ಜಿಲ್ಲಾ ಉಸ್ತುವಾರಿ ಸಚಿವರ ಮೈಸೂರು ಪ್ರವಾಸ
ಮೈಸೂರು

ಜಿಲ್ಲಾ ಉಸ್ತುವಾರಿ ಸಚಿವರ ಮೈಸೂರು ಪ್ರವಾಸ

February 28, 2020

ಮೈಸೂರು, ಫೆ.27- ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಫೆಬ್ರವರಿ 28 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅಂದು ಬೆಳಿಗ್ಗೆ 10.30 ಗಂಟೆಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಮಾಡಲಿದ್ದಾರೆ. ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಗೃಹ ಮಂಡಳಿ ವತಿಯಿಂದ ಮೈಸೂರು ನಗರದ ನಿಸರ್ಗ ಬಡಾವಣೆಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಸ್ಥಳ ಪರಿವೀಕ್ಷಣೆ ಮಾಡುವರು. ಮಧ್ಯಾಹ್ನ 12 ಗಂಟೆಗೆ ಇಲವಾಲ ಹೋಬಳಿಯ ಆನಂದೂ ರಿನಲ್ಲಿ ಕೃಷ್ಣರಾಜಸಾಗರ ಜಲಾಶಯದ ಹಿನ್ನೀರಿನಿಂದ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ಮೈಸೂರಿನ ಜೆಎಸ್‍ಎಸ್ ಅರ್ಬನ್‍ಹಾತ್‍ನಲ್ಲಿ ಆಯೋಜಿಸಿ ರುವ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಜಿಪಂ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಜಿಲ್ಲಾ ಯೋಜನಾ ಸಮಿತಿಯ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30 ಗಂಟೆಗೆ ರಸ್ತೆ ಮೂಲಕ ಕೇಂದ್ರ ಸ್ಥಾನ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »