ಮೈಸೂರು, ಜು. 15(ಆರ್‍ಕೆ)- ಮೈಸೂರಿನ ಮಾನಸಗಂಗೋತ್ರಿಯಲ್ಲಿರುವ ಮೈಸೂರು ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕೆಲ ಹಾಸ್ಟೆಲ್‍ಗಳನ್ನು ಕೋವಿಡ್ ಕೇರ್ ಸೆಂಟರ್ ಆಗಿ ಬಳಸಿ ಕೊಳ್ಳಲು ಬಿಟ್ಟುಕೊಡುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಕುಲಪತಿಗಳಿಗೆ ಸೂಚಿಸಿದ್ದಾರೆ.
ಈಗಾಗಲೇ ಮೈಸೂರಿನಲ್ಲಿ ಕೋವಿಡ್ ಸೋಂಕಿ ತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಹಾಗೂ ಸಾವಿನ ಸಂಖ್ಯೆಯೂ ಹೆಚ್ಚುತ್ತಿರುವ ಕಾರಣ, ಮಂಡಕಳ್ಳಿ ಬಳಿಯಲ್ಲಿರುವ ಮುಕ್ತ ವಿಶ್ವವಿದ್ಯಾನಿಲಯದ ಶೈಕ್ಷ ಣಿಕ ಭವನವನ್ನು 530 ಹಾಸಿಗೆ ಸಾಮಥ್ರ್ಯದ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿ ಸೌಲಭ್ಯ ಕಲ್ಪಿಸಲಾಗಿದೆ. ಆಸ್ಪತ್ರೆಗಳ ಕೊರತೆ ಉಂಟಾಗಿರುವು ದರಿಂದ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂ ಗಣವನ್ನು 800 ಹಾಸಿಗೆಗಳ ಸೌಲಭ್ಯದೊಂದಿಗೆ ಕೋವಿಡ್ ಕೇರ್ ಸೆಂಟರ್ ಮಾಡಲು ಭರದ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಇದೀಗ ಜಿಲ್ಲಾಡಳಿತವು ಮಾನಸಗಂಗೋತ್ರಿಯಲ್ಲಿರುವ ಮೈಸೂರು ವಿಶ್ವ ವಿದ್ಯಾನಿಲಯ ಮತ್ತು ಮುಕ್ತ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಲಯಗಳನ್ನು ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಬಳಸಿಕೊಳ್ಳಲು ಮುಂದಾಗಿದೆ.
ಈ ಸಂಬಂಧ ‘ಮೈಸೂರು ಮಿತ್ರ’ನಿಗೆ ಪ್ರತಿಕ್ರಿಯೆ ನೀಡಿರುವ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ್, ಹಾಸ್ಟೆಲ್ ನೀಡುವಂತೆ ಜಿಲ್ಲಾಧಿಕಾರಿಗಳು ಕೇಳಿದ್ದಾರೆ. ಆದರೆ ಕಾಲೇಜಿಗೆ ರಜೆ ಇರುವುದರಿಂದ ವಿದ್ಯಾರ್ಥಿಗಳು ಕೊಠಡಿಗಳಿಗೆ ಬೀಗ ಹಾಕಿಕೊಂಡು ಊರಿಗೆ ಹೋಗಿದ್ದಾರೆ. ಅವರು ಬರುವುದು ಆಗಸ್ಟ್ ತಿಂಗಳಿನಲ್ಲಿ ಎಂದರು.
ಅವರು ಬರುವ ಮೊದಲೇ ಬಾಗಿಲು ತೆರೆಯು ವುದು ಹೇಗೆ? ಎಂದು ಯೋಚಿಸುತ್ತಿದ್ದೇವೆ. ಹಾಸ್ಟೆಲ್ ಮುಖ್ಯಸ್ಥರು, ವಾರ್ಡನ್‍ಗಳನ್ನು ಕರೆದು ಮಾತನಾ ಡುತ್ತಿದ್ದೇನೆ. ಗೌತಮ ಹಾಸ್ಟೆಲ್‍ನಲ್ಲಿ 120 ಹಾಸಿಗೆ ಹಾಕ ಬಹುದಾಗಿದ್ದು ಅದನ್ನು ಸ್ವಚ್ಛಗೊಳಿಸಿ ಬಿಟ್ಟುಕೊಡಲು ತಯಾರಿ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಕೋವಿಡ್ ಸೋಂಕಿತರ ಚಿಕಿತ್ಸೆಗೆ ಜಿಲ್ಲಾಡಳಿತ ದೊಂದಿಗೆ ಸಹಕರಿಸುವುದು ನಮ್ಮ ಜವಾಬ್ದಾರಿ ಯಾಗಿದ್ದು, ಆ ನಿಟ್ಟಿನಲ್ಲಿ ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಪ್ರೊ.ಹೇಮಂತ್‍ಕುಮಾರ್ ತಿಳಿಸಿದ್ದಾರೆ.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲ ಪತಿ ಪ್ರೊ.ವಿದ್ಯಾಶಂಕರ್ ‘ಮೈಸೂರು ಮಿತ್ರ’ನೊಂದಿಗೆ ಮಾತನಾಡಿ, ನಮ್ಮಲ್ಲಿರುವ ಹಾಸ್ಟೆಲ್ ಕಟ್ಟಡಗಳು ಖಾಲಿ ಇರುವುದರಿಂದ ಕೋವಿಡ್ ಕೇರ್ ಸೆಂಟ ರ್‍ಗೆ ಬಿಟ್ಟುಕೊಡುತ್ತಿದ್ದೇವೆ ಎಂದರು.
ಮಹಿಳೆಯರ ವಿದ್ಯಾರ್ಥಿನಿಲಯದಲ್ಲಿ ಸುಮಾರು 80 ಹಾಗೂ ಪುರುಷರ ವಿದ್ಯಾರ್ಥಿನಿಲಯದಲ್ಲಿ 120ಕ್ಕೂ ಹೆಚ್ಚು ಹಾಸಿಗೆಗಳನ್ನು ಹಾಕಬಹುದಾಗಿದ್ದು, ಶೌಚಾ ಲಯ, ಸ್ನಾನಗೃಹ ಸೌಲಭ್ಯವಿರುವುದರಿಂದ ಜಿಲ್ಲಾಧಿಕಾರಿ ಗಳ ಸುಪರ್ದಿಗೆ ಎರಡು ಕಟ್ಟಡಗಳನ್ನು ಬಿಟ್ಟು ಕೊಡುತ್ತಿದ್ದೇವೆ ಎಂದು ಅವರು ನುಡಿದರು.
ಕೊರೊನಾ ಸಂಕಷ್ಟದಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸುವುದು ನಮ್ಮ ಜವಾಬ್ದಾರಿಯಾಗಿರುವುದರಿಂದ ವಿಜಯ ನಗರ 3ನೇ ಹಂತದಲ್ಲಿರುವ ಮುಕ್ತ ವಿವಿ ಕಟ್ಟಡ ವನ್ನು ಬಿಟ್ಟುಕೊಡಲು ಮುಂದಾಗಿದ್ದು, ಸ್ವಚ್ಛತೆ, ಶೌಚಾ ಲಯ, ಸ್ನಾನಗೃಹಗಳನ್ನು ಸಜ್ಜುಗೊಳಿಸಲಾಗುತ್ತಿದೆ ಎಂದೂ ಪ್ರೊ.ವಿದ್ಯಾಶಂಕರ್ ತಿಳಿಸಿದರು.