ಸೆ.6ರಂದು ಮೈಸೂರು ಮೇಯರ್ ಚುನಾವಣೆ
ಮೈಸೂರು

ಸೆ.6ರಂದು ಮೈಸೂರು ಮೇಯರ್ ಚುನಾವಣೆ

August 26, 2022

ಮೈಸೂರು,ಆ.25(ಎಂಟಿವೈ)-ಮೈಸೂರು ಮಹಾ ನಗರ ಪಾಲಿಕೆಯ ನೂತನ ಮೇಯರ್ ಹಾಗೂ ಉಪ ಮೇಯರ್ ಆಯ್ಕೆ ಸೆ.6ರಂದು ನಡೆಯಲಿದೆ. ಅಂದು ಮಧ್ಯಾಹ್ನ 12ಕ್ಕೆ ಪಾಲಿಕೆ ಪ್ರಧಾನ ಕಚೇರಿಯಲ್ಲಿ ಮೇಯರ್, ಉಪಮೇಯರ್ ಸೇರಿದಂತೆ 4 ಸ್ಥಾಯಿ ಸಮಿತಿಗಳ ಚುನಾವಣೆ ನಡೆಸಲು ಸಮಯ ನಿಗದಿಯಾಗಿದೆ.

ಮೇಯರ್ ಚುನಾವಣಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ವೈ.ಎಸ್.ಪ್ರಕಾಶ್, ಅಧಿಸೂಚನೆ ಹೊರಡಿಸಿದ್ದು, ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳು ವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ. ಸೆ.6 ರಂದು ಬೆಳಗ್ಗೆ 9ರಿಂದ 10ಗಂಟೆಯೊಳಗೆ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಬಳಿಕ ನಾಮಪತ್ರ ಪರಿಶೀಲನೆ ಹಾಗೂ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗುತ್ತದೆ. ಮಧ್ಯಾಹ್ನ 12 ಗಂಟೆಯ ನಂತರ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ. ಮೇಯರ್ ಹಾಗೂ ಉಪಮೇಯರ್ ಆಯ್ಕೆ ಪ್ರಕ್ರಿಯೆಯಲ್ಲಿ ಕೈ ಎತ್ತುವ ಮೂಲಕ ಮತ ಚಲಾಯಿಸಲಾಗುತ್ತದೆ. ಬಳಿಕ ನಾಲ್ಕು ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜರುಗಲಿದೆ. ಸರ್ಕಾರ ಬುಧವಾರಷ್ಟೇ ಮೈಸೂರು ಮಹಾ ನಗರ ಪಾಲಿಕೆಯ ಮೇಯರ್
ಸಾಮಾನ್ಯ ವರ್ಗಕ್ಕೂ, ಉಪಮೇಯರ್ ಹಿಂದುಳಿದ ವರ್ಗದ ಮಹಿಳೆಗೂ ಮೀಸಲಿರಿಸಿ ಆದೇಶ ಹೊರಡಿಸಿತ್ತು. ಹಾಗಾಗಿ ಮೇಯರ್‍ಗಾದಿ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ವಲಯಲ್ಲಿ ರಾಜಕೀಯ ಚಟುವಟಿಕೆ ಆರಂಭವಾಗಿದೆ. ಈಗ ಚುನಾವಣಾ ದಿನಾಂಕವೂ ನಿಗದಿಯಾಗಿರುವುದರಿಂದ ಕಸರತ್ತು ಇನ್ನಷ್ಟು ವೇಗ ಪಡೆದುಕೊಳ್ಳಲಿದೆ.

Translate »