ಫೆ.6, ಮೈಸೂರು ಜಿಪಂ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಿಗದಿ
ಮೈಸೂರು

ಫೆ.6, ಮೈಸೂರು ಜಿಪಂ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಿಗದಿ

January 31, 2019

ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಫೆ.6ರಂದು ಚುನಾವಣೆ ನಡೆಸಲು ನಿಗದಿಯಾಗಿದ್ದು, ಅದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಪಂ ಸಿಇಓ ಕೆ.ಜ್ಯೋತಿ ಇಂದಿಲ್ಲಿ `ಮೈಸೂರು ಮಿತ್ರ’ನಿಗೆ ತಿಳಿಸಿದರು. ಈ ಸಂಬಂಧ ಈಗಾಗಲೇ ಜಿಪಂನ ಪಕ್ಷವಾರು ಸದಸ್ಯರ ಪಟ್ಟಿಯನ್ನು ಪ್ರಾದೇಶಿಕ ಆಯುಕ್ತರ ಕಚೇರಿಗೆ ಕಳುಹಿಸಲಾಗಿದೆ. ಅಲ್ಲದೆ ಪಂಚಾಯಿತಿಯ ಎಲ್ಲಾ ಸದಸ್ಯರಿಗೂ ಚುನಾವಣೆಯ ನೋಟೀಸು ಕಳುಹಿಸಲಾಗಿದೆ ಎಂದು ಹೇಳಿದರು. ನಯೀಮಾ ಸುಲ್ತಾನಾ ಮತ್ತು ಕೆ.ನಟರಾಜು ಅವರ ರಾಜೀನಾಮೆಯಿಂದಾಗಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ತೆರವಾಗಿದೆ. ಹೀಗಾಗಿ ಫೆ.6ರಂದು ಚುನಾವಣೆ ನಿಗದಿಯಾಗಿದೆ.

Translate »