ಸವವನ್ನು ಉದ್ಘಾಟಿಸುವರು.

ಅಂದು ಮಧ್ಯಾಹ್ನ 12.30 ಗಂಟೆಗೆ ಕೆಆರ್‍ಎಸ್ ಹಿನ್ನೀರಲ್ಲಿ ಶಾಸಕ ಜಿ.ಟಿ. ದೇವೇಗೌಡರು ಸಾಹಸ ಕ್ರೀಡೋತ್ಸವ, ಮಧ್ಯಾಹ್ನ 2 ಗಂಟೆಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರಿಂದ ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ಆಹಾರ ಮೇಳ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಂದ ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಕುಸ್ತಿ ಪಂದ್ಯಾವಳಿ, ಸಂಜೆ 4 ಗಂಟೆಗೆ ವಸ್ತುಪ್ರದರ್ಶನ ಉದ್ಘಾಟನೆಗೊಳ್ಳಲಿದೆ. ಸಂಜೆ 4.30 ಗಂಟೆಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ದಸರಾ ವಸ್ತುಪ್ರದರ್ಶನ ಉದ್ಘಾಟಿಸಲಿದ್ದು, ಸಂಜೆ 4.45 ಗಂಟೆಗೆ ಸಂಸದ ಪ್ರತಾಪ್ ಸಿಂಹ ಅವರು ಕುಪ್ಪಣ್ಣ ಪಾರ್ಕ್‍ನಲ್ಲಿ ಮಕ್ಕಳ ಕ್ರೀಡಾರಂಗ, ಸಚಿವ ಆರ್.ಅಶೋಕ್‍ರಿಂದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿ ಸಂಜೆ 6.15ಕ್ಕೆ ಹಸಿರು ಮಂಟಪ ಉದ್ಘಾಟನೆಯಾಗಲಿದೆ.

ಸೆಪ್ಟೆಂಬರ್ 30ರಂದು ಬೆಳಿಗ್ಗೆ 7.30 ಗಂಟೆಗೆ ಅರಮನೆ ಮುಂಭಾಗ ರಂಗೋಲಿ ಚಿತ್ತಾರ, ಬೆಳಿಗ್ಗೆ 9 ಗಂಟೆಗೆ ಜಗನ್ಮೋಹನ ಅರಮನೆಯಲ್ಲಿ ಮಕ್ಕಳ ದಸರಾ, ಬೆಳಿಗ್ಗೆ 11 ಗಂಟೆಗೆ ಜೆ.ಕೆ.ಮೈದಾನದಲ್ಲಿ ಮಹಿಳಾ ದಸರಾ, ಸಂಜೆ 5 ಗಂಟೆಗೆ ಓವೆಲ್ ಮೈದಾನದಲ್ಲಿ ಯೋಗ ದಸರೆಗೆ ಚಾಲನೆ ದೊರೆಯಲಿದೆ. ಅ. 1ರಂದು ಬೆಳಿಗ್ಗೆ 7 ಗಂಟೆಗೆ ಪುರಭವನದಲ್ಲಿ ಪಾರಂಪರಿಕ ನಡಿಗೆ, ಕುವೆಂಪು ನಗರದ ಸೌಗಂಧಿಕ ಉದ್ಯಾನವನದಲ್ಲಿ ಬೆಳಿಗ್ಗೆ 8 ಗಂಟೆಗೆ ಯೋಗವಾಹಿನಿ, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ರೈತ ದಸರಾ ಮೆರವಣಿಗೆ, 11 ಗಂಟೆಗೆ ಜೆಕೆ ಮೈದಾನದಲ್ಲಿ ಮತ್ಸ್ಯ ಮೇಳ, ರೈತ ದಸರಾ, ಜಾನಪದ ಸಿರಿ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿವೆ.

 

Translate »