ಬೆಂಗಳೂರು, ಮೇ ೫(ಕೆಎಂಶಿ)- ನಗರ ಪಾಲಿಕೆಗಳೂ ಸೇರಿದಂತೆ ರಾಜ್ಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿರುವ ಮನೆಗಳನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಮೈಸೂರು, ತುಮಕೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬೆಂಗಳೂರು ಹೊರತುಪಡಿಸಿ, ಉಳಿದ ಹತ್ತು ನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಅನಧಿಕೃತ ಆರೂವರೆ ಲಕ್ಷ ಅಕ್ರಮ ಮನೆಗಳನ್ನು ಸಕ್ರಮಗೊಳಿಸಲಾಗುವುದು ಎಂದರು.
ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಖಾಸಗಿ ಬಡಾವಣೆಗಳಲ್ಲಿ ನಕ್ಷೆ ಮಂಜೂರಾತಿ ಪಡೆಯದೇ, ಅಥವಾ ಸಕ್ರಮ ಪ್ರಾಧಿಕಾರದಿಂದ ಅನುಮತಿ ಪಡೆಯದೇ ನಿರ್ಮಾಣಗೊಂಡಿರುವ ಕಟ್ಟಡಗಳನ್ನು ಸಕ್ರಮಗೊಳಿಸಲಾಗುವುದು.
ಈ ಬಡಾವಣೆಗಳಿಗೆ ಸ್ಥಳೀಯ ಸಂಸ್ಥೆಗಳಿAದ ಎಲ್ಲಾ ಮೂಲಭೂತ ಸೌಕರ್ಯ ಗಳನ್ನು ಕಲ್ಪಿಸಿದೆ. ಆದರೆ ಅವರು, ತೆರಿಗೆ ವ್ಯಾಪ್ತಿಯಿಂದ ದೂರ ಉಳಿದಿದ್ದಾರೆ. ಇಂತಹ ಲಕ್ಷಾಂತರ ಮನೆಗಳನ್ನು ನಿವೇಶನದ ಅಳತೆಯ ಆಧಾರದ ಮೇಲೆ ಒಂದು ಬಾರಿಗೆ ಅನ್ವಯವಾಗುವಂತೆ ದಂಡ ವಿಧಿಸಿ, ಸಕ್ರಮಗೊಳಿಸಲಾಗುವುದು. ಸಕ್ರಮಗೊಳಿಸಿದ ನಂತರ ಆ ಮನೆಯ ಅಳತೆಯ ಅನುಸಾರ ತೆರಿಗೆಯನ್ನು ನಿಗದಿಪಡಿಸಿ, ವಸೂಲಿ ಮಾಡಲು ಸ್ಥಳೀಯ ಪ್ರಾಧಿಕಾರಗಳಿಗೆ ಅನುಮತಿ ನೀಡಲಾಗುವುದು. ಸರ್ಕಾರದ ಈ ನಿರ್ಧಾರ ದಿಂದ ಸುಮಾರು ೯ರಿಂದ ೧೦ ಸಾವಿರ ಕೋಟಿ ರೂ.ಗಳು ರಾಜ್ಯ ಖಜಾನೆಗೆ ಬರಲಿದೆ. ಬಂದ ಹಣವನ್ನು ಆಯಾ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಲಾಗು ವುದು. ಅಲ್ಲದೆ ಪ್ರತಿ ವರ್ಷವೂ ಈ ಅಕ್ರಮ ಮನೆಗಳಿಂದ ತೆರಿಗೆ ವಸೂಲಿ ಮಾಡುವು ದರಿಂದ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸ್ಥಿತಿಯು ಸುಧಾರಣೆಯಾಗಲಿದೆ. ಕಾನೂನು ಸಚಿವ ಮಾಧುಸ್ವಾಮಿ ಅಧ್ಯಕ್ಷತೆಯ ಸಚಿವ ಸಂಪುಟದ ಉಪಸಮಿತಿ
ಈ ಸಂಬAಧ ನಿಯಮಾವಳಿಗಳನ್ನು ರಚಿಸಿದ್ದು, ಒಂದೆರಡು ತಿಂಗಳಲ್ಲಿ ಆದೇಶ ಹೊರಡಿಸಿ, ಅಕ್ರಮ ಮನೆಗಳನ್ನು ಸಕ್ರಮಗೊಳಿಸಲಾಗುವುದು. ಬೆಂಗಳೂರು ಪ್ರಕರಣದಲ್ಲಿ ಈ ವಿಷಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರೂ, ಅದನ್ನು ಸೌಹಾರ್ದಯುತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಮೈಸೂರು, ದಾವಣಗೆರೆ ಸೇರಿದಂತೆ ಎಲ್ಲ ಮಹಾನಗರ ಪಾಲಿಕೆಗಳ ವ್ಯಾಪ್ತಿಯ ಹೊಸ ಬಡಾವಣೆಗಳಿಗೆ ನಗರ ವಿಕಾಸ್ ಯೋಜನೆಯಡಿ ತಲಾ ನೂರು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಇದೇ ಯೋಜನೆಯಡಿ ಪ್ರತಿ ಪಾಲಿಕೆಯಲ್ಲೂ ೧೫೦ ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು. ಸ್ಮಾರ್ಟ್ ಸಿಟಿ ಯೋಜನೆಯಡಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ತುಮಕೂರು, ಮಂಗಳೂರು ಸೇರಿದಂತೆ ಆರು ಕಡೆ ಕಾಮಗಾರಿಗಳು ಭರದಿಂದ ನಡೆದಿದ್ದು ಶೇ.೮೦ ರಷ್ಟು ಕಾಮಗಾರಿಗಳು ಪೂರ್ಣವಾಗಿವೆ.ಉಳಿದಂತೆ ಕಟ್ಟಡ ನಿರ್ಮಾಣದಂತಹ ಕೆಲಸಗಳು ಬಾಕಿ ಇದ್ದು, ಇನ್ನೊಂದು ವರ್ಷದ ಒಳಗೆ ಅದನ್ನು ಪೂರ್ಣಗೊಳಿಸುವುದಾಗಿ ನುಡಿದರು.
ಕೊರೊನಾ ಕಾರಣದಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಅಡಚಣೆಯಾಯಿತು. ಹೀಗಾಗಿ ನಮಗೆ ಯೋಜನೆಯನ್ನು ಪೂರ್ಣಗೊಳಿಸಲು ಇನ್ನೂ ಕಾಲಾವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ವಿನಂತಿಸಿಕೊAಡಿದ್ದೆವು ಎಂದು ನುಡಿದರು.
ಬೆಳಗಾವಿ,ಹುಬ್ಬಳ್ಳಿ-ಧಾರವಾಡ ಮತ್ತು ಗುಲ್ಬರ್ಗ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಒದಗಿಸಲು ೨೮೦ ಕೋಟಿ ರೂಪಾಯಿಗಳ ಯೋಜನೆ ಸಿದ್ಧವಾಗಿದ್ದು, ಮುಂದಿನ ಐದು ವರ್ಷಗಳಲ್ಲಿ ಇದು ಕಾರ್ಯಗತವಾಗಲಿದೆ ಎಂದರು.
ಪಿರಿಯಾಪಟ್ಟಣಕ್ಕೆ ಕುಡಿಯುವ ನೀರು: ಪಿರಿಯಾಪಟ್ಟಣ, ರಾಯಭಾಗ, ಹಿರೇಕೆರೂರ್, ಶಿಗ್ಗಾವಿ, ಯಲ್ಲಾಪುರ ಸೇರಿದಂತೆ ೨೪ ಪಟ್ಟಣಗಳಿಗೆ ಕುಡಿಯುವ ನೀರು ಒದಗಿಸಲು ೧೫೦೦ ಕೋಟಿ ರೂ.ವೆಚ್ಚದ ಯೋಜನೆಯನ್ನು ರೂಪಿಸಲಾಗಿದ್ದು,ನದಿ ಮೂಲಗಳಿಂದ ಈ ಪಟ್ಟಣಗಳಿಗೆ ನೀರು ಒದಗಿಸಲಾಗುವುದು ಎಂದರು. ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ಅನುಕೂಲ ಒದಗಿಸಿಕೊಡುವ ದೃಷ್ಟಿಯಿಂದ ೨೭ ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ನುಡಿದರು.