ಮೈಸೂರು ವಿವಿ ಅಂತರ ಕಾಲೇಜು ಅಥ್ಲೆಟಿಕ್ಸ್ ಕೂಟ
ಮೈಸೂರು

ಮೈಸೂರು ವಿವಿ ಅಂತರ ಕಾಲೇಜು ಅಥ್ಲೆಟಿಕ್ಸ್ ಕೂಟ

September 18, 2018

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜುಗಳ ಅಥ್ಲೆಟಿಕ್ಸ್ ಕೂಟವು ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗ ಹಾಗೂ ಶ್ರೀ ಆದಿಚುಂಚನಗಿರಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜು, ನಾಗಮಂಗಲ (ಮಂಡ್ಯ ಜಿಲ್ಲೆ) ಇವುಗಳ ಸಹಭಾಗಿತ್ವದಲ್ಲಿ ಸೆ.18ರಿಂದ 20ರವರೆಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದ ಬಿಜಿಎಸ್ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ 9.30ಗಂಟೆಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಧ್ವಜಾರೋಹಣ ನೆರವೇರಿಸಿದ ಬಳಿಕ ಅಂತಾರಾಷ್ಟ್ರೀಯ ಓಟಗಾರ್ತಿ ಕು.ಜಿ.ಕೆ.ವಿಜಯಕುಮಾರಿ ಕ್ರೀಡಾ ಕೂಟ ಉದ್ಘಾಟಿಸುವರು. ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ. ಟಿ.ಕೆ. ಉಮೇಶ್, ಶಾಸಕ ಕೆ.ಸುರೇಶ್‍ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ.ಕೃಷ್ಣಯ್ಯ ಉಪಸ್ಥಿತರಿರುವರು. ಆದಿಚುಂಚನ ಗಿರಿ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್ ಡಾ.ಬಿ.ಕೆ.ಲೋಕೇಶ್ ಅಧ್ಯಕ್ಷತೆ ವಹಿಸುವರು.

Translate »