ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ 
ಮೈಸೂರು

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ 

February 14, 2020

ಮೈಸೂರು, ಫೆ.13- ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಫೆ.14, 15 ಮತ್ತು 16ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಶುಕ್ರವಾರ ಬೆಳಿಗ್ಗೆ 11.30 ಗಂಟೆಗೆ ತಿ. ನರಸೀಪುರ ತಾಲೂಕಿನ ಮೂಗೂರಿಗೆ ಆಗಮಿಸಿ ಸಾರ್ವಜನಿಕ ರನ್ನು ಭೇಟಿ ಮಾಡುವರು. ಮಧ್ಯಾಹ್ನ 12 ಗಂಟೆಗೆ ಮೂಗೂರಿನ ತ್ರಿಪುರಸುಂದರಿ ಅಮ್ಮನವರ ದೇವಾಲಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂ ದಿಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಟಿ.ನರಸೀಪುರಕ್ಕೆ ಆಗಮಿಸಿ ಸಾರ್ವಜನಿಕರನ್ನು ಭೇಟಿ ಮಾಡಿದ ನಂತರ ಬೆಂಗಳೂರಿಗೆ ತೆರಳುವರು. ಫೆ.15ರಂದು ಸಂಜೆ 5 ಗಂಟೆಗೆ ಮೈಸೂರಿಗೆ ಆಗಮಿಸಿ ಸಾರ್ವಜನಿಕರನ್ನು ಭೇಟಿ ಮಾಡುವರು. ಅಂದು ಸಂಜೆ 5.30 ಗಂಟೆಗೆ ಮೈಸೂರಿನ ಸದರನ್‍ಸ್ಟಾರ್ ಹೋಟೆಲ್ ನಲ್ಲಿ ಆಯೋಜಿಸಿರುವ ನೋಂದಣಿ ಅಭಿಯಾನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 7 ಗಂಟೆಗೆ ಜೆ.ಪಿ.ನಗರದ ಬಸಂತ್ ಕನ್ವೆನ್ಷನ್ ಸೆಂಟರ್‍ನಲ್ಲಿ ನಡೆಯುವ ಗುಂಡ್ಲುಪೇಟೆ ಸುರೇಶ್ ಪುತ್ರಿಯ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಫೆ.16ರಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿಗೆ ತೆರಳುವರು.

Translate »