ಮೈಸೂರು ಜಿಲ್ಲೆ; ಮಂಗಳವಾರ ಕೊರೊನಾದಿಂದ ಒಂದೂ ಸಾವಿಲ್ಲ
ಮೈಸೂರು

ಮೈಸೂರು ಜಿಲ್ಲೆ; ಮಂಗಳವಾರ ಕೊರೊನಾದಿಂದ ಒಂದೂ ಸಾವಿಲ್ಲ

February 24, 2021

ಮೈಸೂರು, ಫೆ.23(ವೈಡಿಎಸ್)- ಮೈಸೂರು ಜಿಲ್ಲೆಯಲ್ಲಿ ಮಂಗಳವಾರ 26 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 11 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 53,967 ಮಂದಿಗೆ ಸೋಂಕು ತಗುಲಿದಂತಾಗಿದೆ. 52,764 ಸೋಂಕಿತರು ಗುಣಮುಖರಾಗಿದ್ದಾರೆ. ಇಂದು ಸಾವಿನ ವರದಿಯಾಗಿಲ್ಲ. ಇದುವರೆಗೆ 1,029 ಮಂದಿ ಸೋಂಕಿತರು ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿನ್ನೂ 174 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ 49 ಮಂದಿ ಮನೆಯಲ್ಲೇ ಶುಶ್ರೂಷೆ ಪಡೆಯುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆ-ನಿಗಾ ಕೇಂದ್ರಗಳಲ್ಲಿ 30, ಖಾಸಗಿ ಆಸ್ಪತ್ರೆಗಳು-ನಿಗಾ ಕೇಂದ್ರಗಳಲ್ಲಿ 95 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದ ವಿವರ: ಬಾಗಲಕೋಟೆ, ಚಾಮರಾಜನಗರ, ದಾವಣಗೆರೆ, ಗದಗ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗಳವಾರ ಒಂದೂ ಕೊರೊನಾ ಪ್ರಕರಣ ವರದಿಯಾಗಿಲ್ಲ. ಬಳ್ಳಾರಿ 5, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 240, ಬೀದರ್ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 2, ಚಿತ್ರದುರ್ಗ 3, ದಕ್ಷಿಣಕನ್ನಡ 17, ಧಾರವಾಡ 3, ಹಾಸನ 9, ಹಾವೇರಿ 1, ಕಲಬುರಗಿ 8, ಕೊಡಗು 3, ಕೋಲಾರ 1, ಮಂಡ್ಯ 2, ಮೈಸೂರು 26, ರಾಮನಗರ 2, ಶಿವ ಮೊಗ್ಗ 18, ತುಮಕೂರು 12, ಉಡುಪಿ 12, ವಿಜಯಪುರ 1, ಯಾದಗಿರಿ 2 ಮಂದಿ ಸೇರಿ ರಾಜ್ಯದಲ್ಲಿ ಮಂಗಳವಾರ 383 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 378 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿನ ಸೋಂಕಿತರ ಒಟ್ಟು ಸಂಖ್ಯೆ 9,48,849ಕ್ಕೆ ಏರಿಕೆಯಾಗಿದೆ. 9,30,465 ಸೋಂಕಿತರು ಗುಣವಾದಂತಾಗಿದೆ. ಇಂದು ವರದಿಯಾದ 4 ಸಾವಿನ ಪ್ರಕರಣ ಸೇರಿ ಈವರೆಗೆ 12,303 ಮಂದಿ ಮೃತಪಟ್ಟಂತಾಗಿದೆ. ಇನ್ನು 6,062 ಸಕ್ರಿಯ ಪ್ರಕರಣಗಳಿವೆ.

ಕೊರಾನಾ ಪಾಸಿಟಿವ್: ಕಳೆದವಾರ ಕೇರಳದಿಂದ ಮೈಸೂರಿನ ಬೋಗಾದಿ 2ನೇ ಹಂತದಲ್ಲಿರುವ ಮಾತಾ ಅಮೃತಾನಂದಮಯಿ ಸಂಸ್ಥೆಗೆ ಆಗಮಿಸಿದ್ದ ಇಲ್ಲಿನ ಸಿಬ್ಬಂದಿಗೆ ಕೋವಿಡ್-19 ಸೋಂಕು ಪತ್ತೆಯಾಗಿದ್ದು, ಇವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ, ಇವರ ಸಂಪರ್ಕಕ್ಕೆ ಬಂದಿದ್ದ ಎಲ್ಲರನ್ನೂ ಹೋಂ ಐಸೋಲೇಸನ್ ಮಾಡಲಾಗಿದೆ ಎಂದು ಮಾತಾ ಅಮೃತಾನಂದಮಯಿ ಸಂಸ್ಥೆ ಸಿಬ್ಬಂದಿ ವೇಣುಗೋಪಾಲ್ `ಮೈಸೂರು ಮಿತ್ರ’ನಿಗೆ ತಿಳಿಸಿದರು.

Translate »