ಮೈಸೂರು, ನ.5(ಪಿಎಂ)- ಕೇಂದ್ರ ಸರ್ಕಾರ ರೈತ-ಕಾರ್ಮಿಕ ಹಾಗೂ ಜನವಿರೋಧಿ ಮಸೂದೆ ಗಳನ್ನು ಅನುಷ್ಠಾನಕ್ಕೆ ತರುತ್ತಿದೆ ಎಂದು ಆರೋಪಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಈ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಗುರುವಾರ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿತು.
ಇಲ್ಲಿನ ಎಪಿಎಂಸಿ ಬಳಿಯ ರಿಂಗ್ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿ ಜಂಕ್ಷನ್‍ನ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವೃತ್ತದಲ್ಲಿನ 4 ಮಾರ್ಗಗಳನ್ನು ಮಾನವ ಸರಪಳಿ ನಿರ್ಮಿಸಿ ತಡೆದ ಪ್ರತಿಭಟನಾಕಾರರು ಕೇಂದ್ರ -ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದರು. ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರೆ ಮೇರೆಗೆ ಇಡೀ ದೇಶದಲ್ಲಿ ರೈತ ಸಂಘ ಟನೆಗಳು ಇಂದು ರಸ್ತೆ ತಡೆ ನಡೆಸುತ್ತಿರುವುದರ ಭಾಗ ವಾಗಿ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲಾಯಿತು. ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ 2ನೇ ಬಾರಿ ಸುಗ್ರೀವಾಜ್ಞೆ ಹೊರಡಿಸಿ ರುವುದನ್ನು ಖಂಡಿಸಿ, ಕರ್ನಾಟಕ ರಾಜ್ಯಪತ್ರದ (ಗೆಜೆಟ್) ಪ್ರತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಯಿತು.
ಮಾಧ್ಯಮದವರೊಂದಿಗೆ ಮಾತನಾಡಿದ ಬಡಗಲ ಪುರ ನಾಗೇಂದ್ರ, ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಸೂದೆ, ಅಗತ್ಯ ವಸ್ತು ಕಾಯ್ದೆ ತಿದ್ದು ಪಡಿ ಮಸೂದೆ, ವಿದ್ಯುತ್ ಕಾಯ್ದೆ ತಿದ್ದುಪಡಿ ಮಸೂದೆ ಗಳನ್ನು ಮೊದಲಿಗೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿ ಸಿದೆ. ಬಳಿಕ ಸಂಸತ್‍ನಲ್ಲಿ ಅಂಗೀಕರಿಸುವಂತೆ ಮಾಡಿದೆ. ಸರ್ಕಾರ ರೈತ ವಿರೋಧಿ ನೀತಿ ಅನು ಸರಿಸುತ್ತಿದೆ. ಇದರ ವಿರುದ್ಧ ಇಡೀ ರಾಷ್ಟ್ರದಲ್ಲಿ ವಿರೋಧ ವ್ಯಕ್ತವಾಗಿದೆ. 12ಕ್ಕೂ ಹೆಚ್ಚು ರಾಜ್ಯ ಸರ್ಕಾರಗಳು ಕೇಂದ್ರದ ನಡೆ ಖಂಡಿಸಿವೆ. ಕೇಂದ್ರ ಸರ್ಕಾರ ಇಡೀ ಕೃಷಿ ಕ್ಷೇತ್ರವನ್ನೂ ಬಂಡವಾಳ ಶಾಹಿಗಳಿಗೆ ಒಪ್ಪಿಸಲು ಮುಂದಾಗಿದೆ. ಆ ಮೂಲಕ ರೈತಾಪಿ ಕುಲ ನಾಶಗೊಳಿಸಲು ಹೊರಟಿದೆ ಎಂದು ಕಿಡಿಕಾರಿದರು. ರಾಜ್ಯ ಸರ್ಕಾರ ಮತ್ತೆ ಭೂ ಸುಧಾ ರಣೆ ತಿದ್ದುಪಡಿ ಕಾಯ್ದೆ ಜಾರಿಗೆ ಸುಗ್ರೀವಾಜ್ಞೆ ಹೊರ ಡಿಸಿದೆ. ಎಪಿಎಂಸಿ ಕಾಯ್ದೆ ತಿದ್ದುಪಡಿಗೂ ಸುಗ್ರೀ ವಾಜ್ಞೆಗೆ ಸಿದ್ಧತೆ ನಡೆಸಿದೆ. ರಾಜ್ಯ ಸರ್ಕಾರ ಜನ ವಿರೋಧಿ ನೀತಿಗಳನ್ನು ಕೈಬಿಡದೇ ಇದ್ದರೆ ಮುಂಬ ರುವ ಚಳಿಗಾಲದ ಅಧಿವೇಶನದಲ್ಲಿ ಲಕ್ಷಾಂತರ ಸಂಖ್ಯೆ ಯಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು. ಜೈಲಿಗೂ ಹೋಗಲು ನಾವು ಸಿದ್ಧವಿದ್ದೇವೆ ಎಂದರು. ಸಂಘದ ಮುಖಂಡ ರಾದ ಹೊಸಕೋಟೆ ಬಸವರಾಜು, ಪಿ.ಮರಂಕಯ್ಯ, ಎಪಿಎಂಸಿ ಅಧ್ಯಕ್ಷ ಬಸವರಾಜು ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.