ಮೈಸೂರು ವಿವಿ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಚಿಕ್ಕವೆಂಕಟಪ್ಪ ನಿಧನ
ಮೈಸೂರು

ಮೈಸೂರು ವಿವಿ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಚಿಕ್ಕವೆಂಕಟಪ್ಪ ನಿಧನ

June 16, 2019

ಮೈಸೂರು: ಮೈಸೂರು ವಿಶ್ವ ವಿದ್ಯಾನಿಲಯದ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ವಿ. ಚಿಕ್ಕವೆಂಕಟಪ್ಪ (82) ಅವರು ಇಂದು ಸಂಜೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೈಸೂರಿನ ಜಯನಗರ 2ನೇ ಮುಖ್ಯ ರಸ್ತೆಯಲ್ಲಿ ವಾಸವಾಗಿದ್ದ ಅವರನ್ನು ವಯೋ ಸಹಜ ಖಾಯಿಲೆಯಿಂದಾಗಿ ಆಸ್ಪತ್ರೆಗೆ ದಾಖ ಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಂಜೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಚಿಕ್ಕ ವೆಂಕಟಪ್ಪ ಅವರು ಪತ್ನಿ ಶ್ರೀಮತಿ ಜಯ ಶೀಲ, ಪುತ್ರ ಡಾ.ಸಿ.ವೆಂಕಟೇಶ್, ಪುತ್ರಿಯ ರಾದ ಡಾ.ಶಶಿಕಲಾ, ಸುಶೀಲಾ, ಅಳಿ ಯಂದಿರು, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ಮೈಸೂರಿನ ಕೆ.ಜಿ. ಕೊಪ್ಪ ಲಿನ ರುದ್ರಭೂಮಿಯಲ್ಲಿ ನಾಳೆ (ಜೂ.16) ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

1968ರಲ್ಲಿ ಮೈಸೂರು ವಿಶ್ವವಿದ್ಯಾನಿಲ ಯದ ದೈಹಿಕ ಶಿಕ್ಷಣ ಸಹಾಯಕ ನಿರ್ದೇಶಕರಾಗಿ ಸೇವೆಗೆ ಸೇರಿದ ಇವರು, 1984ರಿಂದ 1993 ರವರೆಗೆ ನಿರ್ದೇಶಕ ರಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದರು. ಅದಕ್ಕೂ ಮೊದಲು 1967ರಲ್ಲಿ ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ಸಹಾಯಕ ನಿರ್ದೇಶಕರಾಗಿಯೂ ಅವರು ಸೇವೆ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Translate »