ನಾಳೆ ಮೈಸೂರು ಜಿಲ್ಲಾ ಕಾರ್ಮಿಕ ಸಮ್ಮೇಳನ

ಮೈಸೂರು: ಮೈಸೂರಿನ ರೈಲ್ವೆ ನಿಲ್ದಾಣದ ಬಳಿಯಿರುವ ಕಾಂಗ್ರೆಸ್ ಭವನದಲ್ಲಿ ಅಕ್ಟೋಬರ್ 31ರಂದು ಮಧ್ಯಾಹ್ನ 2 ಗಂಟೆಗೆ ಮೈಸೂರು ಜಿಲ್ಲಾ ಕಾರ್ಮಿಕ ಸಮ್ಮೇಳನ ಆಯೋಜಿಸಿರುವುದಾಗಿ ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಮಾವಿನಹಳ್ಳಿ ಸಿ.ರವಿ ಇಂದಿಲ್ಲಿ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾಗಾಂಧಿ ದಿವಸ್ ಹಾಗೂ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯ್ ಪಟೇಲ್ ಜಯಂತಿ ಅಂಗವಾಗಿ ಈ ಕಾರ್ಮಿಕ ಸಮ್ಮೇಳನ ಆಯೋಜಿಸಿರುವುದಾಗಿ ತಿಳಿಸಿದರು.

ರಾಜ್ಯಸಭಾ ಸದಸ್ಯ ಪ್ರೊ.ರಾಜೀವ್‍ಗೌಡ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದು, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಸಂಸದ ಆರ್.ಧ್ರುವನಾರಾಯಣ್, ಶಾಸಕರಾದ ತನ್ವೀರ್‍ಸೇಠ್, ಡಾ.ಯತೀಂದ್ರ ಇನ್ನಿತರರು ಭಾಗವಹಿಸಲಿದ್ದಾರೆ. ಇದರ ಅಂಗವಾಗಿ ಬೆಳಿಗ್ಗೆ 11 ಗಂಟೆಗೆ ಗಾಂಧಿನಗರದ ಲಿಟಲ್ ಸಿಸ್ಟರ್ಸ್ ಆಫ್ ಪೂರ್ಸ್ ವೃದ್ಧಾಶ್ರಮದಲ್ಲಿ ಹಣ್ಣು ವಿತರಿಸಲಾಗುವುದು. ಸಮ್ಮೇಳನದ ನಂತರ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ನೋಂದಣಿ ಮಾಡಲಾಗುವುದು. ಅದೇ ದಿನ ಬೆಳಿಗ್ಗೆ 11.30ಕ್ಕೆ ರಾಜ್ಯ ಕಾರ್ಮಿಕ ಸಮಿತಿ ವತಿಯಿಂದ ಎಸ್‍ಎಸ್.ಪ್ರಕಾಶಂ ಅಧ್ಯಕ್ಷತೆ ಯಲ್ಲಿ ರಾಜ್ಯ ಕಾರ್ಯಕಾರಿಣಿ ಹಾಗೂ ಭವಿಷ್ಯದ ನೂತನ ಕಾರ್ಯಕ್ರಮಗಳ ಅನುಷ್ಠಾನ ಕರಡು ಸಿದ್ಧಪಡಿಸಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಮಹಿಳಾ ಕಾರ್ಮಿಕ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಕಾಶ್‍ಕುಮಾರ್, ಹೆಡತಲೆ ಮಂಜುನಾಥ್ ಇನ್ನಿತರರು ಉಪಸ್ಥಿತರಿದ್ದರು.