ಮೈಸೂರು ವಿವಿ ಎನ್‍ಎಸ್‍ಎಸ್ ಘಟಕ ಸುವರ್ಣ ಸಂಭ್ರಮಾಚರಣೆ
ಮೈಸೂರು

ಮೈಸೂರು ವಿವಿ ಎನ್‍ಎಸ್‍ಎಸ್ ಘಟಕ ಸುವರ್ಣ ಸಂಭ್ರಮಾಚರಣೆ

September 23, 2018

ನಾಳೆಯಿಂದ ವರ್ಷವಿಡೀ ವಿವಿಧ ಕಾರ್ಯಕ್ರಮ
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್) 50ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ `ಸುವರ್ಣ ಸಂಭ್ರಮಾಚರಣೆ’ ಶೀರ್ಷಿಕೆಯಡಿ ವರ್ಷ ಕಾಲ ವಿವಿಧ ಕಾರ್ಯ ಕ್ರಮಗಳನ್ನು ಸಂಘಟಿಸುತ್ತಿದ್ದು, ಇದರ ಉದ್ಘಾಟನಾ ಸಮಾರಂಭ ಸೆ.24ರಂದು ನಡೆಯಲಿದೆ ಎಂದು ಮೈಸೂರು ವಿವಿಯ ಎನ್‍ಎಸ್‍ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಬಿ.ಚಂದ್ರಶೇಖರ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಅಂದು ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣ ದಲ್ಲಿ ಸುವರ್ಣ ಸಂಭ್ರಮಾಚರಣೆ ಉದ್ಘಾಟನೆಯೊಂದಿಗೆ ಎನ್‍ಎಸ್‍ಎಸ್ ದಿನಾಚರಣೆ ಯನ್ನೂ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 11ಕ್ಕೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಕೆ.ಹೆಚ್.ಜಗದೀಶ್ ಉದ್ಘಾಟನೆ ನೆರವೇರಿಸಲಿದ್ದು, ವಿವಿಯ ಆಡಳಿತಾಂಗ ಕುಲಸಚಿವ ಪ್ರೊ.ಆರ್.ರಾಜಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.

ಅತಿಥಿಗಳಾಗಿ ಮೈಸೂರಿನ ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ಸಂಸ್ಥೆಯ ಕರೆಸ್ಪಾಂಡೆಂಟ್ ಸ್ವಾಮಿ ಮಹೇಶಾತ್ಮಾನಂದ, ರಾಜ್ಯ ಎನ್‍ಎಸ್‍ಎಸ್ ಅಧಿಕಾರಿ ಡಾ. ಗಣನಾಥಶೆಟ್ಟಿ ಎಕ್ಕಾರ್ ಪಾಲ್ಗೊಳ್ಳಲಿದ್ದಾರೆ. ವರ್ಷವಿಡೀ 50 ವಿವಿಧ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳುತ್ತಿದ್ದು, ಕಾರ್ಯಕ್ರಮಗಳ ಸಂಘಟನೆಗಾಗಿ ಸುವರ್ಣ ಮಹೋತ್ಸವ ಆಚರಣಾ ಸಮಿತಿ ರಚನೆ ಮಾಡಲಾಗಿದೆ ಎಂದರು. ರಾಜ್ಯದಲ್ಲಿ ಪ್ರಥಮ ಬಾರಿಗೆ 1969ರ ಸೆ.24ರಂದು ಮೈಸೂರು ವಿವಿಯಲ್ಲಿ ಎನ್‍ಎಸ್‍ಎಸ್ ಪ್ರಾರಂಭಗೊಂಡಿತು. ಆಗ ಡಾ.ಕೆ.ಎಲ್.ಶ್ರೀಮಾಲಿ ಕುಲಪತಿಯಾಗಿ ದ್ದರು. ಈ ವೇಳೆ ಪ್ರೊ.ಉ.ಕಾ.ಸುಬ್ಬ ರಾಯಚಾರ್ ಅವರ ನೇತೃತ್ವದಲ್ಲಿ ವಿವಿಯ ಎನ್‍ಎಸ್‍ಎಸ್ ಮುನ್ನಡೆಯಿತು. ಇದೀಗ ಸುವರ್ಣ ಮಹೋತ್ಸವದ ಅಂಗವಾಗಿ ಎನ್‍ಎಸ್‍ಎಸ್ ಕಾರ್ಯಕ್ರಮಾಧಿಕಾರಿಗಳಿಗೆ ಕಾರ್ಯಾಗಾರ, ಅಂತರ ಕಾಲೇಜು ಸಾಂಸ್ಕøತಿಕ ಸ್ಪರ್ಧೆ, ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತ ಮಾಹಿತಿ ಕಾರ್ಯಾಗಾರ, ಉಪನ್ಯಾಸ ಸೇರಿದಂತೆ 2019ರ ಸೆ.24ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಮೈಸೂರು ವಿವಿ ಎನ್‍ಎಸ್‍ಎಸ್‍ನ ನಿವೃತ್ತ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಪ್ರೊ.ಬಿ.ಕೆ.ಶಿವಣ್ಣ, ಪ್ರೊ.ಕಾಳ ಚೆನ್ನೇಗೌಡ ಮತ್ತಿತರರು ಗೋಷ್ಠಿಯಲ್ಲಿದ್ದರು.

Translate »