ಒಮಿಕ್ರಾನ್ ತಡೆಗೆ ಮೈಸೂರು ಜಿಲ್ಲೆಯಲ್ಲಿ ಕಟ್ಟೆಚ್ಚರ: ಡಿಸಿ
ಮೈಸೂರು

ಒಮಿಕ್ರಾನ್ ತಡೆಗೆ ಮೈಸೂರು ಜಿಲ್ಲೆಯಲ್ಲಿ ಕಟ್ಟೆಚ್ಚರ: ಡಿಸಿ

November 30, 2021

ಮೈಸೂರು,ನ.29(ಎಂಟಿವೈ)- ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಮಿಕ್ರಾನ್ ವೈರಸ್ ಆತಂಕ ಹೆಚ್ಚಾಗಿ ರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲೂ ಕಟ್ಟು ನಿಟ್ಟಿನ ಎಚ್ಚರಿಕಾ ಕ್ರಮ ಕೈಗೊಳ್ಳ ಲಾಗಿದೆ. ಕರ್ನಾಟಕ-ಕೇರಳ ಗಡಿ ಭಾಗದ ಬಾವಲಿ ಚೆಕ್‍ಪೋಸ್ಟ್ ನಲ್ಲಿ ತೀವ್ರ ತಪಾಸಣೆ ಮಾಡ ಲಾಗುತ್ತಿದ್ದು, 72 ಗಂಟೆಯೊಳ ಗಿನÀ ನೆಗೆಟಿವ್ ರಿಪೋರ್ಟ್ ಹಾಜರುಪಡಿಸದ 160ಕ್ಕೂ ಹೆಚ್ಚು ವಾಹನಗಳನ್ನು ವಾಪಸ್ಸು ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.

ಸರ್ಕಾರದ ನೂತನ ಮಾರ್ಗಸೂಚಿಯಂತೆ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಒಮಿಕ್ರಾನ್ ಪತ್ತೆಯಾದ ಹಿನ್ನೆಲೆ ಹಾಗೂ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಸರ್ಕಾರ ರಾಜ್ಯಕ್ಕೆ ಮಹಾರಾಷ್ಟ್ರ ಹಾಗೂ ಕೇರಳದಿಂದ ಬರುವವರ ಮೇಲೆ ನಿಗಾ ಇಡುವಂತೆ ಸೂಚಿಸಿದೆ. ಅಲ್ಲದೆ ಒಮ್ಮೆ 72 ಗಂಟೆಗಳ ಅವಧಿಯೊಳಗಿನ ನೆಗೆಟಿವ್ ರಿಪೋರ್ಟ್ ತಂದರೂ 15 ದಿನದ ನಂತರ ಮತ್ತೊಮ್ಮೆ ಕೋವಿಡ್ ಟೆಸ್ಟ್ ಮಾಡಿಸಲಾಗುತ್ತದೆ ಎಂದರು.

ಬಾವಲಿ ಚೆಕ್‍ಪೋಸ್ಟ್‍ನಲ್ಲಿ ಕಳೆದ 10 ದಿನಗಳಲ್ಲಿ ನೆಗೆಟಿವ್ ವರದಿ ಇಲ್ಲದ 160 ವಾಹನಗಳನ್ನು ವಾಪಸ್ ಕಳುಹಿಸಲಾಗಿದೆ. ಅಲ್ಲದೆ ಕೇರಳ ಹಾಗೂ ಮಹಾರಾಷ್ಟ್ರ ದಿಂದ ನ.12ರಿಂದ 27ರವರೆಗೆ ಮೈಸೂರಿಗೆ ಬಂದಿ ರುವವರಿಗೆ ಮತ್ತೆ ಆರ್‍ಟಿಪಿಸಿರ್ ಪರೀಕ್ಷೆ ಮಾಡಿಸಲಾಗುತ್ತಿದೆ. 72 ಗಂಟೆಗಳ ಅವಧಿಯ ನೆಗೆಟಿವ್ ವರದಿಯೊಂದಿಗೆ ಬರುತ್ತಿರುವ ವಿದ್ಯಾರ್ಥಿಗಳಿಗೂ 7 ದಿನದ ನಂತರ ಮತ್ತೊಮ್ಮೆ ಆರ್‍ಟಿಪಿಸಿಆರ್ ಟೆಸ್ಟ್ ಮಾಡಿಸಲಾಗುವುದು. ಕ್ಲಸ್ಟರ್‍ಗಳಲ್ಲಿ ನೆಗೆಟಿವ್ ಬಂದರೂ ಕಂಟೈನ್ಮೆಂಟ್ ಮಾಡಿ ನಿಗಾ ಇಡಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.

ಪರಿಸ್ಥಿತಿ ಎದುರಿಸಲು ಸಜ್ಜು: ಕೊರೊನಾ 3ನೇ ಅಲೆ ಬರುವ ಸಂಬಂಧ ಸ್ಪಷ್ಟ ಮಾಹಿತಿ ಇಲ್ಲದಿದ್ದರೂ ಕಳೆದ 3-4 ತಿಂಗಳಿಂದಲೇ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದರೆ ಅದನ್ನು ನಿಭಾಯಿಸಲು ಬೇಕಾದ ಕ್ರಮ ಕೈಗೊಳ್ಳಲಾಗಿತ್ತು. ಆದರೂ, ಸರ್ಕಾರದ ನಿರ್ದೇಶನದಂತೆ ಇನ್ನಷ್ಟು ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಲ್ಲಾ ತಾಲೂಕು ಗಳಲ್ಲೂ ಆಕ್ಸಿಜನ್ ಪ್ಲಾಂಟ್ ಇದೆ. ಎರಡು ತಾಲೂಕಿಗೆ ಇನ್ನ 3-4 ದಿನದಲ್ಲಿ ಆಕ್ಸಿಜûóನ್ ಪ್ಲಾಂಟ್ ಸ್ಥಾಪಿಸಲಾಗುತ್ತದೆ. ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜು, ತಾಲೂಕು ಆಸ್ಪತ್ರೆ, ಖಾಸಗಿ ಆಸ್ಪತ್ರೆಯೊಂದಿಗೆ ಸಭೆÉ ನಡೆಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಖಾಸಗಿ ಆಸ್ಪತ್ರೆ ಸೇರಿದಂತೆ 5 ಸಾವಿರ ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸಮರ್ಪಕವಾಗಿ ಆಕ್ಸಿಜûನ್ ಬೆಡ್, ವೆಂಟಿಲೇಟರ್, ಐಸಿಯು ಬೆಡ್‍ಗಳಿವೆ ಎಂದರು. ಕೊರೊನಾ ಸೋಂಕಿನಿಂದ ಮಕ್ಕಳನ್ನು ರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮಕ್ಕಳ ಚಿಕಿತ್ಸೆಗಾಗಿ 200 ಪೀಡಿಯಾಟ್ರಿಕ್ ವೆಂಟಿಲೇಟರ್, 38 ಆಕ್ಸಿಜನ್ ಬೆಡ್, 68 ಐಸಿಯು ಬೆಡ್ ಸೇರಿದಂತೆ 300 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

Translate »