ಮೈಸೂರು ಮಹಾನಗರ ಪಾಲಿಕೆ 48ನೇ ಆಯುಕ್ತರಾಗಿ  ಜಿ.ಲಕ್ಷ್ಮೀಕಾಂತ ರೆಡ್ಡಿ ಅಧಿಕಾರ ಸ್ವೀಕಾರ
ಮೈಸೂರು

ಮೈಸೂರು ಮಹಾನಗರ ಪಾಲಿಕೆ 48ನೇ ಆಯುಕ್ತರಾಗಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅಧಿಕಾರ ಸ್ವೀಕಾರ

June 7, 2021

ಮೈಸೂರು, ಜೂ.6(ಎಂಟಿವೈ)- ಮೈಸೂರು ಮಹಾನಗರ ಪಾಲಿಕೆಯ 48ನೇ ಆಯುಕ್ತರಾಗಿ ಐಎಎಸ್ ಅಧಿ ಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಭಾನುವಾರ ಮಧ್ಯಾಹ್ನ ಅಧಿಕಾರ ವಹಿಸಿಕೊಂಡರು.

ಮೈಸೂರು ನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ನಿಯಮಾನುಸಾರ ವಿವಿಧ ದಾಖಲೆಗಳಿಗೆ ಸಹಿ ಮಾಡುವ ಮೂಲಕ ನಿರ್ಗಮಿತ ಆಯುಕ್ತೆ ಶಿಲ್ಪಾನಾಗ್ ಅವ ರಿಂದ ಅಧಿಕಾರ ಸ್ವೀಕರಿಸಿದರು. 2009ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ಜಿ.ಲಕ್ಷ್ಮೀಕಾಂತ ರೆಡ್ಡಿ ಈ ಹಿಂದೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಉಪವಿಭಾ ಗಾಧಿಕಾರಿ, ಬೀದರ್ ಹಾಗೂ ವಿಜಾಪುರ ಜಿಲ್ಲಾ ಪಂಚಾಯ್ತಿ ಸಿಇಓ ಆಗಿ ಸೇವೆ ಸಲ್ಲಿಸಿ ದ್ದಾರೆ. ಆಹಾರ ಮತ್ತು ನಾಗರಿಕ ಸರಬ ರಾಜು ಇಲಾಖೆಯ ವ್ಯವಸ್ಥಾಪಕ ನಿರ್ದೇ ಶಕರಾಗಿ ಸೇವೆ ಸಲ್ಲಿಸುತ್ತಿದ್ದ ಅವರನ್ನು ಕಳೆದ ರಾತ್ರಿ ರಾಜ್ಯ ಸರ್ಕಾರ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಿಸಿ ಆದೇಶಿಸಿತ್ತು. ಈ ಹಿನ್ನೆಲೆ ಯಲ್ಲಿ ಭಾನುವಾರ ಮೈಸೂರಿಗೆ ಬಂದು ಅಧಿಕಾರ ಸ್ವೀಕರಿಸಿದರು.
ಬಳಿಕ ಪತ್ರಕರ್ತರೊಂದಿಗೆ ಮಾತ ನಾಡಿದ ಅವರು, ಮೈಸೂರು ನಗರ ದಲ್ಲಿ ಕೋವಿಡ್ ನಿಯಂತ್ರಣ ಮಾಡು ವುದಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಸ್ಥಳೀಯ ಶಾಸಕರು, ಸಂಸದರು, ಪಾಲಿಕೆ ಸದಸ್ಯರು, ಪಾಲಿಕೆ ಹಿರಿಯ-ಕಿರಿಯ ಅಧಿಕಾರಿಗಳು ಸೇರಿದಂತೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸುತ್ತೇನೆ. ಈ ಹಿಂದೆ ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾನಾಗ್ ಹಾಗೂ ಗುರುದತ್ತ ಹೆಗಡೆ ಅವರು ಜಾರಿಗೆ ತಂದ ಕಾರ್ಯಕ್ರಮವನ್ನು ಮುಂದು ವರೆಸಿಕೊಂಡು ಹೋಗುವುದಾಗಿ ತಿಳಿಸಿದರು. ಪಾಲಿಕೆಯ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿ ನಂತರ ಹಳೆ ಕೌನ್ಸಿಲ್ ಸಭಾಂಗಣದಲ್ಲಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಪಾಲಿಕೆಯ ಹೆಚ್ಚುವರಿ ಆಯುಕ್ತ ಎಂ.ಎನ್.ಶಶಿಕುಮಾರ್ ಪಾಲಿಕೆಯ 9 ವಲಯಗಳ ಸಹಾಯಕ ಆಯುಕ್ತರು ಹಾಗೂ ವಿವಿಧ ಅಧಿಕಾರಿಗಳನ್ನು ಪರಿಚಯ ಮಾಡಿಕೊಂಡರು. ಇದೇ ವೇಳೆ ನಿರ್ಗ ಮಿತ ಆಯುಕ್ತೆ ಶಿಲ್ಪಾನಾಗ್ ಅಧಿಕಾರಿಗಳನ್ನು ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರಲ್ಲದೆ, ಎಲ್ಲಾ ಅಧಿಕಾರಿಗಳು ವಿಷಯವಾರು ಜ್ಞಾನ ಹೊಂದಿದ್ದು, ಬದ್ದತೆಯಿಂದ ಕೆಲಸ ಮಾಡುವ ಮೂಲಕ ನಗರದ ಜನರ ಹಿತ ಕಾಯಲು ಶ್ರಮಿಸುತ್ತಿದ್ದಾರೆ ಎಂದರು.

 

Translate »