ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ರಾಜೀನಾಮೆ
ಮೈಸೂರು

ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ರಾಜೀನಾಮೆ

September 19, 2018

ಮೈಸೂರು,ಸೆ.18(ಎಂಟಿವೈ)- ಒಪ್ಪಂದದಂತೆ ಅವಧಿ ಮುಗಿದಿದ್ದರೂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದೆ ಪಕ್ಷದ ವರಿಷ್ಟರಿಗೆ ತಲೆ ನೋವಾಗಿದ್ದ ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಯೀಮಾ ಸುಲ್ತಾನ್ ಮತ್ತು ಉಪಾಧ್ಯಕ್ಷ ಜಿ.ನಟರಾಜು ಅವರು ದಿಢೀರ್ ರಾಜೀನಾಮೆ ನೀಡಿದ್ದಾರೆ. ಸೋಮವಾರ ಬೆಂಗಳೂರಿಗೆ ತೆರಳಿದ್ದ ಜಿ.ಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸಾವಿತ್ರಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆಗೆ ಸಂಬಂಧಿಸಿದಂತೆ ನಯೀಮಾ ಸುಲ್ತಾನ್ ಪ್ರತಿಕ್ರಿಯೆ ನೀಡಿದ್ದು, ಮೈಸೂರು ಜಿಲ್ಲಾ ಪಂಚಾಯತ್‍ನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿದ್ದೆವು. ಈ ವೇಳೆ ಒಪ್ಪಂದದಂತೆ ಮೀಸಲಾತಿಗೆ ಅನುಗುಣ ವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿತ್ತು. ಈ ವೇಳೆ ಎರಡು ಪಕ್ಷದ ಪ್ರಮುಖರ ಸಮ್ಮುಖದಲ್ಲಿ ಆದ ಆಂತರಿಕ ಒಪ್ಪಂದದಂತೆ ನಮ್ಮ ಅಧಿಕಾರದ ಅವಧಿ ಮುಗಿದ ಹಿನ್ನೆಲೆ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

Translate »