ಪರಿಶಿಷ್ಟ ಪಂಗಡಕ್ಕೆ 7.5 ಮೀಸಲಾತಿಗೆ ಮೈಸೂರು ನಾಯಕರ ಪಡೆ ಆಗ್ರಹ
ಮೈಸೂರು

ಪರಿಶಿಷ್ಟ ಪಂಗಡಕ್ಕೆ 7.5 ಮೀಸಲಾತಿಗೆ ಮೈಸೂರು ನಾಯಕರ ಪಡೆ ಆಗ್ರಹ

November 4, 2020

ಮೈಸೂರು, ನ.3-ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಕ್ಕೆ ಜನಸಂಖ್ಯೆಗೆ ಅನುಗುಣ ವಾಗಿ 7.5 ಮೀಸಲಾತಿ ನೀಡುವಂತೆ ಮೈಸೂರು ನಾಯಕರ ಪಡೆ ಅಧ್ಯಕ್ಷ ಪಡುವಾರಹಳ್ಳಿ ಎಂ.ರಾಮಕೃಷ್ಣ ಒತ್ತಾಯಿಸಿದ್ದಾರೆ

ಕಳೆದೊಂದು ದಶಕದ ಬೇಡಿಕೆಯಾದ ಮೀಸಲಾತಿ ಹೆಚ್ಚಳದ ಕುರಿತು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನನಂದಾ ಮಹಾಸ್ವಾಮಿ ಗಳ ಹೋರಾಟದ ಫಲವಾಗಿ ರಾಜ್ಯ ಸರ್ಕಾರವು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗ ರಚಿಸಿ ವಿಭಾಗ ವಾರು ಮಟ್ಟದಲ್ಲಿ ಸಭೆ ನಡೆಸಿ ಅಭಿಪ್ರಾಯ ಪಡೆದು ಅದರಂತೆಯೇ ಮೀಸಲಾತಿ ಹೆಚ್ಚಳಕ್ಕೆ ಶಿಫಾರಸ್ಸು ಮಾಡಿದೆ. ಆದರೆ ಮುಖ್ಯಮಂತ್ರಿಗಳು ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಮೀನಾಮೇಷ ಎಣಿಸುತ್ತಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ತಾವೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ Sಖಿ ಗೆ 7.5 ಮೀಸಲಾತಿ ಹಾಗೂ ಪ್ರತ್ಯೇಕ ಸಚಿವಾಲಯದ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ.

ಕಳೆದ ವಾರ ಬೆಂಗಳೂರಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಶ್ರೀ ಪ್ರಸನ್ನ ನಂದಾ ಸ್ವಾಮೀಜಿ ಕೈಗೊಂಡ ಅಹೋರಾತ್ರಿ ಹೋರಾಟವನ್ನು ಉಪ ಚುನಾವಣೆಯ ನಂತರ ಕ್ರಮ ಕೈಗೊಳ್ಳುವುದಾಗಿ ಸಚಿವರ ಮೂಲಕ ಭರವಸೆ ನೀಡಿದ್ದರು. ಇಂದು ಉಪ ಚುನಾವಣೆ ಮುಗಿದಿದೆ. ಸರ್ಕಾರದ ಮೊದಲ ಆದ್ಯತೆಯ ಕೆಲಸದಂತೆ ಸಿಎಂ ಯಡಿ ಯೂರಪ್ಪ, ಮೀಸಲಾತಿ ಹೆಚ್ಚಳ ಮಾಡುವ ಮೂಲಕ 60 ಲಕ್ಷಕ್ಕೂ ಹೆಚ್ಚಾಗಿರುವ ವಾಲ್ಮೀಕಿ ನಾಯಕ ಜನಾಂಗದ ಹಿತ ಕಾಯಬೇಕು. ಜನಸಂಖ್ಯೆಗೆ ಅನುಗುಣವಾಗಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ಪರಿಶಿಷ್ಟ ಪಂಗಡದ ಹಿತ ಕಾಪಾಡುವಂತೆ ಪಡುವಾರಹಳ್ಳಿ ಎಂ.ರಾಮಕೃಷ್ಣ ಮನವಿ ಮಾಡಿದ್ದಾರೆ.

Translate »