ಮೈಸೂರು: ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಧ್ಯಮ ವಿರೋಧಿ ನೀತಿ ಅನುಸರಿಸುವ ಮೂಲಕ ಮಾಧ್ಯಮದ ಸ್ವಾತಂತ್ರ್ಯ ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿ ಮೈಸೂರು ರಕ್ಷಣಾ ವೇದಿಕೆ ವತಿಯಿಂದ ಶನಿವಾರ ಪತ್ರಿಭಟನೆ ನಡೆಸಲಾಯಿತು. ಮೈಸೂರಿನ ನ್ಯಾಯಾ ಲಯದ ಎದುರಿನ ಉದ್ಯಾನವನದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಮುಖ್ಯ ಮಂತ್ರಿಗಳು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಟೀಕಿಸಿದರೆ ಅಂತಹ ಪತ್ರಕರ್ತರ ವಿರುದ್ಧ ಮೊಕದ್ದಮೆ ದಾಖಲಿಸಲಾಗುತ್ತಿದೆ. ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ನಡೆಗಳನ್ನು ಟೀಕಿಸಿದರೂ ಅದಕ್ಕೂ ಕ್ರಮ ಜರುಗಿಸಲು ರಾಜ್ಯ ಸರ್ಕಾರ ಮುಂದಾಗು ತ್ತಿದೆ. ಆ ಮೂಲಕ ಜನತೆಯ ವಾಕ್ ಸ್ವಾತಂತ್ರ್ಯ ದಮನ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಮಾಧ್ಯಮ ಸ್ವಾತಂತ್ರ್ಯ ಹಾಗೂ ಪ್ರಜಾ ಪ್ರಭುತ್ವ ಹತ್ತಿಕ್ಕುವ ಮೂಲಕ ರಾಜ್ಯ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಕಂಡ ಸೋಲಿನಿಂದ ಹತಾಶರಾಗಿ ಮುಖ್ಯಮಂತ್ರಿ ಗಳು ಮಾಧ್ಯಮದವರ ವಿರುದ್ಧ ದರ್ಪ ತೋರುತ್ತಿದ್ದಾರೆ ಎಂದು ಆಪಾದಿಸಿದರು.
ವೇದಿಕೆ ಅಧ್ಯಕ್ಷ ಮೈ.ಕಾ.ಪ್ರೇಮ್‍ಕುಮಾರ್, ಕಾರ್ಯದರ್ಶಿ ರಾಕೇಶ್ ಭಟ್, ಕಾರ್ಯ ಕರ್ತರಾದ ವಿಕ್ರಂ ಅಯ್ಯಂಗಾರ್, ಎಂ.ಜಿ. ಮಹೇಶ್, ಸುಂದರ್, ಕಡಕೊಳ ಜಗ ದೀಶ್ ಸೇರಿದಂತೆ ಮತ್ತಿತರರು ಪ್ರತಿ ಭಟನೆಯಲ್ಲಿ ಪಾಲ್ಗೊಂಡಿದ್ದರು.