ಮೈಸೂರು ಗ್ಯಾಂಗ್ ರೇಪ್ ಪ್ರಕರಣ  ನಾಲ್ವರು ರೇಪಿಸ್ಟ್ಗಳಿಗೆ ವೈದ್ಯಕೀಯ ತಪಾಸಣೆ
ಮೈಸೂರು

ಮೈಸೂರು ಗ್ಯಾಂಗ್ ರೇಪ್ ಪ್ರಕರಣ ನಾಲ್ವರು ರೇಪಿಸ್ಟ್ಗಳಿಗೆ ವೈದ್ಯಕೀಯ ತಪಾಸಣೆ

August 30, 2021

ಮೈಸೂರು,ಆ.೨೯(ಎಂಟಿವೈ)-ರಾಜ್ಯವನ್ನೇ ಬೆಚ್ಚಿಬೀಳುವಂತೆ ಮಾಡಿರುವ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಬಂಧಿತರಾಗಿರುವ ನಾಲ್ವರನ್ನು ಭಾನುವಾರ ಸಂಜೆ ಮೈಸೂರಿನ ಖಾಸಗಿ ಆಸ್ಪತ್ರೆ ಯೊಂದರಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು.
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ ಐವರಲ್ಲಿ ಓರ್ವ ಅಪ್ರಾಪ್ತ ನಾಗಿದ್ದಾನೆ. ಆರೋಪಿಗಳನ್ನು ಶನಿವಾರ ಸಂಜೆಯೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ೧೦ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ಭಾನುವಾರ ಬೆಳಗ್ಗಿನಿಂದಲೇ ಅಜ್ಞಾತ ಸ್ಥಳದಲ್ಲಿ ದೇವರಾಜ ವಿಭಾಗದ ಎಸಿಪಿ ಶಶಿಧರ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಯಿತು. ವಿಚಾರಣೆ ಸಂದರ್ಭದಲ್ಲಿ ಪೊಲೀಸರು ಆರೋಪಿಗಳ ಹೇಳಿಕೆಯನ್ನು ದಾಖಲಿಸಿಕೊಂಡ ರಲ್ಲದೇ, ಸಾಮೂಹಿಕ ಅತ್ಯಾಚಾರಕ್ಕೆ ಸಂಬAಧಿಸಿದ ಹೇಳಿಕೆ ನೀಡುವಾಗ ವಿಡಿಯೋ ಚಿತ್ರೀಕರಣ ಮಾಡಿಕೊಂಡರು ಎನ್ನಲಾಗಿದೆ. ಸಂಜೆ ವೇಳೆ ಬಂಧಿತರಲ್ಲಿ ಅಪ್ರಾಪ್ತ ನನ್ನು ಹೊರತುಪಡಿಸಿ ಉಳಿದ ನಾಲ್ವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ಅತ್ಯಾಚಾರದ ಆರೋಪ ಸಾಬೀ ತಾಗಲು ವೈದ್ಯಕೀಯ ಪರೀಕ್ಷೆಯ ವರದಿ ಬಹುಮುಖ್ಯ ಪಾತ್ರವಹಿಸುವುದರಿಂದ ಇಂದು ಎಲ್ಲಾ ನಾಲ್ವರು ಅತ್ಯಾಚಾರಿಗಳನ್ನು ಪರೀಕ್ಷೆಗೆ ಒಳಪಡಿಸಲಾಯಿತು.

Translate »