ಮೈಸೂರು ವಲಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ
ಮೈಸೂರು

ಮೈಸೂರು ವಲಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

February 18, 2021

ಮೈಸೂರು,ಫೆ.17-ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿ ಯಿಂದ ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ಕಾಲೇಜು ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಆಯೋಜಿಸುತ್ತಾ ಬಂದಿದೆ. ಇದಕ್ಕೆ ಪೂರ್ವಭಾವಿ ಯಾಗಿ ವಲಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಯನ್ನು ಆಯೋಜಿಸಿ ಅದರಲ್ಲಿ ಪ್ರಶಸ್ತಿ ಪಡೆದವರನ್ನು ರಾಜ್ಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಸೇರಿಸಿ ಬೆಂಗಳೂರು, ಮೈಸೂರು, ಮಂಗಳೂರು, ಶಿವಮೊಗ್ಗ, ಧಾರವಾಡ ಮತ್ತು ಕಲಬುರ್ಗಿ ಎಂದು ಒಟ್ಟು ಆರು ವಿಭಾಗಗಳಾಗಿ ವಿಂಗಡಿಸಲಾಗಿದೆ. ಎಲ್ಲಾ ವಿಭಾಗಗಳಿಗೆ ಒಬ್ಬರನ್ನು ವಲಯ ಸಂಯೋಜಕರಾಗಿ ನೇಮಿಸಿ ಅವರ ಮಾರ್ಗದರ್ಶನದಲ್ಲಿ ವಲಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ನಡೆಯುತ್ತದೆ. ಈ ವರ್ಷ ಮೈಸೂರು ವಿಭಾಗಕ್ಕೆ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಕೆ.ಕೆ.ಪದ್ಮನಾಭ ಅವರನ್ನು ವಲಯ ಸಂಯೋ ಜಕರಾಗಿ ನೇಮಿಸಿದ್ದು, ಮೈಸೂರು ವಿಭಾಗ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯು ಫೆ.19ರಂದು ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ (ಸ್ವಾಯತ್ತ) ನಡೆಯಲಿದೆ.

ಮೈಸೂರು ವಲಯದ ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ವ್ಯಾಪ್ತಿಯಲ್ಲಿ ಮೈಸೂರು, ಹಾಸನ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳು ಇದ್ದು, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಈ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಭಾಗವಹಿಸುವ ಮಾದರಿಗಳಲ್ಲಿ ಉತ್ತಮ ಮಾದರಿಗಳನ್ನು ಆಯ್ಕೆ ಮಾಡಿ ಪ್ರಥಮ ಬಹುಮಾನ ರೂ.5000, ದ್ವಿತೀಯ ಬಹುಮಾನ ರೂ. 4000, ತೃತೀಯ ಬಹುಮಾನ ರೂ.3000, ಎರಡು ಸಮಾಧಾನಕರ ಬಹುಮಾನ ತಲಾ ರೂ.2000 ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಗುತ್ತ್ತಿದೆ.

ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ “ಶುದ್ಧ ಮತ್ತು ಹಸಿರು ಶಕ್ತಿ”, “ಆಹಾರ, ಆರೋಗ್ಯ ಮತ್ತು ನೈರ್ಮಲ್ಯ”, “ಬಾಹ್ಯಾಕಾಶ ಹುಡು ಕಾಟ”, “ಪರಿಸರ ಸ್ನೇಹಿ ತಂತ್ರಜ್ಞಾನ ಮತ್ತು ಪ್ಲಾಸ್ಟಿಕ್ ಮಾಲಿನ್ಯ ಮಣಿಸೋಣ” ಎಂಬ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಮಾದರಿ ಗಳನ್ನು ತಯಾರಿಸಿ ಪ್ರದರ್ಶಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಡಾ.ಕೆ.ಕೆ.ಪದ್ಮನಾಭ ಇವರನ್ನು 9481832280 ಮೂಲಕ ಮತ್ತು ಪಿ.ಎಸ್. ಕೌಶಿಕ್, ರಾಜ್ಯ ಸಂಯೋಜಕರು, ಮೊ. 9742711555 ಮೂಲಕ ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

 

Translate »