ಮೈಸೂರು ಜಿಲ್ಲಾ ಕಾಂಗ್ರೆಸ್ ಇನ್ನೂ  ಕರಪತ್ರ, ಭಿತ್ತಿಪತ್ರ ಪ್ರಕಟಿಸಿಲ್ಲ: ಸ್ಪಷ್ಟನೆ
ಮೈಸೂರು

ಮೈಸೂರು ಜಿಲ್ಲಾ ಕಾಂಗ್ರೆಸ್ ಇನ್ನೂ ಕರಪತ್ರ, ಭಿತ್ತಿಪತ್ರ ಪ್ರಕಟಿಸಿಲ್ಲ: ಸ್ಪಷ್ಟನೆ

April 4, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಅವರ ಪ್ರಚಾರ ಕರಪತ್ರ, ಭಿತ್ತಿಪತ್ರದಲ್ಲಿ ಜೆಡಿಎಸ್ ನಾಯಕರ ಭಾವಚಿತ್ರಗಳು ಇಲ್ಲದಿರುವ ಬಗ್ಗೆ ಅಸಮಾಧಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಸ್ಪಷ್ಟನೆ ನೀಡಿದೆ.

ಮೈಸೂರು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ತಾಲೂಕು ಚುನಾವಣೆಗೆ ಸಂಬಂಧಿಸಿದಂತೆ, ಮೈಸೂರು ನಗರ ಕಾಂಗ್ರೆಸ್ ಮತ್ತು ಜಿಲ್ಲಾ ಗ್ರಾಮಾಂ ತರ ಕಾಂಗ್ರೆಸ್ ಇದುವರೆಗೂ ಯಾವುದೇ ಕರಪತ್ರ, ಭಿತ್ತಿಪತ್ರಗಳನ್ನು ಅಧಿಕೃತವಾಗಿ ಮುದ್ರಿಸಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕರಪತ್ರಗಳಿಗೆ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಮತ್ತು ಜನಪ್ರತಿನಿಧಿಗಳು ಅನಗತ್ಯ ಗೊಂದಲ ಮತ್ತು ಅಸಮಾಧಾನ ವ್ಯಕ್ತಪಡಿಸಬೇಕಿಲ್ಲ ಎಂದು ಮನವಿ ಮಾಡಿದ್ದಾರೆ.

Translate »